Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

ಮುಂದಿನ ಸಂಕ್ರಾಂತಿಯೊಳಗೆ ಜಾರಿಗೆ ಕರವೇ ಆಗ್ರಹ, ಹಳ್ಳಿಯಿಂದ ರಾಜಧಾನಿವರೆಗೆ ಚಳವಳಿ: ನಾರಾಯಣಗೌಡ

Team Udayavani, Jan 15, 2025, 7:20 AM IST

Naryana-Gowda

ಬೆಂಗಳೂರು: ಮುಂದಿನ ವರ್ಷದ ಸಂಕ್ರಾಂತಿಯೊಳಗೆ ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ. 60ರಷ್ಟು ಬರಹಗಳು ಕನ್ನಡದಲ್ಲಿಯೇ ಇರಬೇಕು ಎಂಬುದರ ಸಹಿತ 3 ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಚಳವಳಿ ನಡೆಸುವಂತೆ ಕರವೇ ಕಾರ್ಯಕರ್ತರಲ್ಲಿ ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಬಗೆಯ ಉತ್ಪನ್ನಗಳ ಏಜೆನ್ಸಿಗಳು ಪರಭಾಷಿಕರ ಪಾಲಾಗುತ್ತಿವೆ. ಇದು ಸಾರಾಸಗಟಾಗಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಮತ್ತು ಅಪಮಾನ. ಹೀಗಾಗಿ ಎಲ್ಲ ಉತ್ಪನ್ನಗಳ ಏಜೆನ್ಸಿಗಳು ಕನ್ನಡಿಗರಿಗೇ ಸಿಗಬೇಕು ಅಥವಾ ಈ ಏಜೆನ್ಸಿಗಳಲ್ಲಿ ಕನ್ನಡಿಗರು ಪಾಲುದಾರರಾಗಿರಬೇಕು ಎಂದಿದ್ದಾರೆ.

ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ. 60ರಷ್ಟು ಬರಹಗಳು ಕನ್ನಡದಲ್ಲಿಯೇ ಇರಬೇಕು. ತಾವು ಬಳಕೆ ಮಾಡುವ ವಸ್ತುಗಳ ಹೆಸರೇನು, ಪ್ರಮಾಣವೇನು, ಅವುಗಳ ತಯಾರಿಕೆಗೆ ಏನನ್ನು ಬಳಸಲಾಗಿದೆ ಎಂಬೆಲ್ಲ ವಿಷಯಗಳು ಕನ್ನಡಿಗರಿಗೆ ಕಡ್ಡಾಯವಾಗಿ ಗೊತ್ತಾಗಬೇಕು ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಜತೆಗೆ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಎಲ್ಲ ಬಗೆಯ ರಾಷ್ಟ್ರೀಯ/ ಖಾಸಗಿ/ ಗ್ರಾಮೀಣ /ಸಹಕಾರಿ ಬ್ಯಾಂಕ್‌ಗಳು, ಫೈನಾನ್ಸ್‌ಗಳು, ಚಿನ್ನದ ಅಡಮಾನ ಸಂಸ್ಥೆಗಳು, ಜೀವವಿಮಾ ಸಂಸ್ಥೆಗಳು, ಆರೋಗ್ಯ ವಿಮಾ ಸಂಸ್ಥೆಗಳು ಮತ್ತು ಇತರ ಯಾವುದೇ ಸ್ವರೂಪದ ಹಣಕಾಸು ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ. 100ರಷ್ಟು ಹುದ್ದೆಗಳು ಮತ್ತು ಇತರೆ ಹುದ್ದೆಗಳಲ್ಲಿ ಶೇ. 60ರಷ್ಟು ಹುದ್ದೆಗಳು ಕನ್ನಡಿಗರಿಗೆ ನೀಡಬೇಕು. ಈ ಎಲ್ಲ ಸಂಸ್ಥೆಗಳು ಬಳಸುವ ಇಲ್ಲವೇ ಗ್ರಾಹಕರಿಗೆ ನೀಡುವ ಎಲ್ಲ ದಾಖಲೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು ಎಂದು ನಾರಾಯಣಗೌಡ ಆಗ್ರಹಿಸಿದ್ದಾರೆ.

ಹಳ್ಳಿಯಿಂದ ರಾಜಧಾನಿವರೆಗೆ ಚಳವಳಿ
ಈ 3 ಹಕ್ಕೊತ್ತಾಯಗಳ ಈಡೇರಿಕೆಗಾಗಿ ಗ್ರಾಮಮಟ್ಟದಿಂದ ರಾಜಧಾನಿಯವರೆಗೆ ದೊಡ್ಡ ಮಟ್ಟದ ಚಳವಳಿ ಹಮ್ಮಿಕೊಳ್ಳಲು ಕಾರ್ಯಕರ್ತರಿಗೆ ಕರೆ ನೀಡುತ್ತೇನೆ ಎಂದು ನಾರಾಯಣಗೌಡ ತಿಳಿಸಿದ್ದಾರೆ. ಕನ್ನಡದ ಸಮಸ್ತ ಜನತೆ ಈ ಚಳವಳಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ. ಈ ಹಕ್ಕೊತ್ತಾಯಗಳ ಅನುಷ್ಠಾನಕ್ಕೆ ಕೇಂದ್ರ ಸರಕಾರ ಅಥವಾ ರಾಜ್ಯ ಸರಕಾರ ಸೂಕ್ತ ಕಾಯ್ದೆ ರೂಪಿಸಬೇಕು. ಶಾಸನಬದ್ಧವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸೋಣ. ಜತೆಗೆ ಮುಂದಿನ ಮಕರ ಸಂಕ್ರಾಂತಿಯೊಳಗೆ ಈ ಹಕ್ಕೊತ್ತಾಯಗಳು ಈಡೇರುವಂತೆ ನೋಡಿಕೊಳ್ಳೋಣ ಎಂದಿದ್ದಾರೆ.

ಟಾಪ್ ನ್ಯೂಸ್

1-ssss

ODI;ಸ್ಪೋಟಕ ಶತಕ ಸಿಡಿಸಿದ ನಾಯಕಿ ಸ್ಮೃತಿ: ಟೀಮ್ ಇಂಡಿಯಾ ದಾಖಲೆ ಮೊತ್ತ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

11-betel-leaf-1

Betel leaf: ಮೈಸೂರ ಚಿಗುರೆಲೆ

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-ssss

ODI;ಸ್ಪೋಟಕ ಶತಕ ಸಿಡಿಸಿದ ನಾಯಕಿ ಸ್ಮೃತಿ: ಟೀಮ್ ಇಂಡಿಯಾ ದಾಖಲೆ ಮೊತ್ತ

13-uv-fusion

Bharatanatyam: ನಾಟ್ಯಗಳ ರಾಣಿ ಭರತನಾಟ್ಯ

12-uv-fusion

Education: ಮಾನವನ ಸುಸ್ಥಿರತೆಗೆ ಶಿಕ್ಷಣ ಮೂಲ ಮಂತ್ರ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.