High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
Team Udayavani, Jan 14, 2025, 2:16 PM IST
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೇರಿ ಇತರೆ ವಸ್ತು ಗಳನ್ನು ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳಿಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿದ್ದ ಜಯ ಲಲಿತಾ ಅವರ ಸಹೋದರ ಜಯಕು ಮಾರ್ ಮಕ್ಕಳಾದ ಜೆ.ದೀಪಕ್ ಮತ್ತು ಜೆ.ದೀಪಾ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಗಳನ್ನು ಆಲಿಸಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿ.ಶ್ರೀಶಾ ನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ, ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಮುಂದುವರಿಯಲಿದೆ. ಜಯಲಲಿತಾ ಅವರಿಂದ 7,040 ಗ್ರಾಂ ಚಿನ್ನ, ವಜ್ರ ಖಚಿತ ಆಭರಣ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?
Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?
Congress Dinner Meeting: ಹೈಕಮಾಂಡ್ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?
MUST WATCH
ಹೊಸ ಸೇರ್ಪಡೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.