ಡಾ| ಹೆಗ್ಗಡೆಗೆ ಪೆನ್ಸಿಲ್ವೇನಿಯಾ ವಿ.ವಿ. ಗೌರವ
Team Udayavani, Jan 6, 2017, 3:45 AM IST
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಸಶಕ್ತೀಕರಣ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸಾಧನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ (ಯು ಪೆನ್)ವು “ಔಟ್‌ಸ್ಟಾಂಡಿಂಗ್ ಲೀಡರ್‌ಶಿಪ್ ಇನ್ ರೂರಲ್ ಡೆವಲಪ್‌ಮೆಂಟ್ ಆ್ಯಂಡ್ ವಿಮೆನ್ ಎಂಪವರ್‌ವೆುಂಟ್’ ಪ್ರಶಸ್ತಿಯನ್ನು ನೀಡಿ ಸಮ್ಮಾನಿಸಿದೆ.
ಪೆನ್ಸಿಲ್ವೇನಿಯಾ ವಿವಿಯ ಪ್ರೊ| ಫೆಮಿಡಾ ಹ್ಯಾಂಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಹೆಗ್ಗಡೆ ಅವರನ್ನು ಸಮ್ಮಾನಿಸಿ ಫಲಕ ಪ್ರದಾನ ಮಾಡಿದರು.
ಮಾಹಿತಿ ವಿನಿಮಯ: ವಿ.ವಿ. 9 ವಿದ್ಯಾರ್ಥಿಗಳನ್ನೊಳಗೊಂಡ ತಂಡ 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ವಿಶೇಷ ಅಧ್ಯಯನಕ್ಕಾಗಿ ಆಗಮಿಸಿದ್ದು ಂåೋಜನೆಯ ಅಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿತು. ಗ್ರಾಮೀಣಾಭಿವೃದ್ಧಿ, ಮಹಿಳಾ ಸಶಕ್ತೀಕರಣ ಹಾಗೂ ಬದಲಿ ಇಂಧನ ಕ್ಷೇತ್ರದಲ್ಲಿ ಂåೋಜನೆಯ ಅನುಭವವನ್ನು ಡಾ| ಹೆಗ್ಗಡೆ ತಂಡದೊಂದಿಗೆ ಹಂಚಿಕೊಂಡರು.
ಂåೋಜನೆಯ ಕೇಂದ್ರ ಕಚೆೇರಿಗೆ ಭೇಟಿ ನೀಡಿದ ತಂಡಕ್ಕೆ ಮಾನವ ಸಂಪದ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಚೇರಿ ಹಾಗೂ ಉತ್ಪಾದನಾ ಘಟಕ, ಮಾರಾಟ ಮಳಿಗೆಗೆ ಈ ತಂಡ ಭೇಟಿ ನೀಡಿತು.
ಸಿರಿ ನಿರ್ದೇಶಕಿ ಮನೋರಮಾ ಭಟ್, ಪ್ರಾಂಶುಪಾಲ ಸುರೇಶ್ ಸಾಲಿಯಾನ್ ಉಪನ್ಯಾಸಕ ವಸಂತ ನಾಯಕ್ ಉಪಸ್ಥಿತರಿದ್ದರು.
ನಿಟ್ಟೆ ಹಾಗೂ ಪೆನ್ಸಿಲ್ವೇನಿಯಾ ವಿ.ವಿ. ವಿದ್ಯಾರ್ಥಿ ವಿನಿಮಯ ಯೋಜನೆಯಡಿ ಭಾರತಕ್ಕೆ ಆಗಮಿಸಿದ ಈ ತಂಡ 11 ದಿನಗಳ ಕಾಲ ನಿಟ್ಟೆಯ ಪ್ರೊ| ವಿನೋದ್ ದೀಕ್ಷಿತ್ ನೇತೃತ್ವದಲ್ಲಿ ಅಧ್ಯಯನ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.