Threat letter: ಚಿಕ್ಕಮಗಳೂರು ಅಂಚೆ ಕಚೇರಿಯಿಂದ ಸಿ.ಟಿ.ರವಿಗೆ ಬೆದರಿಕೆಗೆ ಪತ್ರ ರವಾನೆ!
Team Udayavani, Jan 14, 2025, 7:21 AM IST
ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಬಂದಿರುವ ಅನಾಮಧೇಯ ಬೆದರಿಕೆ ಪತ್ರ ಚಿಕ್ಕಮಗಳೂರಿನ ವಿಜಯಪುರ ಅಂಚೆ ಕಚೇರಿಯಿಂದ ರವಾನೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸಿ.ಟಿ. ರವಿ ಜಟಾಪಟಿಗೆ ಸಂಬಂಧಿಸಿ ಕಳೆದವಾರ ರವಿ ನಿವಾಸಕ್ಕೆ ಅನಾಮಧೇಯ ಬೆದರಿಕೆ ಪತ್ರ ಬಂದಿತ್ತು. ಪ್ರಕರಣ ಸಂಬಂಧ 15 ದಿನಗಳೊಳಗೆ ಸಚಿವೆ ಲಕ್ಷ್ಮೀ ಹೆಬ್ಟಾಳಕರ್ ಅವರಲ್ಲಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಹತ್ಯೆ ನಡೆಸಲಾಗುವುದು ಎಂದು ಬರೆಯಲಾಗಿತ್ತು. ಈ ಬಗ್ಗೆ ರವಿ ಆಪ್ತ ಸಹಾಯಕ ಚೇತನ್ ಬಸವನಹಳ್ಳಿ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ತನಿಖೆ ನಡೆಸಿದ್ದು ಪತ್ರ ಚಿಕ್ಕಮಗಳೂರು ನಗರದ ವಿಜಯಪುರ ಅಂಚೆ ಕಚೇರಿಯಿಂದ ರವಾನೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯಾರು ರವಾನಿಸಿದ್ದಾರೆಂಬ ಬಗ್ಗೆ ಅಂಚೆ ಕಚೇರಿ ಸುತ್ತಮುತ್ತಲಿನ ಸಿಸಿ ಕೆಮರಾಗಳ ಪರಿಶೀಲನೆ ನಡೆಸುವುದರ ಜತೆಗೆ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet Meeting: ಕೇಂದ್ರ ಅಂಗಾಗ ಕಸಿ ಕಾಯ್ದೆಗೆ ನಾಳೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ?
Objection: ಕುಲಪತಿ ನೇಮಕದಲ್ಲಿ ಬದಲಾವಣೆ: ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಪತ್ರ
ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
MUST WATCH
ಹೊಸ ಸೇರ್ಪಡೆ
Cabinet Meeting: ಕೇಂದ್ರ ಅಂಗಾಗ ಕಸಿ ಕಾಯ್ದೆಗೆ ನಾಳೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ?
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Objection: ಕುಲಪತಿ ನೇಮಕದಲ್ಲಿ ಬದಲಾವಣೆ: ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಪತ್ರ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.