Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ


Team Udayavani, Jan 14, 2025, 3:12 PM IST

4-mnglr

ಮಂಗಳೂರು: ಸವಣೂರು, ಸುಬ್ರಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದಾರೆ.

ಕಡಬ ತಾಲೂಕು ಕಚೇರಿಯಲ್ಲಿ ಜ.13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್‌ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ.

ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿಎಂ ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಸಂಸದ ತಹಶೀಲ್ದಾರರಿಗೆ ಸೂಚಿಸಿದ್ದಾರೆ.

ಕೋಡಿಂಬಾಳ ರೈಲು ಅಭಿವೃದ್ಧಿಯ ಭರವಸೆ

ಸಂಸದರು ತಾಲೂಕಿನ ಜನತೆಯ ಕುಂದು-ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದ ವೇಳೆ, ಕಡಬ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಂಸದ, ಸಂಬಂಧಪಟ್ಟವರೊಂದಿಗೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.

ಸಂಸದರ ಅಹವಾಲು ಸ್ವೀಕರಿಸುವ ಸಂಧರ್ಭದಲ್ಲಿ ಮಿನಿ ವಿಧಾನ ಸೌದದಲ್ಲಿ ಜನಜಂಗುಳಿ ನೆರೆದಿತ್ತು. ಇದೇ ಸಂಧರ್ಭದಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಜನರನ್ನು ಅಲೆದಾಡಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಬಿ.ಜೆ.ಪಿ ಪ್ರಮುಖರಾದ ಪುಲಸ್ತ್ಯ ರೈ, ಪ್ರಕಾಶ್ ಎನ್.ಕೆ, ಮಧುಸೂದನ್ ಕೊಂಬಾರು, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸುರೇಶ್ ದೆಂತಾರು, ರಮೇಶ ಕಲ್ಪುರೆ, ಆಶೋಕ್ ನೆಕ್ಕರೆ, ವಾಡ್ಯಪ್ಪ ಗೌಡ, ಸದಾಶಿವ ಶೆಟ್ಟಿ ಮಾರಂಗ, ಲಕ್ಷೀಶ ಪೆಲತ್ತಾರು ಸೇರಿದಂತೆ ಹಲವು ಮಂದಿ ಬಿ.ಜೆ.ಪಿ ಪ್ರಮುಖರು, ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Mulki: ಟಿಪ್ಪರ್‌ ಯದ್ವಾತದ್ವಾ ಚಾಲನೆ; ಹಲವರಿಗೆ ಗಾಯ

Mulki: ಟಿಪ್ಪರ್‌ ಯದ್ವಾತದ್ವಾ ಚಾಲನೆ; ಹಲವರಿಗೆ ಗಾಯ

Kaikamba: ಮಟ್ಕಾ ದಾಳಿ, ಇಬ್ಬರ ಬಂಧನ

Kaikamba: ಮಟ್ಕಾ ದಾಳಿ: ಇಬ್ಬರು ಆರೋಪಿಗಳ ಬಂಧನ

Mangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವುMangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವು

Mangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.