Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
Team Udayavani, Jan 15, 2025, 8:10 PM IST
ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಬುರ್ಗಿಯ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಸೇರಿ ಐವರನ್ನು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ ನೀಡಿ ಬುಧವಾರ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಟೆಂಡರ್ ವಂಚನೆ ಮತ್ತು ಕೊಲೆ ಬೆದರಿಕೆ ಹಿನ್ನಲೆ ನೊಂದು ಸಚಿನ್ ಡಿ. 26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಪನೂರು ಸೇರಿ ಎಂಟು ಜನರ ಹೆಸರು ಉಲ್ಲೇಖಿಸಿದ್ದ. ಹಾಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಕಪನೂರ್ ಮತ್ತು ಗ್ಯಾಂಗ್‌ನ್ನು ಜ. 10ರಂದು ನ್ಯಾಯಾಲಯದ ಎದುರು ಹಾಜರು ಪಡಿಸಿತ್ತು.
ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ರಾಜು ಕಪನೂರ, ನಂದಕುಮಾರ ನಾಗಭುಜಂಗಿ, ಗೋರಖನಾಥ, ರಾಮನಗೌಡ ಪಾಟೀಲ ಮತ್ತು ಸತೀಶ ಅವರನ್ನು ಐದು ದಿನ ಕಸ್ಟಡಿಗೆ ನೀಡಿದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನಲೆ ಬುಧವಾರ ಐದು ಜನರನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ 9 ದಿನ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಕಪನೂರ್ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಎರಡು ಕಡೆಗಳಿಂದ ವಾದ ಆಲಿಸಿದ ನ್ಯಾಯಾಧೀಶರು ನಂತರ ಮೂರು ದಿನ ಕಸ್ಟಡಿಗೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.