Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ
ಎಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ: ಆಯುಕ್ತ ಜಿ.ಎಸ್. ಸಂಗ್ರೇಶಿ
Team Udayavani, Jan 14, 2025, 7:40 AM IST
ಬೆಳಗಾವಿ: ರಾಜ್ಯದಲ್ಲಿ ಜಿ.ಪಂ., ತಾ.ಪಂ. ಚುನಾವಣೆಗೆ ಸಿದ್ಧತೆ ನಡೆದಿದ್ದು, ಎಪ್ರಿಲ್, ಮೇ ತಿಂಗಳಿನಲ್ಲಿ ಚುನಾವಣೆ ನಡೆಸಲಾಗುವುದು. ಇವಿಎಂ ಹ್ಯಾಕ್ ಗೊಂದಲ ಮೂಡಿರುವುದರಿಂದ ಮತಪತ್ರದಲ್ಲಿ ಮತದಾನ ನಡೆಸಲಾಗುವುದು ಎಂದು ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದರು.
ರಾಜ್ಯದ 31 ಜಿಲ್ಲೆಗಳ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 18 ವರ್ಷ ತುಂಬಿದ ಮತದಾರರನ್ನು ಪಟ್ಟಿಯಲ್ಲಿ ಸೇರಿಸುವ ಕಾರ್ಯ ನಡೆದಿದೆ. ಜಿಲ್ಲಾ ಪುನರ್ ವಿಂಗಡಣ ಆಯೋಗದ ವರದಿ ಹಾಗೂ ಇನ್ನಿತರ ಕಾರಣಗಳಿಂದಾಗಿ ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದ್ದು, ಶೀಘ್ರವೇ ಚುನಾವಣೆ ನಡೆಸಲಾಗುವುದು. ಸಂಬಂಧಪಟ್ಟ ಇಲಾಖೆಗಳಿಗೆ ಮೀಸಲಾತಿ ಪಟ್ಟಿ ಕೊಡಲು ತಿಳಿಸಲಾಗಿದ್ದು, ಅವು ಲಭ್ಯವಾದ ಅನಂತರ ಎಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಚುನಾವಣ ದಿನಾಂಕ ಘೋಷಣೆಯಾಗಿ ಮತಪತ್ರಗಳನ್ನು ಹಿಂಪಡೆಯುವ ದಿನಾಂಕದವರೆಗೆ 18 ವರ್ಷ ತುಂಬಿದವರು ಮತದಾರರಾಗಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಭ್ರಷ್ಟಾಚಾರ ಮುಕ್ತ ಚುನಾವಣೆ ನಡೆಸಲು ಎಲ್ಲರೂ ಸಹಕರಿಸಬೇಕು. ಈ ನಿಟ್ಟಿನಲ್ಲಿ ಆಯೋಗವೂ ಕಟ್ಟುನಿಟ್ಟಿನ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳೇ ಚುನಾವಣ ಅಧಿಕಾರಿ. ತಾಲೂಕುಗಳಲ್ಲಿ ತಹಶೀಲ್ದಾರ್‌ಗಳು ಚುನಾವಣ ಅಧಿಕಾರಿಗಳಾಗಿರುವುದರಿಂದ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ ಅವರೊಂದಿಗೆ ಚರ್ಚಿಸಿ ಚುನಾವಣೆಗಳು ಸುಗಮವಾಗಿ ಜರುಗುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಮತಪತ್ರ ಬಳಕೆ
ರಾಜ್ಯ ಚುನಾವಣ ಆಯೋಗ ಸ್ವತಂತ್ರವಾಗಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳಂತೆ ಚುನಾವಣೆ ನಡೆಸಲಾಗುವುದು. ವಿದ್ಯುನ್ಮಾನ ಮತಯಂತ್ರಗಳ ಕುರಿತು ಅನೇಕ ಟೀಕೆಗಳು ಕೇಳಿ ಬರುತ್ತಿದ್ದು, ಜನರಲ್ಲಿ ಮೂಡಿರುವ ಸಂಶಯಗಳನ್ನು ಹೊಗಲಾಡಿಸಲು ಜಾಗೃತಿ ಕಾರ್ಯ ನಡೆದಿದೆ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಮನವೊಲಿಸಿ ಜಿ.ಪಂ., ತಾ.ಪಂ. ಚುನಾವಣೆಗಳಲ್ಲಿ ಮತಪತ್ರ ಬಳಸಲಾಗುವುದು. ಇವಿಎಂ ಹ್ಯಾಕ್ ಮಾಡಲಾಗುತ್ತಿದೆ ಎಂಬ ಸಂಶಯವನ್ನು ತಿರಸ್ಕರಿಸಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ
School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
MUST WATCH
ಹೊಸ ಸೇರ್ಪಡೆ
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ
School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.