245 ಅಂಕಗಳ ಭರ್ಜರಿ ಮುನ್ನಡೆ ಕಂಡ ಮುಂಬಯಿ ಶೇರು ಪೇಟೆ
Team Udayavani, Jan 5, 2017, 4:29 PM IST
ಮುಂಬಯಿ : ಏಶ್ಯನ್ ಹಾಗೂ ವಿಶ್ವ ಶೇರು ಮಾರುಕಟ್ಟೆಗಳಲ್ಲಿನ ಸ್ಥಿರತೆಯನ್ನು ಅನುಸರಿಸಿ ಮುನ್ನಡೆದಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 245.11 ಅಂಕಗಳ ಉತ್ತಮ ಏರಿಕೆಯೊಂದಿಗೆ 26,878.24 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 83.30 ಅಂಕಗಳ ಮುನ್ನಡೆಯನ್ನು ಕಂಡು ದಿನದ ವಹಿವಾಟನ್ನು 8,273.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಟಾಟಾ ಮೋಟರ್ ಶೇರು ಶೇ.3ರಷ್ಟು ಏರಿತು. ಉಳಿದಂತೆ ಅದಾನಿ ಪೋರ್ಟ್, ಟಾಟಾ ಸ್ಟೀಲ್, ಓಎನ್ಜಿಸಿ ಮತ್ತು ಐಸಿಐಸಿಐ ಬ್ಯಾಂಕ್ ಟಾಪ್ ಗೇನರ್ ಎನಿಸಿಕೊಂಡವು. ವ್ಯತಿರಿಕ್ತವಾಗಿ ಟಿಸಿಎಸ್, ಇನ್ಫೋಸಿಸ್, ಮಹೀಂದ್ರ ಶೇರುಗಳು ಹಿನ್ನಡೆಗೆ ಗುರಿಯಾಗಿ ಟಾಪ್ ಲೂಸರ್ ಎನಿಸಿಕೊಂಡವು.
ಇಂದಿನ ವಹಿವಾಟಿನಲ್ಲಿ 1,913 ಶೇರುಗಳು ಮುನ್ನಡೆ ಕಂಡರೆ 792 ಶೇರುಗಳು ಹಿನ್ನಡೆಗೆ ಗುರಿಯಾದವು; 145 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.