Micro Finance: ಮೀಟರ್ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ
ನಂಜನಗೂಡಿನ ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ದಬ್ಬಾಳಿಕೆ
Team Udayavani, Jan 16, 2025, 7:40 AM IST
ಮೈಸೂರು: ಮೈಕ್ರೋ ಫೈನಾನ್ಸ್ ಮತ್ತು ಮೀಟರ್ ಬಡ್ಡಿಯವರ ಕಿರುಕುಳಕ್ಕೆ ಹೆದರಿ ಚಾಮರಾಜನಗರ ಜಿಲ್ಲೆ ಯಳಂದೂರಿನ 80ಕ್ಕೂ ಹೆಚ್ಚು ಕುಟುಂಬಗಳು ಗ್ರಾಮ ತೊರೆದ ಪ್ರಕರಣ ಮಾಸುವ ಮುನ್ನವೇ, ಇದೀಗ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸೇರಿ ಹಲವು ಗ್ರಾಮಗಳ 100ಕ್ಕೂ ಹೆಚ್ಚು ಕುಟುಂಬಗಳು ಮನೆಗೆ ಬೀಗ ಹಾಕಿ ಗ್ರಾಮ ತೊರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಾಲ ಪಡೆದಿರುವ ಕುಟುಂಬಗಳ ಮನೆಗಳ ಮುಂಭಾಗದಲ್ಲಿ ಫಲಕ ಅಳವಡಿಸಿ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಕೆಲವು ಮನೆಗಳಿಗೆ ಬೀಗ ಜಡಿದು ಕುಟುಂಬದವರನ್ನು ಹೊರದಬ್ಬಿರುವ ಘಟನೆಯೂ ನಡೆದಿದೆ ಎನ್ನಲಾಗಿದೆ.
ಸರಕಾರ ಮಧ್ಯಪ್ರವೇಶಿಸಲಿ
ಗ್ರಾಮಶಕ್ತಿ, ಫೈವ್ ಸ್ಟಾರ್, ಎಲ್ ಆ್ಯಂಡ್ ಟಿ, ಬಂಧನ್ ಮೈಕ್ರೋ ಫೈನಾನ್ಸ್‌ಗಳು ಆಮಿಷಗಳನ್ನು ಒಡ್ಡಿ ಬಲವಂತವಾಗಿ ಸಾಲ ಕೊಡುವ ಮೈಕ್ರೋ ಫೈನಾನ್ಸ್‌ಗಳು ಅನಂತರ ವಸೂಲಿಗೆ ಅನ್ಯ ಮಾರ್ಗಗಳನ್ನು ಹಿಡಿದು ಕಿರುಕುಳ ನೀಡುತ್ತಿವೆ. ಇದರ ಬಗ್ಗೆ ಸರಕಾರ ಮಧ್ಯ ಪ್ರವೇಶಿಸಿ ಗ್ರಾಮದಿಂದ ಹೋಗಿರುವವರನ್ನು ಮರಳಿ ಕರೆತರಬೇಕೆಂದು ಮುಖಂಡರಾದ ಶಿರಮಲ್ಲಿ ಹುಚ್ಚಯ್ಯ ಆಗ್ರಹಿಸಿದ್ದಾರೆ.
ಸಾಲ ಕಟ್ಟದೇ ಕುಟುಂಬಗಳು ಗ್ರಾಮಗಳನ್ನು ತೊರೆದಿರುವುದು ನಮಗೆ ಗೊತ್ತಿಲ್ಲ. ಫೈನಾನ್ಸ್ ಹಾವಳಿ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಂಜನಗೂಡು ತಾಲೂಕಿನಲ್ಲಿರುವ ಖಾಸಗಿ ಫೈನಾನ್ಸ್‌ನವರನ್ನು ಕರೆಸಿ ಶೀಘ್ರದಲ್ಲೇ ಸಭೆ ಮಾಡಿ ಹಣ ಕಟ್ಟಲು ಕಾಲಾವಕಾಶ ನೀಡುವಂತೆ ನಿರ್ದೇಶನ ನೀಡಲಾಗುವುದು. -ಶಿವಕುಮಾರ್ ಕಾಸ್ನೂರು, ತಹಶೀಲ್ದಾರ್ ನಂಜನಗೂಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್ ಜಾರಕಿಹೊಳಿ
Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ
MUST WATCH
ಹೊಸ ಸೇರ್ಪಡೆ
Sullia: ಬೆಂಕಿ ಆರಿಸುವವರು ಬೇಕಾಗಿದ್ದಾರೆ!; ಸುಳ್ಯ ಅಗ್ನಿ ಶಾಮಕ ಠಾಣೆಯಲ್ಲಿ ಸಿಬಂದಿ ಕೊರತೆ
Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್
New Scam…ಇದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್ ಎಚ್ಚರಿಕೆ
ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್ ಚೇಜರ್ʼ: ಚಿತ್ರತಂಡ ಶಾಕ್
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.