Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ
Team Udayavani, Jan 15, 2025, 11:40 PM IST
ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂಬ ನಾಮಕರಣದ 50 ವರ್ಷಗಳ ಹಿನ್ನೆಲೆಯಲ್ಲಿ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಜ. 17ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು.
ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ, ಯಕ್ಷಗಾನ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಚಿವರಾದ ದಿನೇಶ್ ಗುಂಡೂರಾವ್, ಶಿವರಾಜ ಎಸ್. ತಂಗಡಗಿ ಭಾಗವಹಿಸುವರು. ಸಂತ ಅಲೋಶಿಯಸ್ ಕಾಲೇಜು ಆವರಣದಿಂದ ವಿವಿಧ ಅಕಾಡೆಮಿಗಳ ಕಲಾ ತಂಡಗಳಿಂದ ಸಂಜೆ 4.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಅಲ್ವಾರಿಸ್, ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್, ಜಿ.ಪಂ. ಸಿಇಒ ಡಾ| ಆನಂದ್, ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಉಪಸ್ಥಿತರಿದ್ದರು.
ಸಿಎಂ ಕಾರ್ಯಕ್ರಮ ವಿವರ
ಜ. 17ರ ಬೆಳಗ್ಗೆ 11.30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಅವರು ಅನಂತರ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ, ಮಧ್ಯಾಹ್ನ 12.15ಕ್ಕೆ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ, ಸಂಜೆ 5 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನ ಸಮಾರಂಭದಲ್ಲಿ ಭಾಗಿಯಾಗಿ ರಾತ್ರಿ 8 ಗಂಟೆಗೆ ನಿರ್ಗಮಿಸುವರು.
ಸಚಿವ ದಿನೇಶ್ ಗುಂಡೂರಾವ್ ಪ್ರವಾಸ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಜ.17, 18ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಿಎಂ ಕಾರ್ಯಕ್ರಮದಲ್ಲಿ ಭಾಗವಹಿ ಸುವುದಲ್ಲದೆ 3 ಗಂಟೆಗೆ ಮೂಡುಬಿದಿರೆಯಲ್ಲಿ ಹಕ್ಕುಪತ್ರ ವಿತರಣೆ, 3.45ಕ್ಕೆ ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ ಕಚೇರಿ ಭೇಟಿನೀಡಿ ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜ. 18ರಂದು ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ
Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು
Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್
Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್ ಫ್ರ್ಯಾಂಕ್
Mangaluru: ಕರ್ನಾಟಕ ಕ್ರೀಡಾಕೂಟಕ್ಕೆ 5 ಕೋ.ರೂ.: ಮುಲ್ಲೈ ಮುಗಿಲನ್
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.