Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್
Team Udayavani, Jan 16, 2025, 5:22 PM IST
ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಯೊಬ್ಬ ಇರಿತ ನಡೆಸಿದ ಘಟನೆ ಬಳಿಕ ”ಮುಂಬಯಿ ಸುರಕ್ಷಿತವಲ್ಲ” ಎನ್ನುವುದನ್ನು ಸಾಮಾಜಿಕ ತಾಣಗಳಲ್ಲಿ ಹಾಕಿಕೊಳ್ಳಲಾಗುತ್ತಿದೆ ಮಾತ್ರವಲ್ಲದೆ ಮಹಾರಾಷ್ಟ್ರ ಸರಕಾರದ ವಿರುದ್ಧ ವಿಪಕ್ಷಗಳು ಸೇರಿ ಅನೇಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ, ಗೃಹ ಖಾತೆ ನಿಭಾಯಿಸುತ್ತಿರುವ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯೆ ನೀಡಿದ್ದು”ಒಂದು ಘಟನೆ ಬಳಿಕ ಹೀಗೆ ಹೇಳುವುದು ಸರಿಯಲ್ಲ” ಎಂದಿದ್ದಾರೆ.
ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ನಂತರ ಗುರುವಾರ(ಜ16) ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವಿಸ್,” “ದೇಶದ ಎಲ್ಲಾ ಮಹಾನಗರಗಳಲ್ಲಿ ಮುಂಬೈ ಅತ್ಯಂತ ಸುರಕ್ಷಿತವಾಗಿದೆ. ಕೆಲವು ಘಟನೆಗಳು ಅನಿರೀಕ್ಷಿತವಾಗಿ ನಡೆಯುತ್ತವೆ ಮತ್ತು ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ಘಟನೆಯನ್ನು ಆಧರಿಸಿ ಮುಂಬೈ ಅಸುರಕ್ಷಿತ ಎಂದು ಹೇಳುವುದು ಸರಿಯಲ್ಲ. ಇದು ಕಳಂಕ ತರುತ್ತದೆ. ಆದರೆ ಮುಂಬೈನ ಚಿತ್ರಣವನ್ನು ಇನ್ನಷ್ಟು ಸುರಕ್ಷಿತವಾಗಿಸಲು ನಮ್ಮ ಸರಕಾರ ಕೆಲಸ ಮಾಡುತ್ತಿದೆ” ಎಂದರು.
ಮುಂಬೈನಲ್ಲಿ ಸೆಲೆಬ್ರಿಟಿಗಳು ಸುರಕ್ಷಿತವಾಗಿಲ್ಲದಿದ್ದರೆ, ಜನಸಾಮಾನ್ಯರ ಕಥೆಯೇನು ಎಂದು ಅನೇಕ ವಿಪಕ್ಷಗಳ ನಾಯಕರು ಪ್ರಶ್ನೆ ಮಾಡಿದ್ದರು. ಮಾಜಿ ಸಚಿವ ಬಾಬಾ ಸಿದ್ದಿಕಿ ಹ*ತ್ಯೆ, ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗಳನ್ನೂ ನೆನಪಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ
Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Saif Ali Khan: ನಟ ಸೈಫ್ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.