ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್
Team Udayavani, Jan 14, 2025, 3:06 AM IST
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನ ಕೈಗೊಳ್ಳಲು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದರು.
ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್‌ಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕೆಂದು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.