Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
ಕಳೆದ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.
Team Udayavani, Jan 15, 2025, 1:22 PM IST
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಸಚಿವ ಮನೀಶ್ ಸಿಸೋಡಿಯಾ ವಿರುದ್ಧದ ಪ್ರಾಸಿಕ್ಯೂಷನ್ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದ್ದು, ಇದರಿಂದ ಕೇಜ್ರಿವಾಲ್ ಹಾಗೂ ಸಿಸೋಡಿಯಾ ಚುನಾವಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಂತಾಗಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಟ್ ಗೆ (ಕಾನೂನು ಕ್ರಮ) ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅನುಮತಿ ನೀಡಿದ ನಂತರ ಸಚಿವಾಲಯ ಅಂಕಿತ ನೀಡಿರುವುದಾಗಿ ವರದಿ ತಿಳಿಸಿದೆ.
ಜನಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೊದಲು ಜಾರಿ ನಿರ್ದೇಶನಾಲಯ ಮೊದಲು ಸಂಬಂಧಪಟ್ಟವರಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಕಳೆದ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.
ಲಿಕ್ಕರ್ ಲಾಬಿಯಲ್ಲಿ ಕಿಕ್ ಬ್ಯಾಕ್ (ಲಂಚ) ಪಡೆಯಲು ಅನುಕೂಲವಾಗುವಂತೆ ಮಾಜಿ ಸಿಎಂ ಕೇಜ್ರಿವಾಲ್ ಹಾಗೂ ಸಿಸೋಡಿಯಾ ಅಬಕಾರಿ ನೀತಿಯನ್ನು ಜಾರಿಗೊಳಿಸಿರುವುದಾಗಿ ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.