ಅಕ್ರಮ ರೆವಿನ್ಯೂ ಬಡಾವಣೆಗಳೂ ಸಕ್ರಮ


Team Udayavani, Jan 1, 2017, 3:45 AM IST

31BNP-(2).jpg

ಬೆಂಗಳೂರು: ನಗರ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡ ಮನೆಗಳ ಸಕ್ರಮಕ್ಕೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ಇದೀಗ ಬಿಬಿಎಂಪಿ ಸೇರಿದಂತೆ ರಾಜ್ಯದ ಹತ್ತು ಮಹಾನಗರ ಪಾಲಿಕೆ ಹಾಗೂ 60 ಸ್ಥಳೀಯ ಸಂಸ್ಥೆಗಳಲ್ಲಿ ನಕ್ಷೆ ಉಲ್ಲಂ ಸಿ ನಿರ್ಮಿಸಿರುವ ಕಟ್ಟಡಗಳು ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ರಚಿಸಲಾಗಿರುವ ಬಡಾವಣೆಗಳಲ್ಲಿನ ನಿವೇಶನ ಮತ್ತು ಕಟ್ಟಡಗಳನ್ನು ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಸಭೆಯಲ್ಲಿ, ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ-ಸಕ್ರಮ ಕುರಿತು ಸೋಮವಾರ ಅಥವಾ ಮಂಗಳವಾರ ಅಧಿಸೂಚನೆ ಹೊರಡುವ ಸಾಧ್ಯತೆಯಿದ್ದು ನಾಲ್ಕು ತಿಂಗಳ ಕಾಲ ಅರ್ಜಿ ಸಲ್ಲಿಸಲು ಸರ್ಕಾರ ಕಾಲಾವಕಾಶ ಮಾಡಿಕೊಡಲಿದೆ.

ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌, ಪೌರಾಡಳಿತ ಸಚಿವ ಈಶ್ವರ್‌ ಖಂಡ್ರೆ, ಬಿಬಿಎಂಪಿಯಲ್ಲದೆ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಳಗಾವಿ, ಕಲಬುರಗಿ ಹಾಗೂ ಶಿವಮೊಗ್ಗ ಪಾಲಿಕೆಗಳ ವ್ಯಾಪ್ತಿ ಮತ್ತು 60 ನಗರಸಭೆ, ಪುರಸಭೆಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ.

ನಕ್ಷೆ ಉಲ್ಲಂಘನೆಯಡಿ ನಿರ್ಮಾಣಗೊಂಡಿರುವ ವಸತಿ ಕಟ್ಟಡಗಳ ಶೇ.50ರಷ್ಟು ಹಾಗೂ ವಾಣಿಜ್ಯ ಕಟ್ಟಡಗಳ ಶೇ.25ರಷ್ಟು ಅಕ್ರಮವನ್ನು ಸಕ್ರಮಗೊಳಿಸಿಕೊಳ್ಳಬಹುದಾಗಿದೆ. ಅದೇ ರೀತಿ ರೆವಿನ್ಯೂ ಬಡಾವಣೆಗಳಲ್ಲಿನ ನಿವೇಶನ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಬಹುದು. ಶೇ.100ರಷ್ಟು ಅಕ್ರಮ ಇದ್ದರೆ ಸಕ್ರಮವಾಗದು, ತೆರವುಗೊಳಿಸಲೇಬೇಕು ಎಂದು ವಿವರಿಸಿದರು.

ಸದ್ಯದಲ್ಲೇ ಈ ಕುರಿತು ಅಧಿಸೂಚನೆ ಹೊರಬೀಳಲಿದ್ದು, ಮರುದಿನದಿಂದಲೇ ಅರ್ಜಿ ವಿತರಣೆ ಪ್ರಾರಂಭವಾಗಲಿದೆ. ಆನ್‌ಲೈನ್‌ ಹಾಗೂ ಲಿಖೀತ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. 2013ರಲ್ಲಿ ಜಾರಿಗೆ ತಂದಿರುವ ಕಾನೂನಿನ ಪ್ರಕಾರವೇ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಆಗ ವಿಧಿಸಿರುವ ದಂಡದ ಪ್ರಕಾರವೇ ಪಾವತಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಒಂದೊಮ್ಮೆ ರಾಜ್ಯ ಸರ್ಕಾರ ಸರ್ಕಾರ ನೀಡುವ ಕಾಲಾವಕಾಶದೊಳಗೆ ಅಕ್ರಮ- ಸಕ್ರಮ ಮಾಡಿಸಿಕೊಳ್ಳದಿದ್ದರೆ ನಂತರ ಯಾವುದೇ ಮುಲಾಜಿಲ್ಲದೆ ಕಟ್ಟಡಗಳ ತೆರವು ಕಾರ್ಯ ನಡೆಯಲಿದೆ ಎಂದು ಹೇಳಿದರು.

ರೆವಿನ್ಯೂ ಬಡಾವಣೆಗಳ ನಿವೇಶನ ಹಾಗೂ ಅದರಲ್ಲಿನ ಕಟ್ಟಡಗಳ ಸಕ್ರಮಕ್ಕೆ ಸಂಬಂಧಿಸಿದಂತೆ ಎಷ್ಟೇ ದೊಡ್ಡ ನಿವೇಶನ ಇದ್ದರೂ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ, ಪ್ರದೇಶ ಮತ್ತು ವಿಸ್ತೀರ್ಣದ ಆಧಾರದ ಮೇಲೆ ದಂಡ ಕಟ್ಟಬೇಕಾಗುತ್ತದೆ. 2013ರ ಅಕ್ಟೋಬರ್‌ 19ಕ್ಕೂ ಮೊದಲು ನಿಯಮ ಉಲ್ಲಂ ಸಿ ಕಟ್ಟಿದ ಕಟ್ಟಡ ಮತ್ತು ಅಕ್ರಮ ಬಡಾವಣೆಗಳಲ್ಲಿನ ನಿವೇಶನಗಳ ಸಕ್ರಮಕ್ಕೆ ಯೋಜನೆ ಅನ್ವಯ ಆಗುತ್ತದೆ ಎಂದು ತಿಳಿಸಿದರು.

ಸರ್ಕಾರಿ ಜಮೀನು, ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಪ್ರದೇಶ, ಆಟದ ಮೈದಾನ, ಕೆರೆ, ರಾಜಕಾಲುವೆ, ಉದ್ಯಾನವನದಲ್ಲಿ ನಿರ್ಮಾಣಗೊಂಡಿರುವ ರೆವಿನ್ಯೂ ಬಡಾವಣೆಗಳಲ್ಲಿನ ನಿವೇಶನ ಹಾಗೂ ಕಟ್ಟಡಗಳು ಯಾವುದೇ ಕಾರಣಕ್ಕೂ ಸಕ್ರಮವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ರಮ-ಸಕ್ರಮದಿಂದ ಬರುವ ಹಣವನ್ನು ಉದ್ಯಾನವನ ಮತ್ತು ನಗರ ಮೂಲಸೌಲಭ್ಯ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ತಿಳಿಸಿದರು.

ನಿವೇಶನ ಮತ್ತು ಕಟ್ಟಡ ನಿರ್ಮಾಣದಲ್ಲಿನ ಉಲ್ಲಂಘನೆಗಳ ಬಗ್ಗೆ ಮಾಲೀಕರು ಸ್ವಯಂ ಘೋಷಣೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗುವುದು. ಆದರೆ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಪರಿಶೀಲನೆ ನಂತರ ಸಕ್ರಮಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಇದೀಗ ಅಧಿಸೂಚನೆ ಹೊರಡಿಸಲು ತೀರ್ಮಾನಿಸಲಾಗಿದೆ. ಮತ್ತೆ ಯಾರಾದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮುಂದಾಲೋಚನೆಯಿಂದ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್‌ ಸಹ ಸಲ್ಲಿಸಿದೆ ಎಂದು ತಿಳಿಸಿದರು.

ಯಾವುದು ಸಕ್ರಮ?
*ಹತ್ತು ಮಹಾನಗರ ಪಾಲಿಕೆ ಹಾಗೂ 60 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಉಲ್ಲಂ ಸಿ ನಿರ್ಮಿಸಿರುವ ವಸತಿ ಕಟ್ಟಡದ ಶೇ.50ರಷ್ಟು, ವಾಣಿಜ್ಯ ಕಟ್ಟಡ ಶೇ.25ರಷ್ಟು.

*ಸಕ್ಷಮ ಪ್ರಾಧಿಕಾರದಿಂದ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಬಡಾವಣೆ ಹಾಗೂ ಅದರಲ್ಲಿ ರಚಿಸಿರುವ ನಿವೇಶನ ಮತ್ತು ಆ ನಿವೇಶನಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳು.

ನಿಟ್ಟುಸಿರು
*ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ರೆವಿನ್ಯೂ ಬಡಾವಣೆಗಳಲ್ಲಿ ನಿವೇಶನ ಪಡೆದು ಮನೆ ನಿರ್ಮಿಸಿಕೊಂಡು ಎ ಖಾತೆ ದೊರೆಯದೆ ಪ್ರತಿನಿತ್ಯ ಆತಂಕದಲ್ಲಿವೆ. ಸರ್ಕಾರದ ಕ್ರಮದಿಂದ ಇದೀಗ ಅಂತಹ ಕುಟುಂಬಗಳು ನಿಟ್ಟುಸಿರು ಬಿಡುವಂತಾಗಿದೆ. ಅದೇ ರೀತಿ ನಗರ ಪ್ರದೇಶಗಳಲ್ಲಿ ನಕ್ಷೆ ಉಲ್ಲಂ ಸಿ ನಿರ್ಮಿಸಿರುವ ಕಟ್ಟಡ ಮಾಲೀಕರು ದಂಡ ಪಾವತಿಸಿ ಸಕ್ರಮ ಮಾಡಿಕೊಂಡು ಸ್ಥಳೀಯ ಸಂಸ್ಥೆಗಳ ತೆರವು ಕಾರ್ಯಾಚರಣೆ ತೂಗುಕತಿಯಿಂದ ಪಾರಾಗಬಹುದು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

SOMANNA-2

Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.