Congress Meeting: ಸಿಎಂ ಸಿದ್ದರಾಮಯ್ಯ “ತ್ಯಾಗ’ದ ಮಾತು ಚರ್ಚೆಗೆ ಗ್ರಾಸ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತ್ಯಾಗ ಆದರ್ಶ ಎಂದ ಮುಖ್ಯಮಂತ್ರಿ
Team Udayavani, Jan 14, 2025, 7:26 AM IST
ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ವೈರಾಗ್ಯದ ಮಾತುಗಳನ್ನಾಡಿದ್ದರು. ಈಗ ಸಿಎಂ ಸಿದ್ದರಾಮಯ್ಯ “ಹುದ್ದೆ ತ್ಯಾಗ’ದ ಮಾತುಗಳನ್ನಾಡಿ ಊಹಾಪೋಹಕ್ಕೆ ಆಹಾರ ಒದಗಿಸಿದ್ದಾರೆ. ಅದರಲ್ಲೂ ಅಧಿಕಾರ ಹಸ್ತಾಂತರದ ಮಾತುಗಳು ಪಕ್ಷದಲ್ಲಿ ಬಲವಾಗಿ ಕೇಳಿಬರುತ್ತಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರು ಮಾತುಗಳು ಗಮನಸೆಳೆದಿವೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು. ಈ ತ್ಯಾಗದ ಮಾತುಗಳು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Los Angeles wildfires: ಒಲಿಂಪಿಕ್ಸ್ ಆಯೋಜನೆಗೆ ಭೀತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.