ಆರಂಭಿಕ ವಹಿವಾಟಿನಲ್ಲಿ 103 ಅಂಕ ಏರಿ ಬಳಿಕ ಕುಸಿದ ಮುಂಬಯಿ ಶೇರು
Team Udayavani, Jan 6, 2017, 11:27 AM IST
ಮುಂಬಯಿ : ದೇಶೀಯ ಹೂಡಿಕೆದಾರರ ಬೆಂಬಲದಲ್ಲಿ ನಿನ್ನೆಯ ಅಮೋಘ ರಾಲಿಯನ್ನು ಮುಂದುವರಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 103 ಅಂಕಗಳ ಮುನ್ನಡೆಯನ್ನು ಸಾಧಿಸಿತಲ್ಲದೆ 27,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್ ಸಂಪಾದಿಸಿತು. ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದಿರುವ ಸ್ಥಿರತೆಯಿಂದ ಕೂಡ ಮುಂಬಯಿ ಶೇರು ಪೇಟೆ ಗರಿಗೆದರಿರುವುದು ಗಮನಾರ್ಹವಾಗಿದೆ.
ಹಾಗಿದ್ದರೂ ಮಧ್ಯಾಹ್ನ 11.30ರ ಹೊತ್ತಿಗೆ ಸೆನ್ಸೆಕ್ಸ್ 9 ಅಂಕಗಳ ನಷ್ಟದೊಂದಿಗೆ 26,868.29 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5 ಅಂಕಗಳ ನಷ್ಟದೊಂದಿಗೆ 8,268.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿರುವುದು ಕಂಡು ಬಂದಿದೆ.
ನಿನ್ನೆ ಗುರುವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 245.11 ಅಂಕಗಳ ಏರಿಕೆಯನ್ನು ಸಾಧಿಸಿತ್ತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಹೆಲ್ತ್ಕೇರ್, ಕನ್ಸೂಮರ್ ಡ್ಯುರೇಬಲ್, ಮೆಟಲ್, ಆಟೋ, ಕ್ಯಾಪಿಟಲ್ ಗೂಡ್ಸ್, ಆಯಿಲ್ ಆ್ಯಂಡ್ ಗ್ಯಾಸ್ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳು ಉತ್ತಮ ಬೇಡಿಕೆಯನ್ನು ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.