ಆರೋಗ್ಯದತ್ತ ಗಮನ ಹರಿಸಿ


Team Udayavani, Jan 9, 2017, 12:43 PM IST

hub2.jpg

ಧಾರವಾಡ: ಜೀವನದಲ್ಲಿ ಆರೋಗ್ಯವೇ ಭಾಗ್ಯ. ಆರೋಗ್ಯ ಚೆನ್ನಾಗಿದ್ದರೆ ಇಡೀ ಜೀವನ ಶೈಲಿ, ಅದರ ಕಾರ್ಯ ನಿರ್ವಹಣೆ ಸರಿಯಾಗಿ ಇರಲು ಸಾಧ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಶೋಕ ಹಿಂಚಿಗೇರಿ ಹೇಳಿದರು. ನಗರದ ಧಾರವಾಡ ವಕೀಲರ ಸಂಘದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯದ ಕಡೆ ಗಮನ ಹರಿಸಬೇಕು. ಆರೋಗ್ಯ ತಪಾಸಣೆಗಾಗಿ ಸಮಯ ನಿಗದಿಪಡಿಸಿ ಕಾರ್ಯ ಚಟುವಟಿಕೆ ಹಾಕಿಕೊಳ್ಳಬೇಕು ಎಂದರು. ಚೈತನ್ಯ ಮತ್ತು ಮನಸ್ಸು ನಮ್ಮ ದೇಹದಲ್ಲಿ ಅಡಗಿವೆ. ದಿನನಿತ್ಯದ ಅವಸರದ ಕಾರ್ಯ ಚಟುವಟಿಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವುದು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ರಕ್ತದೊತ್ತಡ (ಬಿಪಿ), ಸಕ್ಕರೆ ಖಾಯಿಲೆ ಗುಪ್ತವಾಗಿ ಅವಿತುಕೊಂಡಿರುತ್ತವೆ.

ವೈದ್ಯರ ಬಳಿ ತಪಾಸಿದಾಗ ರೋಗಗಳು ಕಾಣಿಸುತ್ತವೆ. ಹೀಗಾಗಿ ಎಲ್ಲರೂ ಆರೋಗ್ಯದತ್ತ ಲಕ್ಷé ವಹಿಸಿ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ವಿ.ಶ್ರೀಶಾನಂದ ಮಾತನಾಡಿ, ಇಂದು ಸಿಗುವ ಆಹಾರ ಪದಾರ್ಥಗಳಲ್ಲಿ ನಮಗೆ ಸಿಗಬೇಕಾದ ಪೌಷ್ಟಿಕಾಂಶಗಳು ಸಿಗುತ್ತಿಲ್ಲ. ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ಮಾಡಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದರು. 

ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಸಭಾಪತಿ ಡಾ|ವಿ.ಡಿ. ಕರ್ಪೂರಮಠ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ನ್ಯಾಯಾಧಿಧೀಶರು 2017ರ ಕ್ಯಾಲೆಂಡರ್‌ ಬಿಡುಗಡೆ ಮಾಡಿದರು. ವಕೀಲರ ಸಂಘದ ಅಧ್ಯಕ್ಷ ವಿ.ಡಿ.ಕಾಮರಡ್ಡಿ, ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಆರ್‌.ಎಂ.ದೊಡ್ಡಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಗಿರಿಧರ ಕುಕನೂರ, 

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ವೈದ್ಯಾಧಿಕಾರಿ ಡಾ|ಪ್ರಭು ಬಿರಾದಾರ, ಕ್ಯಾನ್ಸರ್‌ ಆಸ್ಪತ್ರೆಯಡಾ|ಉಮೇಶ ಹಳ್ಳಿಕೇರಿ, ಕರ್ನಾಟಕ  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಬಿ.ಎಸ್‌.ಸಂಗಟಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್‌. ಪಾಟೀಲ ಇದ್ದರು. ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ಎಸ್‌.ಎನ್‌ ಹೆಗಡೆ ಸ್ವಾಗತಿಸಿದರು. ಗ್ರಾಮಪುರೋಹಿತ ನಿರೂಪಿಸಿದರು. ಎನ್‌. ಆರ್‌.ಮಟ್ಟಿ ವಂದಿಸಿದರು.

ಧಾರವಾಡ ವಕೀಲ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಕಿಮ್ಸ್‌ ಆಸ್ಪತ್ರೆ, ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ, ಪದ್ಮಶ್ರೀ ಡಾ|ಎಂ.ಎಂ.ಜೋಶಿ ನೇತ್ರ ಆಸ್ಪತ್ರೆ, ಪದ್ಮಶ್ರೀ ಡಾ| ಆರ್‌.ಬಿ.ಪಾಟೀಲ ಮೆಮೋರಿಯಲ್‌ ಕ್ಯಾನ್ಸರ್‌ ಆಸ್ಪತ್ರೆ, ಧಾರವಾಡ ಡಿಸ್ಟ್ರಿಕ್ಟ್ ಲೀಗಲ್‌ ಪ್ರ್ಯಾಕ್ಟಿಷನರ್ಸ್‌ ಮಲ್ಟಿಪರ್ಪಸ್‌ ಸೌಹಾರ್ದ ಸಹಕಾರಿ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  

ಟಾಪ್ ನ್ಯೂಸ್

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.