ಸೆಂಟ್ರಿಂಗ್‌ ಕುಸಿತ: 8 ಮಂದಿ ಕಾರ್ಮಿಕರಿಗೆ ಗಾಯ


Team Udayavani, Jan 9, 2017, 11:42 AM IST

centring-kusita.jpg

ಮಹದೇವಪುರ: ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್‌ ಕುಸಿದು ಎಂಟು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಇಲ್ಲಿನ ಆಕ್ಸೆಂಚರ್‌ ಸಾಫ್ಟ್ವೆರ್‌ ಕಂಪನಿಯ ಆವರಣದಲ್ಲಿ ಘಟನೆ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗಾಯಾಳುಗಳೆಲ್ಲಾ ಒಡಿಶಾ ಮೂಲದವರಾಗಿದ್ದು, 3 ಅಂತಸ್ತಿನ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ದಿವ್ಯಶ್ರೀ ಕನ್ಸ್‌ಸ್ಟ್ರಕ್ಷನ್‌ ಎಂಬ ಕಂಪನಿ ಪಡೆದಿತ್ತು. ಕೆಲಸವನ್ನು ಬೇಗ ಮುಗಿಸುವ ಉದ್ದೇಶದಿಂದ ಹಗಲು ಇರುಳು ಎನ್ನದೇ ನಿತ್ಯ 30ರಿಂದ 40ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗಿನ ಜಾವ 5.30ರ ವೇಳೆಗೆ 2ನೇ ಅಂತಸ್ತಿನ ಸೆಂಟ್ರಿಂಗ್‌ ಕುಸಿದು ಬಿದ್ದಿದೆ.

ಪರಿಣಾಮ ಈ ವೇಳೆ ಕೆಲಸ ಮಾಡುತ್ತಿದ್ದ 8 ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈಟ್‌ಫೀಲ್ಡ್‌ ವಲಯದ ಡಿಸಿಪಿ ನಾರಾಯಣ್‌ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು. ಅವಶೇಷಗಳ ಅಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿತು. ಮಹದೇವಪುರ ವಲಯ ಜಂಟಿ ಆಯುಕ್ತ ವೆಂಕಟಾಚಲಪತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಮತ್ತು ಗಾಯಾಳುಗಳ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನು ಘಟನೆ ಖಂಡಿಸಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಂಘ- ಸಂಸ್ಥೆಗಳು ಪ್ರತಿಭಟನೆ ನಡೆಸಿದವು. ಗುತ್ತಿಗೆದಾರರ ಮತ್ತು ಕಂಪನಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ನಿಯಮಗಳನ್ನು ಗಾಳಿಗೆ ತೂರಿ ಹಗಲು ರಾತ್ರಿ ಎನ್ನದೇ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ.

ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು  ದೊಡ್ಡನೆಕ್ಕುಂದಿ ಪಾಲಿಕೆ ಸದಸ್ಯೆ ಶ್ವೇತ ವಿಜಯ್‌ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು. ಇವರ ಹೋರಾಟಕ್ಕೆ ಕರ್ನಾಟಕ ರಿಪಬ್ಲಿಕನ್‌ ಸೇನೆಯ ಕಾರ್ಯಕರ್ತರು ಸಾಥ್‌ ನೀಡಿದರು. 2 ತಿಂಗಳ ಹಿಂದೆಯಷ್ಟೇ ಬೆಳ್ಳಂದೂರು ಸಮೀಪ ನಿರ್ಮಾಣ ಹಂತದ ಕಟ್ಟಡ ಕುಸಿದ ಐವರು ಮೃತಟಪಟ್ಟಿದ್ದ ಪ್ರಕರಣವನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.