Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ
Team Udayavani, Jan 15, 2025, 11:43 PM IST
ಪುತ್ತೂರು: ಒಂದು ವರ್ಷದ ಹಿಂದೆ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿಯು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ವರ್ಷದ ಹಿಂದೆ ಪುತ್ತೂರಿನ ಹೃದಯ ಭಾಗದಲ್ಲಿ ರಾಜಕೀಯ ನಾಯಕರ ಫೆÉಕ್ಸ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ ಹರ್ಷಿತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ದೌರ್ಜನ್ಯಕ್ಕೆ ಒಳಗಾಗಿದ್ದ ಪುರುಷರಕಟ್ಟೆಯ ಅವಿನಾಶ್ ಮತ್ತು ಇತರರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಪೊಲೀಸರ ದೌರ್ಜನ್ಯದ ವಿರುದ್ಧ ದೂರು ನೀಡಿದ್ದರು. ಪ್ರಕರಣದ ತನಿಖೆಗಾಗಿ ಉಡುಪಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನು ನೇಮಿಸಲಾಗಿತ್ತು.
ತನಿಖೆ ನಡೆಸಿದ ಅವರು “ಈ ದೂರು ಸುಳ್ಳಾಗಿದ್ದು ತನಿಖೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆ ಎಂದು, ಕ್ರಮ ಜರಗಿಸತಕ್ಕುದಲ್ಲವೆಂದು ತನಿಖೆ ವೇಳೆ ತಿಳಿದು ಬಂದಿದೆ’ ಎಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ವರದಿ ಸ್ವೀಕರಿಸಿದ ನ್ಯಾಯಾಲಯ ದೂರುದಾರರಿಗೆ ವರದಿಯೊಂದಿಗೆ ನೋಟಿಸ್ ಜಾರಿ ಮಾಡಿದ್ದು, ವರದಿಯನ್ನು ತಿರಸ್ಕರಿಸುವುದಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ಸಂಬಂಧಿತ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಆಕ್ಷೇಪ ವ್ಯಕ್ತಪಡಿಸಬಹುದು ಎಂದು ಸೂಚಿಸಿತ್ತು.
ಈ ವರದಿಗೆ ಸಂಬಂಧಿಸಿ ದೂರುದಾರ ಅವಿನಾಶ್ ಮತ್ತು ಇತರರ ಪರ ನಿವೃತ್ತ ಸರಕಾರಿ ಅಭಿಯೋಜಕ ಉದಯಶಂಕರ, ಚಿನ್ಮಯ್ ರೈ ಈಶ್ವರಮಂಗಲ, ಶಿವಾನಂದ ವಿಟ್ಲ ಅವರು ನ್ಯಾಯಾಲಯಕ್ಕೆ ಅಕ್ಷೇಪಣೆಯ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದೆ. ಆಗ ಕರ್ತವ್ಯದಲ್ಲಿದ್ದ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ ಹರ್ಷಿತ್ ಮಾ. 10ಕ್ಕೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.