Discrimination: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯ: ಸಿಎಂ ಕಿಡಿ
ಜಿಎಸ್‌ಟಿ ಹೆಚ್ಚು ಪಾವತಿಸಿದರೂ ರಾಜ್ಯಕ್ಕೆ ತಾರತಮ್ಯ: ಸಿದ್ದರಾಮಯ್ಯ
Team Udayavani, Jan 14, 2025, 7:10 AM IST
ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಬಿಜೆಪಿ ನಾಯಕರು ದಿಲ್ಲಿಯ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಈ ಸಂಬಂಧ ಅಧಿಕೃತ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ್ಯ? ಕೇಂದ್ರ ಸರಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ 7 ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋ.ರೂ.ಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋ.ರೂ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 5ರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇ. 8.4ರಷ್ಟಿದೆ. ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇ. 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಈ ಅನ್ಯಾಯ ಯಾಕೆ ಎಂದು ಪ್ರಶ್ನಿಸಿದ್ದಾರೆ.
2018-19ರಲ್ಲಿ 24.42 ಲಕ್ಷ ರೂ. ಕೋಟಿಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ 46.28 ಲಕ್ಷ ಕೋಟಿ ರೂ. ಆಗಿದೆ. 2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು 46,288 ಕೋಟಿ ರೂ.ಗಳಾಗಿದ್ದರೆ, 2024-25ರಲ್ಲಿ ಇದು 44,485 ಕೋಟಿ ರೂ. ಮಾತ್ರ. 6 ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ಕೋ.ರೂ.ಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ 1 ಲಕ್ಷ ಕೋಟಿ ರೂ.ಗಳಷ್ಟಾದರೂ ಆಗಬೇಕಿತ್ತಲ್ಲವೇ ಎಂದು ಆಕ್ಷೇಪಿಸಿದ್ದಾರೆ.
ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತೀ ವರ್ಷ 4.50 ಲಕ್ಷ ಕೋಟಿ ರೂ.ಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರ ತೆರಿಗೆ ಪಾಲಿನ ರೂಪದಲ್ಲಿ 45,000 ಕೋಟಿ ರೂ. ಮತ್ತು ಅನುದಾನವಾಗಿ 15,000 ಕೋಟಿ ರೂ. ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂ.ಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ ಎಂದ್ದಾರೆ.
ಕೇಂದ್ರದ ಗುಲಾಮರು
ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವಿಲ್ಲದೆ ಕೇಂದ್ರ ಸರಕಾರದ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ, ಪಂಥಗಳನ್ನು ಮೀರಿ ಧ್ವನಿ ಎತ್ತಬೇಕಾಗಿದೆ. ಇಂತಹಲ್ಲೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
MUST WATCH
ಹೊಸ ಸೇರ್ಪಡೆ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Los Angeles wildfires: ಒಲಿಂಪಿಕ್ಸ್ ಆಯೋಜನೆಗೆ ಭೀತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.