Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು
Team Udayavani, Jan 16, 2025, 8:24 AM IST
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜ.16ರಂದು ನಡೆದ ಬಗ್ಗೆ ವರದಿಯಾಗಿದೆ.
ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸದೊಳಗೆ ನುಗ್ಗಿದ ದುಷ್ಕರ್ಮಿಗಳು ಚೂರಿಯಿಂದ 2-3 ಬಾರಿ ಇರಿದ ಪರಿಣಾಮ ನಟ ಗಾಯಗೊಂಡಿದ್ದಾರೆ. ಮುಂಬೈ ನ ಲೀಲಾವತಿ ಆಸ್ಪತ್ರೆಯಲ್ಲಿ ನಟ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜ.16ರ ಗುರುವಾರ ಮುಂಜಾನೆ 2:30 ರ ಸುಮಾರಿಗೆ ನಟ ತನ್ನ ಇತರ ಕುಟುಂಬ ಸದಸ್ಯರೊಂದಿಗೆ ತನ್ನ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತದೆ. ಚೂರಿ ಇರಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಕೊಂಡ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ದೇಹದ ಆರು ಕಡೆ ಚಾಕು ಇರಿತದ ಗಾಯ:
ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿ ನಟನಿಗೆ ಚಾಕುವಿನಿಂದ ಆರು ಕಡೆ ಹಲ್ಲೆ ನಡೆಸಿದ್ದು ಬೆನ್ನುಮೂಳೆ ಸೇರಿದಂತೆ ದೇಹದ ಆರು ಕಡೆ ಚಾಕು ಇರಿತದ ಗಾಯಗಳಾಗಿವೆ ಇದರಲ್ಲಿ ಎರಡು ಕಡೆ ಆಳವಾದ ಗಾಯಗಳಾಗಿದ್ದು ಲೀಲಾವತಿ ಆಸ್ಪತ್ರೆ ವೈದ್ಯರು ಸರ್ಜರಿ ನಡೆಸಿದ್ದಾರೆ.
ಮೂವರು ವಶಕ್ಕೆ:
ನಟನ ಮೇಲಿನ ಹಲ್ಲೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್
New Scam…ಇದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್ ಎಚ್ಚರಿಕೆ
ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್ ಚೇಜರ್ʼ: ಚಿತ್ರತಂಡ ಶಾಕ್
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
ISRO ಡಾಕಿಂಗ್ ಪ್ರಯೋಗ ಯಶಸ್ವಿ: ಭಾರತೀಯ ಬಾಹ್ಯಾಕಾಶ ಅನ್ವೇಷಣೆಯಲ್ಲೊಂದು ಬೃಹತ್ ಹೆಜ್ಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.