1000 ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ


Team Udayavani, Jan 11, 2017, 3:45 AM IST

10-SP-1.jpg

ಬೆಂಗಳೂರು: ರಾಜ್ಯದ ಒಂದು ಸಾವಿರ ಪೌರ ಕಾರ್ಮಿಕರಿಗೆ “ವಿದೇಶ ಪ್ರವಾಸ ಭಾಗ್ಯ’ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ಮುನ್ಸೂಚನೆಯನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ವತಿಯಿಂದ ಮಂಗಳವಾರ
ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಫಾಯಿ ಕರ್ಮಚಾರಿಗಳ ಸಬಲೀಕರಣ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಒಂದು ಸಾವಿರ ಸಫಾಯಿ ಕರ್ಮಚಾರಿಗಳನ್ನು ವಿದೇಶ ಪ್ರವಾಸಕ್ಕೆ ಕಳಿಸುವ ಚಿಂತನೆ ಸರ್ಕಾರ ಮಟ್ಟದಲ್ಲಿ ನಡೆದಿದೆ ಎಂದರು. ವಿದೇಶಗಳಲ್ಲಿ ಅಳವಡಿಸಿಕೊಳ್ಳಲಾಗಿರುವ  ಸ್ವತ್ಛತಾ ಕ್ರಮಗಳು, ಅನುಸರಿಸುವ ವಿಧಾನಗಳ ಬಗ್ಗೆ ನಮ್ಮ ಪೌರಕಾರ್ಮಿಕರು ತಿಳಿದುಕೊಳ್ಳ ಬೇಕು. ಜೊತೆಗೆ ವಿದೇಶಗಳಲ್ಲಿನ ಪೌರ ಕಾರ್ಮಿಕರ ಜೀವನ ಮಟ್ಟ, ಆರೋಗ್ಯ ಹೇಗಿರುತ್ತದೆ. ಅಲ್ಲಿನ
ಸರ್ಕಾರಗಳು ಅವರನ್ನು ಯಾವ ರೀತಿ ನಡೆಸಿಕೊ ಳ್ಳುತ್ತಾರೆ ಎಂದು ನೋಡಲು ಇಲ್ಲಿನ ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಚಿಂತನೆ ಇದೆ. ಅಲ್ಲಿನ ಸ್ಥಿತಿಗಳ ಅಧ್ಯಯನದ ಜೊತೆಗೆ ತಮ್ಮ ಜೀವನದ ಹಂಗು ತೊರೆದು ಸ್ವತ್ಛತೆಯಲ್ಲಿ ತೊಡಗಿಸಿಕೊಂಡವರಿಗೆ ಗೌರವ ನೀಡಲು ಈ ವಿದೇಶ ಪ್ರವಾಸ ಆಯೋಜಿಸುವ ಉದ್ದೇಶ ಎಂದರು.

ಪೋಸು ಕೊಟ್ಟರೆ ಸ್ವತ್ಛ ಆಗಲ್ಲ: “ರಾಜಕಾರಣಿ ಗಳು ಬೀದಿಯಲ್ಲಿ ಪೊರಕೆ ಹಿಡಿದು ಕ್ಯಾಮರಾಗಳಿಗೆ ಪೋಸು ಕೊಟ್ಟರೆ ಭಾರತ ಸ್ವತ್ಛ ಆಗುವುದಿಲ್ಲ. ಅಲ್ಲದೇ ಸ್ವತ್ಛ ಭಾರತ ಯೋಜನೆಯೂ ಸಾಕಾರಗೊಳ್ಳುವುದಿಲ್ಲ. ಸ್ವತ್ಛ ಭಾರತ ಯೋಜನೆ ಯಶ್ವಸಿಯಾಗಬೇಕಾದರೆ 
ಪೌರ ಕಾರ್ಮಿಕರ ಪಾತ್ರ ಮುಖ್ಯ. ಸ್ವತ್ಛ ಭಾರತದ ಎಲ್ಲ ಶ್ರೇಯಸ್ಸು ಪೌರ ಕಾರ್ಮಿಕರಿಗೆ ಸಲ್ಲುತ್ತದೆ. ಆದ್ದರಿಂದ ಪೌರ ಕಾರ್ಮಿಕರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ’ ಎಂದು ಆಂಜನೇಯ ತಿಳಿಸಿದರು. ಈಗಾಗಲೇ ಗುತ್ತಿಗೆ ಪದ್ದತಿಯನ್ನು ರದ್ದುಗೊ ಳಿಸಲಾಗಿದೆ. ಸ್ಥಳೀಯ ಪೌರ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ನೇಮಕಾತಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಾಗುತ್ತಿದೆ. ಪೌರ ಕಾರ್ಮಿಕರಿಗೆ 14 ಸಾವಿರ ರೂ. ವೇತನ ನೀಡಲಾಗುತ್ತಿದ್ದು, ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಸಫಾಯಿ ಕರ್ಮಚಾರಿಗಳ ಮನೆಗಳ ನಿರ್ಮಾಣಕ್ಕೆ ಎಸ್‌ ಸಿಪಿ-ಟಿಎಸ್‌ಪಿ ಯೋಜನೆಯಡಿ 200 ಕೋಟಿ ರೂ. ಮೀಸಲಿಡಲಾಗಿದೆ. ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮ ಸ್ಥಾಪಿಸಲು ಉದ್ದೇಶಿಸಲಾಗಿದ್ದು,
ಅದಕ್ಕಾಗಿ 25 ಕೋಟಿ ರೂ. ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ವೆಂಕಟೇಶ್‌, ಅಂಬೇಡ್ಕರ್‌ ಅಭಿವೃದಿಟಛಿ ನಿಗಮದ ಅಧ್ಯಕ್ಷ ಬಸವರಾಜು ಮತ್ತಿತರರು ಇದ್ದರು.

ಪೌರಕಾರ್ಮಿಕರ ಶೋಷಕರ ವಿರುದ್ದ ಗೂಂಡಾ ಕಾಯ್ದೆ ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ, ವ್ಯವಸ್ಥೆಯ 
ಕೆಲವೊಂದು ನ್ಯೂನತೆಗಳನ್ನು ದುರ್ಬಳಕೆ ಮಾಡಿಕೊಂಡು ಪೌರ ಕಾರ್ಮಿಕರ ಶೋಷಣೆ ಮಾಡುವ ವ್ಯವಸ್ಥಿತಿ ಜಾಲ ಕೆಲಸ 
ಮಾಡುತ್ತಿದೆ. ಈ ರೀತಿ ಪೌರ ಕಾರ್ಮಿಕರನ್ನು ಶೋಷಣೆ ಮಾಡುವ ಅಥವಾ ಅದಕ್ಕೆ ಕುಮ್ಮಕ್ಕು ನೀಡುವ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಕೆಲಸ ಮಾಡದ ಕೆಲವೊಂದು ಪುಡಾರಿ ಪೌರ ಕಾರ್ಮಿಕರ ವಿರುದ್ದ ಗೂಂಡಾ ಕಾಯ್ದೆ ಬಳಸುವ ಅವಶ್ಯಕತೆ ಇದೆ ಎಂದು ಸಚಿವ ಆಂಜನೇಯ ಪ್ರತಿಪಾದಿಸಿದರು.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.