Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….


Team Udayavani, Jan 14, 2025, 6:07 PM IST

7-tender-coconut

ಸಾಮಾನ್ಯವಾಗಿ ಎಳನೀರು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಚಳಿಗಾಲದಲ್ಲಿ ಎಳನೀರು ಕುಡಿದರೆ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಹೆಚ್ಚಿನವರು ಬೇಸಿಗೆ ಕಾಲದಲ್ಲಿ ಮಾತ್ರ ಹೆಚ್ಚು ಹೆಚ್ಚು ಎಳನೀರು ಕುಡಿಯುತ್ತಾರೆ. ಆದರೆ, ಚಳಿಗಾಲದಲ್ಲೂ ಎಳನೀರು ಕುಡಿಯುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗುವುದಿಲ್ಲ.

ಎಳನೀರು ಅತ್ಯಂತ ಸುರಕ್ಷಿತ ಮತ್ತು ಕಲಬೆರಕೆಯಿಲ್ಲದ ಪಾನೀಯ. ಎಳನೀರು ದೇಹವನ್ನು ಹೈಡ್ರೇಟ್ ಆಗಿರಲು ಸಹಾಯ ಮಾಡುತ್ತದೆ. ಎಳನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಯಕೃತ್ತು ಆರೋಗ್ಯಕರವಾಗಿರುತ್ತದೆ. ಇದರಲ್ಲಿ ಹೆಚ್ಚು ಪೌಷ್ಟಿಕಾಂಶವಿದೆ ಹಾಗೂ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿದ ನೈಸರ್ಗಿಕ, ಕಡಿಮೆ ಕ್ಯಾಲೋರಿ ಪಾನೀಯವಾಗಿದೆ. ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ದೇಹದಲ್ಲಿ ನಿರ್ಜಲೀಕರಣದ ಸಮಸ್ಯೆ ಶುರುವಾಗುತ್ತದೆ. ಹಾಗಾಗಿ ಕಡಿಮೆ ನೀರನ್ನು ಕುಡಿಯುತ್ತಿದ್ದರೆ, ಪ್ರತಿನಿತ್ಯ ಒಂದು ಎಳನೀರು ಕುಡಿಯುವುದು ಉತ್ತಮ ಅಭ್ಯಾಸ.

ಎಳನೀರು ನೈಸರ್ಗಿಕ ಎಲೆಕ್ಟ್ರೋಲೈಟ್ ಪಾನೀಯವಾಗಿದ್ದು, ಚಳಿಗಾಲದಲ್ಲಿ ನಮಗೆ ಬಾಯಾರಿಕೆ ಇಲ್ಲದಿರುವಾಗಲೂ ದೇಹವನ್ನು ತೇವಾಂಶದಿಂದ ಇಡುತ್ತದೆ. ಕಡಿಮೆ ಕ್ಯಾಲೋರಿ, ಕೊಬ್ಬಿನಂಶವಿರುವ ಎಳನೀರು‌ ಇತರೆ ಜ್ಯೂಸ್ ಗಳಿಗೆ ಹೋಲಿಸಿದರೆ ಉತ್ತಮ ಪರ್ಯಾಯವಾಗಿದೆ. ಇದು ಚಳಿಗಾಲದ ಅವಧಿಯಲ್ಲಿ ಅತಿಯಾಗಿ ತಿನ್ನುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಚಳಿಗಾಲದಲ್ಲಿ ಎಳನೀರು ಸೇವಿಸುವುದರಿಂದಾಗುವ ಇನ್ನೂ ಹೆಚ್ಚಿನ ಪ್ರಯೋಜನಗಳೇನು ತಿಳಿಯಲು ಮುಂದೆ ಓದಿ..

ಹೈಡ್ರೇಶನ್:

ಚಳಿಗಾಲದಲ್ಲಿ ನಿಯಮಿತವಾಗಿ ಎಳನೀರು ಕುಡಿಯಬೇಕು. ಅಗತ್ಯಕ್ಕಿಂತ ಹೆಚ್ಚು ಎಳನೀರು ಕುಡಿಯಬಾರದು. ಎಳನೀರು ಕುಡಿಯುವುದರಿಂದ ದೇಹವನ್ನು ಹೈಡ್ರೆಟ್ ಆಗಿ ಇಡಲು ಸಹಾಯ ಮಾಡುತ್ತದೆ. ಇದರಿಂದ ಚರ್ಮವನ್ನು ಆರೋಗ್ಯವಾಗಿಡಲು ಉತ್ತಮ ಆಯ್ಕೆಯಾಗಿದೆ. ಇದರ ಜೊತೆಗೆ ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಚರ್ಮದ ಬಿರುಕು, ನೆಗಡಿ ಹಾಗೂ ಕೆಮ್ಮಿನಂತಹ ಸಮಸ್ಯೆಗಳನ್ನೂ ಎಳನೀರು ದೂರ ಮಾಡುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ:

ಎಳನೀರು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಎಳನೀರಿನ ನೈಸರ್ಗಿಕ ಕಿಣ್ವಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಸಿಡಿಟಿ, ಹೊಟ್ಟೆನೋವು, ವಾಂತಿ, ಭೇದಿ, ಹೊಟ್ಟೆಯಲ್ಲಿ ಉರಿ, ಕರುಳಿನ ಊತ, ಹುಣ್ಣುಗಳ ಸಮಸ್ಯೆ ಮುಂತಾದ ಸಮಸ್ಯೆಗಳನ್ನು ತಡೆಯುತ್ತದೆ. ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳನ್ನು ಕೂಡಾ ನಿಯಂತ್ರಿಸಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸಲು:

ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಒಂದು ಎಳನೀರಿನಲ್ಲಿ ಸುಮಾರು 600 ಮಿ.ಗ್ರಾಂ. ಪೊಟ್ಯಾಷಿಯಂ ಅಂಶ ಕೂಡಿರುತ್ತದೆ. ಎಳನೀರಿನಲ್ಲಿ ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ನಂತಹ ಜೀವಸತ್ವಗಳು ಮತ್ತು ಖನಿಜಗಳಿವೆ. ಎಳನೀರಿನಲ್ಲಿರುವ ಲಾರಿಕ್ ಆಮ್ಲವು ಆ್ಯಂಟಿಫಂಗಲ್, ಆ್ಯಂಟಿಬ್ಯಾಕ್ಟಿರಿಯಲ್ ಮತ್ತು ಆ್ಯಂಟಿವೈರಲ್ ಗುಣಲಕ್ಷಣಗಳನ್ನು ಹೊಂದಿದ್ದು, ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ಇದರಿಂದ ನೆಗಡಿ, ಕೆಮ್ಮು, ಜ್ವರದಂತಹ ಚಳಿಗಾಲದ ಸಂಬಂಧಿತ ಕಾಯಿಲೆಗಳನ್ನು ಎದುರಿಸಲು ದೇಹಕ್ಕೆ ಸಹಾಯ ಮಾಡುತ್ತದೆ. (ತೆಂಗಿನ ನೀರು ಸಾಮಾನ್ಯ ತಾಪಮಾನದಲ್ಲಿ ಮಾತ್ರ ಇರಬೇಕು)

ಚರ್ಮದ ಆರೋಗ್ಯ:

ಹೆಚ್ಚಿನ ಜನರು ಸಾಮಾನ್ಯವಾಗಿ ಚಳಿಗಾಲದಲ್ಲಿ ಒಣ ತ್ವಚೆಯ ಬಗ್ಗೆ ಚಿಂತಿತರಾಗುತ್ತಾರೆ. ಇದಕ್ಕೆ ಎಳನೀರು ತ್ವಚೆಯನ್ನು ಆರೋಗ್ಯವಾಗಿಡಲು ಉತ್ತಮ ಆಯ್ಕೆಯಾಗಿದೆ. ಎಳನೀರು ಕುಡಿಯುವುದರಿಂದ ತ್ವಚೆಯು ತೇವಾಂಶದಿಂದ ಕೂಡಿರುತ್ತದೆ. ಇದು ನೈಸರ್ಗಿಕ ಹೊಳಪನ್ನು ನೀಡಲು ಕೂಡಾ ಸಹಾಯ ಮಾಡುತ್ತದೆ.

ರಕ್ತದೊತ್ತಡ:

ದಿನಕ್ಕೆ 1-2 ಬಾರಿ ಎಳನೀರು ಕುಡಿಯುತ್ತಿದ್ದರೆ, ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಎಳನೀರಿನಲ್ಲಿ ಬಹಳಷ್ಟು ಪೊಟ್ಯಾಸಿಯಮ್ ಇದ್ದು ಇದು ಆರೋಗ್ಯಕರ ರಕ್ತದೊತ್ತಡ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯ:

ಎಳನೀರು ಕುಡಿಯುವುದರಿಂದ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದನ್ನು ನಿಯಮಿತವಾಗಿ ಕುಡಿಯುವುದರಿಂದ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಹೃದಯಾಘಾತ ಅಥವಾ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಚಳಿಗಾಲದಲ್ಲಿ ಹೃದಯರಕ್ತನಾಳದ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೂಡ ಸಹಾಯ ಮಾಡುತ್ತದೆ.

ಮೂತ್ರಪಿಂಡದ ಆರೋಗ್ಯ:

ಎಳನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಸ್ನಾಯು ಸೆಳೆತ:

ಎಳನೀರಿನಲ್ಲಿ ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಅಂಶವಿದ್ದು, ಇದು ಸ್ನಾಯು ಸೆಳೆತ ಮತ್ತು ನೋವನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಕಡಿಮೆ ದೈಹಿಕ ಚಟುವಟಿಕೆ ಮತ್ತು ನಿರ್ಜಲೀಕರಣದ ಕಾರಣದಿಂದಾಗಿ ಚಳಿಗಾಲದಲ್ಲಿ ಸಾಮಾನ್ಯವಾಗಿರುತ್ತದೆ.

ದೇಹದ ತೂಕ ನಿಯಂತ್ರಣ:

ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಎಳನೀರು ಪ್ರಮುಖ ಪಾತ್ರ ವಹಿಸುತ್ತದೆ. ಚಳಿಗಾಲದಲ್ಲಿ ಎಳನೀರು ಕುಡಿಯುವುದು ತುಂಬಾ ಉಪಯುಕ್ತವಾಗಿದೆ. ತೂಕ ಹೆಚ್ಚಾಗುವ ಆತಂಕವಿದ್ದರೆ ಚಳಿಗಾಲದಲ್ಲಿ ಎಳನೀರು ಕುಡಿಯಬೇಕು. ಇದರಲ್ಲಿರುವ ಕಡಿಮೆ ಕ್ಯಾಲೋರಿ ಅಂಶ ತೂಕ ನಿಯಂತ್ರಣದಲ್ಲಿಡುತ್ತದೆ. ಹೆಚ್ಚು ಸಕ್ಕರೆ ಅಂಶವಿರುವ ಇತರ ಜ್ಯೂಸ್‌ ಗಳಿಗೆ ಹೋಲಿಸಿದರೆ ಎಳನೀರು ಉತ್ತಮ ಆಯ್ಕೆಯಾಗಿದೆ.

ನೈಸರ್ಗಿಕ ಶಕ್ತಿ ವರ್ಧಕ:

ಎಳನೀರು ನೈಸರ್ಗಿಕ ಶಕ್ತಿ ಬೂಸ್ಟರ್ ಆಗಿದ್ದು, ಅದು ಚಳಿಗಾಲದ ಆಲಸ್ಯ ಮತ್ತು ಆಯಾಸವನ್ನು ಎದುರಿಸಲು ಸಹಾಯ ಮಾಡುತ್ತದೆ. ಎಳನೀರು ಚಳಿಗಾಲದಲ್ಲಿ ನೈಸರ್ಗಿಕ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ವಾಸ್ತವವಾಗಿ, ಎಳನೀರಿನಲ್ಲಿರುವ ಕಾರ್ಬೋಹೈಡ್ರೇಟ್ ಅಂಶ ಮತ್ತು ಎಲೆಕ್ಟ್ರೋಲೈಟ್‌ಗಳು ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತವೆ. ಇದು ಸಕ್ರಿಯವಾಗಿರಲು ಮತ್ತು ಚಳಿಗಾಲದಲ್ಲಿ ಆಗಾಗ ಅನುಭವಿಸುವ ಆಲಸ್ಯವನ್ನು ಎದುರಿಸಲು ಉತ್ತಮ ಆಯ್ಕೆಯಾಗಿದೆ.

ದೇಹವನ್ನು ಶುದ್ದೀಕರಿಸಲು:

ಎಳನೀರಿನಲ್ಲಿರುವ ಮೆಗ್ನಿಶಿಯಂ ಮತ್ತು ಕಿಣ್ವಗಳು ದೇಹದಲ್ಲಿರುವ ವಿಷದ ಅಂಶ ತೆಗೆದುಹಾಕುತ್ತದೆ ಮತ್ತು ದೇಹವನ್ನು ಶುದ್ದೀಕರಿಸುತ್ತದೆ.

ಹಿಮೋಗ್ಲೋಬಿನ್‌ಗೆ ಸಹಕಾರಿ:

ಎಳನೀರು ಕುಡಿಯುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚುತ್ತದೆ. ರಕ್ತದ ಕೊರತೆಯು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ಹೀಗಾಗಿ ಎಳನೀರನ್ನು ನಿಯಮಿತವಾಗಿ ಕುಡಿದರೆ ಹಿಮೋಗ್ಲೋಬಿನ್ ಮಟ್ಟ ಹೆಚ್ಚುವುದರರೊಂದಿಗೆ ಕೂದಲು ಉದುರುವ ಸಮಸ್ಯೆಯಿಂದಲೂ ಮುಕ್ತಿ ಪಡೆಯಬಹುದು. ಕುಡಿಯಿರಿ.

ಪ್ರತಿದಿನ ಎಳನೀರು ಸೇವಿಸುವುದರಿಂದ ಚಹಾ, ಕಾಫಿ ಕುಡಿಯುವ ಬಯಕೆ ಕಡಿಮೆಯಾಗುತ್ತದೆ. ಇದರಿಂದ ದೇಹದಲ್ಲಿ ಕೆಫೀನ್ ಅಂಶ ಕಡಿಮೆಯಾಗುತ್ತದೆ.

(ನೀವು ಯಾವುದಾದರೂ ನಿರ್ದಿಷ್ಟ ಕಾಯಿಲೆಗಳಿಂದ ಬಳಲುತ್ತಿದ್ದರೆ, ಎಳನೀರು ಸೇವಿಸುವ ಮೊದಲು ನೀವು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

-ಕಾವ್ಯಶ್ರೀ

ಟಾಪ್ ನ್ಯೂಸ್

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

siddaramaiah

Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sankranti Special: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಸಿಹಿ ಪೊಂಗಲ್‌, ಗೆಣಸಿನ ಹೋಳಿಗೆ

Sankranti Special: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಸಿಹಿ ಪೊಂಗಲ್‌, ಗೆಣಸಿನ ಹೋಳಿಗೆ

23

UV Fusion: ಹೊಸ ಅಧ್ಯಾಯ 2025

22

UV Fusion: ಹೊಸವರ್ಷದ ಹೊಸ್ತಿಲಲ್ಲಿ ನವ ಸಂಕಲ್ಪ ನಮ್ಮದಾಗಲಿ

21

UV Fusion: ಹೊಸ ವರ್ಷದ ಹೊಸ್ತಿಲಲ್ಲಿ ಭರವಸೆಗಳ ಬುತ್ತಿ

20

UV Fusion: ಸಾಧಕರ ಸ್ಫೂರ್ತಿ ವರುಷಕ್ಕೆ ಮುನ್ನುಡಿಯಾಗಲಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

1-cc

Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು

arrested

BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.