ನಮ್ಮ ಪ್ರಗತಿ ವಿಶ್ವಕ್ಕೆ ತೋರಿಸಿ; ರಾಷ್ಟ್ರಪತಿ ಪ್ರಣಬ್ ಮುಖರ್ಜಿ


Team Udayavani, Jan 10, 2017, 3:45 AM IST

HOME-3.jpg

ಬೆಂಗಳೂರು: ಭಾರತದ ಅಭಿವೃದ್ಧಿಯ ಪಥವನ್ನು ವಿಶ್ವ ಸಮುದಾಯಕ್ಕೆ ತಿಳಿಸುವ ರಾಯಭಾರಿಗಳಾಗಿ ಕೆಲಸ ಮಾಡಿ ಎಂದು ಪ್ರವಾಸಿ ಭಾರತೀಯ ದಿವಸಕ್ಕೆ ಆಗಮಿಸಿದ್ದ ಅನಿವಾಸಿ ಭಾರತೀಯರಿಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಕರೆ ನೀಡಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋಜಿಸಿದ್ದ ಮೂರು ದಿನಗಳ ಪ್ರವಾಸಿ ಭಾರತೀಯ ದಿವಸ ಸಮಾವೇಶದ ಸಮಾರೋಪ ಭಾಷಣ ಮಾಡಿದ ಅವರು, ಭಾರತ ಇಂದು ಎಲ್ಲ ರಂಗಗಳಲ್ಲೂ ಅಭಿವೃದ್ಧಿಯತ್ತ ಸಾಗುತ್ತಿದೆ. ಇಡೀ ವಿಶ್ವ ಇತ್ತ ನೋಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಪ್ರಗತಿಯ ಚಿತ್ರಣವನ್ನು ನೀವು ನೆಲೆಸಿರುವ ರಾಷ್ಟ್ರಗಳ ಮುಂದಿಡಿ ಎಂದು ಹೇಳಿದರು.

ಭಾರತದ ಅಭಿವೃದ್ಧಿಯಲ್ಲಿ ಅನಿವಾಸಿ ಭಾರ ತೀಯರ ಪಾಲುದಾರಿಕೆ ಕಡಿಮೆ ಏನಲ್ಲ. ಹಿಂದಿ ನಿಂದಲೂ ದೇಶದ ಪ್ರಗತಿಗೆ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ಅಭಿವೃದ್ಧಿಯ ದೃಷ್ಟಿಕೋನವೂ ಬದಲಾಗಿದೆ. ಮೇಕ್‌ ಇನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಸ್ವತ್ಛ ಭಾರತ್‌, ಸ್ಟಾರ್ಟ್‌ ಅಪ್‌ ಇಂಡಿಯಾ ಕಾರ್ಯಕ್ರಮಗಳಲ್ಲೂ ನಿಮ್ಮ ಪಾಲ್ಗೊಳ್ಳುವಿಕೆ 
ಬೇಕು ಎಂದು ತಿಳಿಸಿದರು.

ಭಾರತ ವಿಶ್ವದಲ್ಲೇ ಅತ್ಯಂತ ಪ್ರಬಲ ರಾಷ್ಟ್ರವಾಗಿ ಹೊರ ಹೊಮ್ಮುತ್ತಿದ್ದು, ಈ ನೆಲದಲ್ಲಿ ನಿಮ್ಮ ಬೇರು ಗಳಿವೆ. ಭಾರತದ ಅಭಿವೃದ್ಧಿಯ ಪ್ರತಿ ಹಂತದಲ್ಲೂ ನಿಮ್ಮ ಪಾಲುದಾರಿಕೆ, ಸಹಭಾಗಿತ್ವ ಅತ್ಯಗತ್ಯ ಎಂದು ಹೇಳಿದರು.

ಜಗತ್ತಿನ ವಿವಿಧ ದೇಶಗಳಲ್ಲಿರುವ ಭಾರತೀಯ ಮೂಲದ ತಂತ್ರಜ್ಞರು, ವೃತ್ತಿಪರರು ಭಾರತಕ್ಕೆ ಆಗ್ಗಾಗ್ಗೆ ಬಂದು ಐಐಟಿ ಮತ್ತು ಐಐಎಂಗಳಲ್ಲಿ ಸಣ್ಣ ಫೆಲೋಶಿಪ್‌ಗ್ಳನ್ನು ಪಡೆದು ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸಗಳಲ್ಲಿ ತೊಡಗಬೇಕು. ಈ ಮೂಲಕ ದೇಶದ ಆರ್ಥಿಕ ಮತ್ತು ವೈಜ್ಞಾnನಿಕ ಅಭಿವೃದ್ಧಿಯಲ್ಲೂ ಪಾಲುದಾರರಾಗ
ಬೇಕು ಎಂದು ತಿಳಿಸಿದರು.

ಹೊರ ದೇಶಗಳಲ್ಲಿರುವ ಭಾರತೀಯರು ತಮ್ಮದೇ ಆದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆ ದೇಶಕ್ಕೂ ಹಾಗೂ ಮಾತೃಭೂಮಿಗೂ ಗೌರವ ತಂದಿದ್ದಾರೆ. ಅವರ ಸಾಧನೆಯ ಬಗ್ಗೆ ಭಾರತಕ್ಕೆ ಹೆಮ್ಮೆ ಇದೆ. ಭಾರತೀಯರು ಎಲ್ಲೇ ಇದ್ದರೂ ಅಲ್ಲಿನ ಸಂಸ್ಕೃತಿ ಜೊತೆಗೆ ನಮ್ಮ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಕೊಲ್ಲಿ ರಾಷ್ಟ್ರಗಳು ಮತ್ತಿತರ ದೇಶಗಳಿಗೆ ತಾತ್ಕಾ ಲಿಕವಾಗಿ ಸಣ್ಣ ಸಣ್ಣ ಉದ್ಯೋಗಗಳನ್ನು ಅರಸಿ ಹೆಚ್ಚಿನ ಪ್ರಮಾಣದಲ್ಲಿ ಹೋಗುವವರಿಗೆ ಕೌಶಲ ತರಬೇತಿ ನೀಡುವ ಅಗತ್ಯವಿದೆ. ಅಂಥವರ ಪ್ರಮಾಣ ಬಹಳ ದೊಡ್ಡದಿದೆ ಎಂದು ತಿಳಿಸಿದರು.
ಹೊರದೇಶಗಳಿಗೆ ಉದ್ಯೋಗ ಅರಸಿ ಹೋಗು ವವರಿಗೆ ಅಗತ್ಯವಾದ ಕೌಶಲ ತರಬೇತಿ ನೀಡುವ ಬಗ್ಗೆಯೂ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರಕಾರ  ಇ- ವಲಸೆ ಯೋಜನೆ ಸಹಿತ  ಹಲವು ಕ್ರಮಗಳನ್ನು ಕೈಗೊಂಡಿದೆ. ಉದ್ಯೋಗ ಕೊಡಿಸುವ ಹೆಸರಿನಲ್ಲಿ ವಂಚಿಸುವ ಕೆಲಸ ನಡೆಯುತ್ತಿದ್ದು, ಆ ಬಗ್ಗೆ ಹೆಚ್ಚು ಗಮನಹರಿಸಬೇಕು. ಕೇಂದ್ರ ಸರಕಾರ ಆ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಂಡಿಯಾದರೂ ಮತ್ತಷ್ಟು ಅಗತ್ಯವಿದೆ ಎಂದರು.

ಅನಿವಾಸಿ ಭಾರತೀಯ ಕುಟುಂಬಗಳ ಜತೆ ವಿವಾಹ ಸಂಬಂಧ ಏರ್ಪಟ್ಟು ಭಾರತದಿಂದ ಮದುವೆಯಾಗಿ ವಿದೇಶಗಳಿಗೆ ತೆರಳುವ ಹೆಣ್ಣು ಮಕ್ಕಳಿಗೆ ಅಲ್ಲಿ ಸಮಸ್ಯೆಯಾದರೆ ಅವರನ್ನು ರಕ್ಷಿಸಿ ಅವರಿಗೆ ಅಗತ್ಯ ನೆರವು ಕಲ್ಪಿಸಿಕೊಡಲು ಮುಂದಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಬ್ಬರು ಕರ್ನಾಟಕ ಮೂಲದ ಅನಿವಾಸಿ ಭಾರತೀಯರು ಸೇರಿದಂತೆ 30 ಮಂದಿ ಸಾಧಕರಿಗೆ ಪ್ರವಾಸಿ ಭಾರತೀಯ ಸಮ್ಮಾನ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕೃತರ ಪರವಾಗಿ ನಿಶಾ ದೇಶಾಯಿ ಬಿಸ್ವಾಲ್‌ ಮಾತನಾಡಿದರು.

ಪುಸ್ತಕ ಬಿಡುಗಡೆ: ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು 2014 ಮತ್ತು 2015ನೇ ಸಾಲಿನಲ್ಲಿ ವಿದೇಶ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಭಾರತದ ವಿದೇಶಾಂಗ ನೀತಿ ಕುರಿತು ಮಾಡಿದ ಭಾಷಣಗಳ ಸಂಗ್ರಹದ ಪುಸ್ತಕವನ್ನು ರಾಷ್ಟ್ರಪತಿಯವರು ಬಿಡುಗಡೆ ಮಾಡಿದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.