ಲೋಕಾಗೆ ನ್ಯಾ| ವಿಶ್ವನಾಥ ಶೆಟ್ಟಿ ನೇಮಕಕ್ಕೆ ಹಿರೇಮಠ ವಿರೋಧ


Team Udayavani, Jan 8, 2017, 3:45 AM IST

24BGHIRE_1662595f.jpg

ಹುಬ್ಬಳ್ಳಿ: ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಹಾಗೂ ನ್ಯಾ. ಎಸ್‌.ಆರ್‌. ನಾಯಕ ಅವರು  ಪ್ರಶ್ನಾರ್ಹ ವ್ಯಕ್ತಿಗಳಾಗಿದ್ದು, ಇಬ್ಬರನ್ನೂ ಲೋಕಾಯುಕ್ತ ಸ್ಥಾನಕ್ಕೆ ಪರಿಗಣಿಸಬಾರದು ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯ ಎಸ್‌.ಆರ್‌. ಹಿರೇಮಠ ಒತ್ತಾಯಿಸಿದ್ದಾರೆ.

ನ್ಯಾ. ವಿಶ್ವನಾಥ ಶೆಟ್ಟಿ ಅವರು ಬೆಂಗಳೂರಿನ ಆರ್‌.ಟಿ. ನಗರದಲ್ಲಿ ಮನೆ ಹೊಂದಿದ್ದರೂ, ನ್ಯಾಯಾಂಗ ನೌಕರರ ಸಂಘದ  ವಸತಿ ಬಡಾವಣೆಯಲ್ಲಿ ಸುಳ್ಳು ಮಾಹಿತಿ ನೀಡಿ ನಿವೇಶನ ಪಡೆದಿದ್ದಾರೆ. 10 ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ಡಿ.ಕೆ. ಶಿವಕುಮಾರ್‌ ಪರವಾಗಿ ವಾದ ಮಂಡಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಜ.9ರಂದು ಲೋಕಾಯುಕ್ತ ಆಯ್ಕೆಗೆ ಸಭೆ ಕರೆಯಲಾಗಿದ್ದು, ಇದನ್ನು ಸ್ವಾಗತಿಸುತ್ತೇವೆ. ಲೋಕಾಯುಕ್ತರ ನೇಮಕ ಸಂಬಂಧ ಜ.11ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಎಚ್‌.ಎಸ್‌. ದೊರೆಸ್ವಾಮಿ, ನ್ಯಾ. ಸಂತೋಷ ಹೆಗ್ಡೆ, ಎ.ಟಿ.ರಾಮಸ್ವಾಮಿ ಹಾಗೂ ತಾವು  ಚರ್ಚೆ ನಡೆಸುವುದಾಗಿ ತಿಳಿಸಿದರು.

ತನಿಖೆಗೆ ಆಗ್ರಹ:
ನೋಟು ಬದಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ಭೀಮಾನಾಯ್ಕ ಅವರ  ವಾಹನ ಚಾಲಕ ರಮೇಶ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿದೆ. ಪ್ರಕರಣ ಕುರಿತು ಸಿಬಿಐ ತನಿಖೆಗೆ ಪ್ರಧಾನಿ ಹಾಗೂ ಕೇಂದ್ರ ಹಣಕಾಸು ಸಚಿವರು ಮುಂದಾಗಬೇಕೆಂದು ಒತ್ತಾಯಿಸಿದರು.

ಸಂಸದ ಪ್ರಹ್ಲಾದ ಜೋಶಿ ತಮ್ಮ ವಿರುದ್ಧ ಹೂಡಿದ ಮಾನನಷ್ಟ ಮೊಕದ್ದಮೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಆರೋಪ ಪ್ರಹ್ಲಾದ ಜೋಶಿ ವಿರುದ್ಧ ಅಲ್ಲ. ಬದಲಾಗಿ ಮೈದಾನ ಕಬಳಿಕೆ ಯತ್ನದ ವಿರುದ್ಧ.  ಪ್ರಕರಣ ಇತ್ಯರ್ಥಕ್ಕೆ ಅವರು ಮುಂದಾದರೆ ಅದಕ್ಕೆ ತಾವು ಮುಕ್ತ ಮನಸ್ಸು ಹೊಂದಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.