ಅಪಘಾತದ ಸಂತ್ರಸ್ತರಿಗೆ ನೆರವಾದರೆ 25,000ರೂ. ಬಹುಮಾನ: ಗಡ್ಕರಿ
Team Udayavani, Jan 14, 2025, 6:39 AM IST
ಹೊಸದಿಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವ ಪರೋಪಕಾರಿಗಳಿಗೆ 25,000ರೂ. ಬಹುಮಾನ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ನಾಗಪುರದಲ್ಲಿ ರಸ್ತೆ ಸುರಕ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಪಘಾತವಾದಾಗ ಮೊದಲ 1 ಗಂಟೆ ನಿರ್ಣಾಯಕವಾಗಿದ್ದು, ಆ ಅವಧಿಯಲ್ಲಿ ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಸಾಗಿಸುವ ವ್ಯಕ್ತಿಗೆ ಈಗ ನೀಡುತ್ತಿರುವ 5 ಸಾವಿರ ರೂ. ಬಹುಮಾನ ಸಾಲುತ್ತಿಲ್ಲ. ಹೀಗಾಗಿ ಇವರಿಗೆ 25 ಸಾವಿರ ರೂ. ನೀಡಲಾಗುವುದು ಎಂದರು. ಅಪಘಾತಗಳಲ್ಲಿ ಗಾಯಗೊಂಡವರಿಗೆ ಮೊದಲ 7 ದಿನಗಳವರೆಗೆ 1.5 ಲಕ್ಷ ರೂ.ವರೆಗಿನ ಆಸ್ಪತ್ರೆ ವೆಚ್ಚವನ್ನು ಸಹ ಕೇಂದ್ರ ಸರಕಾರ ಭರಿಸಲಿದೆ. ಇದು ರಾಜ್ಯ ಹೆದ್ದಾರಿಗಳಲ್ಲಿ ಗಾಯಗೊಂಡರೂ ಅನ್ವಯಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbh Mela: ಮೊದಲ ಶಾಹಿ ಸ್ನಾನ: 3.5 ಕೋಟಿ ಮಂದಿ ಭಾಗಿ; ಎರಡನೇ ಶಾಹಿಸ್ನಾನ ಜ.29ಕ್ಕೆ ನಿಗದಿ
Narendra Modi: ಭೂಕಂಪದ ಮುನ್ನೆಚ್ಚರಿಕೆ ವ್ಯವಸ್ಥೆ ಅಭಿವೃದ್ಧಿಪಡಿಸಲು ಮೋದಿ ಕರೆ
TTD: ತಿರುಪತಿ ದೇಗುಲದಲ್ಲಿ ಅರ್ಧ ಕೆ.ಜಿ. ಚಿನ್ನ ಕಳವು: ನೌಕರನ ಬಂಧನ
Ayodhya Ram: ರಾಜಕೀಯಕ್ಕೆ ರಾಮನ ಬಳಸದಿರಿ: ಭಾಗವತ್‌ಗೆ ರಾವತ್ ತಿರುಗೇಟು
Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ
MUST WATCH
ಹೊಸ ಸೇರ್ಪಡೆ
Kumbh Mela: ಮೊದಲ ಶಾಹಿ ಸ್ನಾನ: 3.5 ಕೋಟಿ ಮಂದಿ ಭಾಗಿ; ಎರಡನೇ ಶಾಹಿಸ್ನಾನ ಜ.29ಕ್ಕೆ ನಿಗದಿ
Narendra Modi: ಭೂಕಂಪದ ಮುನ್ನೆಚ್ಚರಿಕೆ ವ್ಯವಸ್ಥೆ ಅಭಿವೃದ್ಧಿಪಡಿಸಲು ಮೋದಿ ಕರೆ
TTD: ತಿರುಪತಿ ದೇಗುಲದಲ್ಲಿ ಅರ್ಧ ಕೆ.ಜಿ. ಚಿನ್ನ ಕಳವು: ನೌಕರನ ಬಂಧನ
Ayodhya Ram: ರಾಜಕೀಯಕ್ಕೆ ರಾಮನ ಬಳಸದಿರಿ: ಭಾಗವತ್‌ಗೆ ರಾವತ್ ತಿರುಗೇಟು
Editorial: ಅಪಘಾತ ಗಾಯಾಳು ರಕ್ಷಕರಿಗೆ ನೆರವು ಹೆಚ್ಚಳ ಶ್ಲಾಘನೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.