ದೇಸಿ ಕಲೆಗಳಿಗೆ ಜೀವಕಳೆ ತುಂಬುವ ಶಕ್ತಿ ಇದೆ

Team Udayavani, Jan 9, 2017, 12:04 PM IST

desi-art.jpg

ಬೆಂಗಳೂರು: “ದೇಸಿ ಸೊಗಡಿನ ಕಲೆಗಳಲ್ಲಿರುವ ಸರಳ ಹಾಗೂ ನೈಜತೆಯ ಅಂಶಗಳಿಗೆ ಮನುಷ್ಯನಲ್ಲಿ ಜೀವಕಳೆ ತುಂಬುವ ಶಕ್ತಿ ಇದೆ’ ಎಂದು ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. 

ಭೂಮಿ ಕಲಾ ಸಂಸ್ಥೆಯು ಭಾನುವಾರ ರವೀಂದ್ರ ಕಲಾಕ್ಷೇತ್ರ ಆವರಣದ ಪಡಸಾಲೆ ಆರ್ಟ್‌ ಗ್ಯಾಲರಿಯಲ್ಲಿ ಆಯೋಜಿಸಿದ್ದ ಕಲಾವಿದ ಎಸ್‌.ಶಿವಕುಮಾರ್‌ ಅವರ “ಸಹಜ ರೇಖಾಚಿತ್ರಗಳು’ ಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನ ಭಾವನೆಗಳನ್ನು ಮುಕ್ತವಾಗಿ ಆವರಿಸಿ ಕಾಲಕ್ಕೆ ತಕ್ಕಂತೆ ತನ್ನದೇ ನೆಲದಲ್ಲಿ ಅವನನ್ನು ಜೀವಂತವಾಗಿಡುವ ಕಲೆಯೇ ದೇಸಿ ಕಲೆ.

ಈ ದೇಸಿ ಕಲೆಗಳಲ್ಲಿನ ಸರಳ ಹಾಗೂ ನೈಜತೆ ಅಂಶಗಳಿಗೆ ಮನುಷ್ಯನಲ್ಲಿ ಜೀವಕಳೆ ತುಂಬುವ ಶಕ್ತಿ ಇದೆ. ಹಾಗಾಗಿ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿನ ದೇಸಿ ಕಲೆಗಳನ್ನು ಪೋತ್ಸಾಹಿಸುವ ಕೆಲಸವನ್ನು ಸಂಬಂಧಿಸಿದ ಅಕಾಡೆಮಿಗಳು ಮಾಡಬೇಕು. ಆ ಮೂಲಕ ಅಕಾಡೆಮಿಗಳು ಶ್ರೇಷ್ಠ ಕಲಾವಿದರು ಹಾಗೂ ಶೈಕ್ಷಣಿಕ ಸವಲತ್ತುಗಳನ್ನು ಹೊಂದಿರುವ ಪ್ರತಿಭೆಗಳಿಗೆ ಮಾತ್ರ ಸೀಮಿತ ಎಂಬ ತಪ್ಪುಕಲ್ಪನೆ ದೂರವಾಗಬೇಕು ಎಂದು ಹೇಳಿದರು.

“ದ.ರಾ. ಬೇಂದ್ರೆ, ಚಂದ್ರಶೇಖರ ಕಂಬಾರರಂತಹ ಮಹನೀಯರು ಕನ್ನಡ ಕಾವ್ಯ ಲೋಕಕ್ಕೆ ಹೊಸಭಾಷ್ಯ ಬರೆದರು. ದೇವನೂರರ ಕುಸುಮಬಾಲೆ ಕಾದಂಬರಿ ದೇಸಿ ಭಾಷೆಯ ಸೊಗಡನ್ನು ಉಣಬಡಿಸಿ ಬದಲಾವಣೆಗೆ ದಾರಿ ಮಾಡಿತು. ಆ ರೀತಿ ಸಹಜ ಕಲೆ ಆಧುನಿಕ ಕಲೆಯೊಂದಿಗೆ ಸಂಲಗ್ನಗೊಳ್ಳಬೇಕು. ಇಲ್ಲದಿದ್ದಲ್ಲಿ ಯಾವುದೇ ಪ್ರಕಾರದ ಕಲೆಗಳು ಸಂಕೀರ್ಣಗೊಂಡು ಜಡವಾಗುತ್ತಾ ಕೇವಲ ಬೌದ್ಧಿಕ ಮಟ್ಟಕ್ಕೆ ಮಾತ್ರ ಸೀಮಿತಗೊಳ್ಳುತ್ತವೆ ಎಂದರು. 

ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಾ.ಎಂ.ಎಸ್‌. ಮೂರ್ತಿ ಮಾತನಾಡಿ, ಸವಲತ್ತುಗಳನ್ನಷ್ಟೇ ಕೇಳುವ ಕಲಾವಿದರಿಗೆ ದಿನಗೂಲಿ ನೌಕರನಾದ ಎಸ್‌.ಶಿವಕುಮಾರ್‌ ಪ್ರೇರಣೆಯಾಗಬೇಕು. ಇನ್ನೊಬ್ಬರನ್ನು ಗುರುತಿಸಿ ಪ್ರೋತ್ಸಾಹಿಸುವ ಮನೋಭಾವ ಅತ್ಯಗತ್ಯ. ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಹೇಳಿದರು.

ಕಲಾವಿದ ಪಿಕಾಸೊನನ್ನು ಐದಾರು ದಶಕಗಳಿಂದ ಹೊಗಳುತ್ತಾ ಬರಲಾಗುತ್ತಿದೆ. ಕೆಲ ಚರಿತ್ರೆಕಾರರಂತೂ ಆತನೊಂದಿಗೆ ಒಡನಾಟ ಹೊಂದಿದ್ದವರಂತೆಯೇ ವರ್ಣಿಸಿದ್ದಾರೆ. ಆದರೆ, ಅವರಿಗಿಂತಲೂ ಶ್ರೇಷ್ಠ ಪಿಕಾಸೊಗಳು ನಮ್ಮ ಮನೆ ಮಕ್ಕಳಲ್ಲಿ, ಗ್ರಾಮೀಣ ಪ್ರದೇಶಗಳ ಚಿಕ್ಕಪುಟ್ಟ ಸಂಗತಿಗಳಲ್ಲೂ ಆವರಿಸಿದ್ದಾರೆ. ಅದನ್ನು ಯಾರೂ ಕಂಡುಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಾನಪದ ವಿದ್ವಾಂಸ ಡಾ. ಅಪ್ಪಗೆರೆ ತಿಮ್ಮರಾಜು ಮತ್ತಿತರರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.