ಜಾತಿ, ಧರ್ಮದ ಹೆಸರಲ್ಲಿ ಮತ ಕೇಳ್ಬೇಡಿ; ಸುಪ್ರೀಂ ಐತಿಹಾಸಿಕ ತೀರ್ಪು
Team Udayavani, Jan 2, 2017, 2:45 PM IST
ನವದೆಹಲಿ:ಯಾವುದೇ ರಾಜಕೀಯ ಪಕ್ಷವಾಗಲಿ, ಅಭ್ಯರ್ಥಿಗಳಾಗಲಿ ಜಾತಿ, ಧರ್ಮದ ಹೆಸರಿನಲ್ಲಿ ಮತ ಯಾಚಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಐತಿಹಾಸಿಕ ತೀರ್ಪನ್ನು ನೀಡಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಧರ್ಮದ ಪಾತ್ರ ಇರಬಾರದು. ಹಾಗಾಗಿ ಚುನಾವಣೆ ಜಾತ್ಯತೀತವಾಗಿರಬೇಕು ಎಂದು ಸುಪ್ರೀಂಕೋರ್ಟ್ ನ 7 ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
ಚುನಾವಣೆ ಜಾತ್ಯತೀತ ಪ್ರಕ್ರಿಯೆಯಾಗಿದೆ. ಹಾಗಾಗಿ ಸಂವಿಧಾನದ ಚೌಕಟ್ಟಿನಲ್ಲಿ ಜಾತ್ಯತೀತತೆಯನ್ನು ಅನುಸರಿಸಬೇಕಾಗಿದೆ. ಜನರು ಮತ್ತು ದೇವರ ನಡುವಿನ ಸಂಬಂಧ ವೈಯಕ್ತಿಕ ಆಯ್ಕೆಯಾಗಿದೆ ಎಂದು ಹೇಳಿರುವ ಸುಪ್ರೀಂ ಸಾಂವಿಧಾನಿಕ ಪೀಠ, ಇದರಲ್ಲಿ ರಾಜಕೀಯ ಹಸ್ತಕ್ಷೇಪ ವರ್ಜ್ಯ ಎಂದು ಹೇಳಿದೆ.
ಹಿಂದುತ್ವಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಅರ್ಜಿದಾರರು ಮತ್ತು ಪ್ರತಿವಾದಿಗಳ ಆಲಿಸಿದ ನಂತರ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ. ಜಾತಿ, ಧರ್ಮ, ಜನಾಂಗ, ಭಾಷೆಯ ಹೆಸರಿನಲ್ಲಿ ಮತ ಕೇಳುವುದು ಭ್ರಷ್ಟಾಚಾರವಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.