ನೋಟು ನಿಷೇಧದ ಬಳಿಕ ಬ್ಯಾಂಕಲ್ಲಿ 4ಲಕ್ಷ ಕೋಟಿ ಕಪ್ಪುಹಣ ಡೆಪಾಸಿಟ್ !
Team Udayavani, Jan 10, 2017, 4:18 PM IST
ನವದೆಹಲಿ:500, 1000 ರೂಪಾಯಿ ಮುಖಬೆಲೆಯ ನೋಟು ನಿಷೇಧಿಸಿದ ಬಳಿಕ 50 ದಿನದೊಳಗೆ ತೆರಿಗೆಯನ್ನು ವಂಚಿಸಿ ಸುಮಾರು 3ರಿಂದ 4 ಲಕ್ಷ ಕೋಟಿ ರೂಪಾಯಿ ಕಪ್ಪು ಹಣ ಬ್ಯಾಂಕ್ ಗಳಲ್ಲಿ ಡೆಪಾಸಿಟ್ ಆಗಿದೆ ಎಂಬ ಅಂಶವನ್ನು ಕೇಂದ್ರ ಸರ್ಕಾರ ಪತ್ತೆ ಹಚ್ಚಿದೆ.
ನವೆಂಬರ್ 9ರಿಂದ ಉತ್ತರ ಈಶಾನ್ಯ ರಾಜ್ಯಗಳ ವಿವಿಧ ಖಾತೆಗಳಲ್ಲಿ 10, 700 ಕೋಟಿಗೂ ಅಧಿಕ ನಗದು ಠೇವಣಿ ಇಡಲಾಗಿದೆ. ಅಷ್ಟೇ ಅಲ್ಲ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಠೇವಣಿ ಇಡಲಾಗಿರುವ ಸುಮಾರು 16 ಸಾವಿರ ಕೋಟಿಗೂ ಅಧಿಕ ಹಣದ ಮೇಲೆ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ ಕಣ್ಣಿದೆ ಎಂದು ವರದಿ ತಿಳಿಸಿದೆ.
ಈ ಖಾತೆಗಳ ಬಗ್ಗೆ ಸೂಕ್ಷ್ಮವಾಗಿ ಪರಿಶೀಲನೆ ನಡೆಸುವಂತೆ ಆದಾಯ ತೆರಿಗೆ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿರುವ ಹಿರಿಯ ಅಧಿಕಾರಿಯೊಬ್ಬರು, ಯಾವ ತೆರಿಗೆಯನ್ನು ವಂಚಿಸಿ 3ರಿಂದ 4ಲಕ್ಷ ಕೋಟಿ ಹಣವನ್ನು ಠೇವಣಿ ಇಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ನೋಟಿಸ್ ನೀಡುವಂತೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆಂದು ವರದಿ ವಿವರಿಸಿದೆ.
ನೋಟು ನಿಷೇಧದ ನಿರ್ಧಾರದ ನಂತರ 60 ಲಕ್ಷ ಬ್ಯಾಂಕ್ ಖಾತೆಗಳಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಹಣ ಠೇವಣಿ ಇಡಲಾಗಿದೆ ಎಂಬುದು ಅಂಕಿ, ಅಂಶಗಳ ಮಾಹಿತಿಯಿಂದ ತಿಳಿದು ಬಂದಿದ್ದು, ಒಟ್ಟಾರೆ ಈ ಖಾತೆಗಳಲ್ಲಿ 7.34 ಲಕ್ಷ ಕೋಟಿ ರೂಪಾಯಿ ಠೇವಣಿ ಇದ್ದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.