ಬರ ಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿ


Team Udayavani, Jan 10, 2017, 12:08 PM IST

dvg1.jpg

ದಾವಣಗೆರೆ: ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿ ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸಜ್ಜಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌. ಆರ್‌. ಉಮಾಶಂಕರ್‌ ಸೂಚಿಸಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಈ ಬಾರಿ ಇಡೀ ಜಿಲ್ಲೆ ಬರಕ್ಕೆ ತುತ್ತಾಗಿದೆ.

ಮಳೆಗಾಲಕ್ಕೆ ಇನ್ನೂ 6 ತಿಂಗಳು ಕಾಯಬೇಕಿದೆ. ಅಲ್ಲಿಯವರೆಗೆ ಬರ ಪರಿಸ್ಥಿತಿ ನಿಭಾಯಿಸಲು ಎಲ್ಲಾ ಇಲಾಖೆಗಳು ಸಜ್ಜಾಗಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಅಗತ್ಯ ಮೇವಿನ ದಾಸ್ತಾನು ಹಾಗೂ ನರೇಗಾ ಯೋಜನೆಯಿಂದ ಕೆಲಸ ನೀಡುವ ಮೂಲಕ ಪರಿಸ್ಥಿತಿ ನಿಭಾಯಿಸಬೇಕು ಎಂದರು. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾಧಿಕಾರಿ ಅಶೋಕ್‌ ಕುಮಾರ್‌ ಮಾತನಾಡಿ, ಕೊಳವೆಬಾವಿ ಕೊರೆಸಲು ಪ್ರಸುತ್ತ ಸ್ಯಾಟ್‌ಲೆ„ಟ್‌ ಮ್ಯಾಪಿಂಗ್‌ ಅನುಸರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 384 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ.

ಈ ಪೈಕಿ 168 ಗ್ರಾಮಗಳ ಕಾಮಗಾರಿಗಳಿಗೆ ಕ್ರಿಯಾಯೋಜನೆ ಅನುಮೋದನೆ ದೊರೆತಿದೆ. 40 ಗ್ರಾಮಗಳಲ್ಲಿ ಬೋರ್‌ವೆಲ್‌ ಕೊರೆಸಲು ಅನುದಾನ ಕೋರಲಾಗಿದೆ ಎಂದರು. ಟಾಸ್ಕ್ಪೋರ್ಸ್‌ಅಡಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 60 ಲಕ್ಷ ರೂ. ಬಿಡುಗಡೆಯಾಗಿದ್ದು, 308 ಕಾಮಗಾರಿ ಕೈಗೊಳ್ಳಲಾಗುವುದು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನಾಗನೂರು ಹಾಗೂ ಮಾರಗೊಂಡನಹಳ್ಳಿ ಕಾಮಗಾರಿ ಪೂರ್ಣಗೊಂಡಿವೆ. ಕುಡಿಯುವ ನೀರಿಗೆ ಹೆಚ್ಚು ಸಮಸ್ಯೆಗಳಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ ಒಂದಕ್ಕೆ 800 ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು. 

ಆಗ ಮಧ್ಯ ಪ್ರವೇಶಿಸಿದ ಉಮಾಶಂಕರ್‌, ಬೆಂಗಳೂರಿನಲ್ಲಿ 400, ಚಿತ್ರದುರ್ಗದಲ್ಲಿ 600 ರೂ.ಗೆ ಒಂದು ಟ್ಯಾಂಕರ್‌ ನೀರು ದೊರೆಯುವಾಗ 800 ರೂಗಳು ಜಾಸ್ತಿಯಾಯಿತು ಮತ್ತೂಮ್ಮೆ ಪರಿಶೀಲಿಸಿ ಎಂದಾಗ, ಅಪರ ಜಿಲ್ಲಾಧಿಧಿಕಾರಿ ಪದ್ಮ ಬಸವಂತಪ್ಪ, ಕೆಲವು ಗ್ರಾಮಗಳು ದೂರದಲ್ಲಿರುವುದರಿಂದ ಆ ವ್ಯತ್ಯಾಸ ಆಗುತ್ತಿದೆ ಎಂದರು. 

ಉದ್ಯೋಗ ಖಾತ್ರಿ ಯೋಜನೆ ಕುರಿತ ಚರ್ಚೆ ವೇಳೆ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ಷಡಾಕ್ಷರಪ್ಪ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಪ್ರಸಕ್ತ ಸಾಲಿಗೆ ಜಿಲ್ಲೆಗೆ 42.84 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಇದೀಗ 100 ರಿಂದ 150 ಮಾನವ ದಿನಗಳಿಗೆ ಅವಕಾಶ ಮಾಡಿಕೊಡಲಾಗಿದೆ.

ಪ್ರತಿ ತಾಲ್ಲೂಕಿನಲ್ಲಿ 5000 ದಿನಗಳು ಸೃಷ್ಟಿಯಾಗಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಉಮಾಶಂಕರ್‌, ಖಾತ್ರಿ ಯೋಜನೆಯಡಿ ಹೆಚ್ಚು ಜನರು ಕೆಲಸ ಮಾಡಲು ಪರಿಣಾಮಕಾರಿ ರೀತಿಯಲ್ಲಿ ಮನವೊಲಿಸಬೇಕು. ರಾಜ್ಯ ಸರ್ಕಾರ ನೀಡಿದ ಅನುದಾನದಲ್ಲಿ ಕಾರ್ಮಿಕರಿಗೆ ಪಾವತಿಸಿ, ಕೇಂದ್ರದ ಅನುದಾನದಲ್ಲಿ ಘಟಕಗಳ ಖರ್ಚಿಗೆ ಉಪಯೋಗಿಸಬಹುದು ಎಂದರು.

ಕೃಷಿ ಇಲಾಖೆ ಜಂಟಿ ನಿದೇಶಕ ವಿ. ಸದಾಶಿವ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಹವಾಮಾನ ಆಧಾರಿತ 4563, ಕೃಷಿ ಇಲಾಖೆಯಲ್ಲಿ 25000 ರೈತರು ಫಸಲ್‌ ಬಿಮಾ ಯೋಜನೆ ಅಡಿ ವಿಮೆ ಮಾಡಿಸಿದ್ದಾರೆ. ಈ ಬಾರಿ ಶೇ.50 ಇಳುವರಿ ಕಡಿಮೆ ಆಗಿದೆ. ಶೇಂಗಾ ಮತ್ತು ರಾಗಿ ಬೆಳೆಯಲ್ಲಿ ಹೆಚ್ಚು ನಷ್ಟ ಆಗಿದೆ ಎಂದು ತಿಳಿಸಿದರು. 

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್‌, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಧಿಕಾರಿ ಎಸ್‌. ಅಶ್ವತಿ,  ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ, ಯೋಜನಾ ನಿರ್ದೇಶಕ ರಂಗಸ್ವಾಮಿ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.