ಭಾರತ ಹಾಕಿ ಸಂಸ್ಥೆ-ಸಹಾರ ಒಪ್ಪಂದ ವಿಸ್ತರಣೆ
Team Udayavani, Jan 6, 2017, 3:45 AM IST
ಹೊಸದಿಲ್ಲಿ: ಭಾರತ ಹಾಕಿ ಸಂಸ್ಥೆ ಜತೆ ಸಹಾರ ಗ್ರೂಪ್ ಮಾಡಿಕೊಂಡಿರುವ ಒಪ್ಪಂದವನ್ನು 2021ರ ವರೆಗೆ ವಿಸ್ತರಿಸಿದೆ. ಇದರಿಂದಾಗಿ ಹಾಕಿ ಸಂಸ್ಥೆಗೆ ಮತ್ತೂಷ್ಟು ಬಲ ಬಂದಂತಾಗಿದೆ. ಪುರುಷರ ಮತ್ತು ಮಹಿಳೆಯರ ಹಿರಿಯ, ಕಿರಿಯ ಎರಡೂ ವಿಭಾಗಕ್ಕೂ ನೆರವು ದೊರೆಯಲಿದೆ. ಇದು ಭಾರತದ 2020ರ ಟೋಕಿಯೋ ಒಲಿಂಪಿಕ್ಸ್ ಸಿದ್ಧತೆಗೆ ನೆರವಾಗಲಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಹಾರ ಗ್ರೂಪ್‌ನ ಅಭಿಜಿತ್ ಸರ್ಕಾರ್, “ಹಾಕಿ ನಮ್ಮ ರಾಷ್ಟ್ರೀಯ ಕ್ರೀಡೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿರಿಯರ ಮತ್ತು ಕಿರಿಯರ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಒಪ್ಪಂದವನ್ನು ಮುಂದುವರಿಸುತ್ತಿರುವ ಬಗ್ಗೆ ಹೆಮ್ಮೆಯಿದೆ’ ಎಂದಿದ್ದಾರೆ. ಇತ್ತೀಚೆಗೆ ಭಾರತ ಕಿರಿಯರ ತಂಡ ವಿಶ್ವಕಪ್ ಗೆದ್ದರೆ, ಹಿರಿಯರ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆಳ್ಳಿ ಪದಕ ಜಯಿಸಿದೆ. ಮಹಿಳಾ ತಂಡ ಏಶ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?