Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!
Team Udayavani, Jan 13, 2025, 5:15 PM IST
ಮುಂಬೈ: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ವಿದೇಶಿ ಬಂಡವಾಳದ ಹೊರಹರಿವು, ಟ್ರಂಪ್ ನೀತಿಯ ಪರಿಣಾಮ ಸೋಮವಾರ (ಜ.13) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,048.90 ಅಂಕಗಳಷ್ಟು ಭಾರೀ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದ್ದು, ಹೂಡಿಕೆದಾರರು ಕೋಟ್ಯಂತರ ರೂ. ಕಳೆದುಕೊಂಡಂತಾಗಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕ 1,049 ಅಂಕಗಳಷ್ಟು ಕುಸಿತದೊಂದಿಗೆ 76,330.01 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 345.55 ಅಂಕಗಳಷ್ಟು ಇಳಿಕೆಯೊಂದಿಗೆ 23,100 ಅಂಕಗಳಿಗೆ ಕುಸಿದಿದೆ.
ಸಂವೇದಿ ಸೂಚ್ಯಂಕ, ನಿಫ್ಟಿ ಕುಸಿತದಿಂದ ಟ್ರೆಂಟ್, ಅದಾನಿ ಎಂಟರ್ ಪ್ರೈಸಸ್, ಭಾರತ್ ಎಲೆಕ್ಟ್ರಾನಿಕ್ಸ್, ಬಿಪಿಸಿಎಲ್, ಅದಾನಿ ಪೋರ್ಟ್ಸ್,ಕ್ಯಾಪಿಟಲ್ ಗೂಡ್ಸ್, ಪವರ್, ಪಿಎಸ್ ಯು ಷೇರುಗಳ ಮೌಲ್ಯ ಕುಸಿತ ಕಂಡಿದೆ. ಮತ್ತೊಂದೆಡೆ ಟಿಸಿಎಸ್, ಇಂಡಸ್ ಇಂಡ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು ಎಚ್ ಯುಎಲ್ ಷೇರುಗಳು ಲಾಭಗಳಿಸಿದೆ.
ಷೇರುಪೇಟೆ ವಹಿವಾಟಿನಲ್ಲಿ 1000ಕ್ಕೂ ಅಧಿಕ ಅಂಕಗಳ ಕುಸಿತದಿಂದಾಗಿ ಹೂಡಿಕೆದಾರರ 5 ಲಕ್ಷ ಕೋಟಿ ರೂಪಾಯಿ ಹಣ ಕರಗಿಹೋದಂತಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಮತ್ತೊಂದೆಡೆ ಕಚ್ಚಾ ತೈಲ ಬೆಲೆ ಶೇ.2ರಷ್ಟು ಏರಿಕೆ ಕಂಡಿರುವುದು ಷೇರುಪೇಟೆ ವಹಿವಾಟಿನ ಮೇಲೆ ಪರಿಣಾಮ ಬೀರಿರುವುದಾಗಿ ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
MUST WATCH
ಹೊಸ ಸೇರ್ಪಡೆ
Parvathy Movie: ಪಾರು ಪಾರ್ವತಿಯ ಕಾರ್ಬಾರು
Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ
Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.