ಸರ್ವೇ ನಂ.4 ವ್ಯಾಪ್ತಿ ಬಡಾವಣೆ ನಿವಾಸಿಗಳ ಪ್ರತಿಭಟನೆ
Team Udayavani, Jan 11, 2017, 12:40 PM IST
ಮೈಸೂರು: ಕುರುಬಾರಹಳ್ಳಿ ಸರ್ವೇ ಸಂಖ್ಯೆ.4 ವ್ಯಾಪ್ತಿಯ ಬಡಾವಣೆ ನಿವಾಸಿಗಳ ಸಮಸ್ಯೆ ಪರಿಹರಿಸಲು ವಿಫಲ ವಾಗಿರುವ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಸ್ಥಳೀಯ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ನಜ‚ರ್‌ಬಾದ್ ಠಾಣೆ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕುರುಬಾರಹಳ್ಳಿ ಸರ್ವೆ ಸಂಖ್ಯೆ.4ರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿಫಲವಾಗಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಹಲವು ವರ್ಷಗಳಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕುರುಬಾರಹಳ್ಳಿ ಸರ್ವೇ ಸಂಖ್ಯೆ.4ರಲ್ಲಿ ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಬಡಾವಣೆಗಳನ್ನು ಸರ್ಕಾರ ಇದೀಗ ಬಿ ಕರಾಬು ಜಾಗವೆಂದು ಘೋಷಿಸಿದೆ. ಇದರಿಂದಾಗಿ ಈ ಭಾಗದ ನಿವಾಸಿಗಳು ಯಾವುದೇ ರೀತಿಯ ಭೂ ವ್ಯವಹಾರ ನಡೆಸದಂತೆ ತಡೆಯೊಡ್ಡಿರುವುದು ಖಂಡನೀಯ.
ಇದರಿಂದಾಗಿ ನಿವೇಶನ ಅಥವಾ ಮನೆಗಳನ್ನು ಮಾರಾಟ ಮಾಡಲು, ಖರೀದಿಸಲು ಹಾಗೂ ಭೂ ವ್ಯವಹಾರ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸುವಂತೆ ಈಗಾಗಲೇ ಸಾಕಷ್ಟು ಹೋರಾಟ ನಡೆಸಿದರೂ ಸರ್ಕಾರ ಹಾಗೂ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ಹೊರಹಾಕಿದರು.
ಪ್ರತಿಭಟನೆಯಲ್ಲಿ ಉಪಮೇಯರ್ ರತ್ನಾ ಲಕ್ಷ್ಮಣ್, ಮಾಜಿ ಉಪಮೇಯರ್ ಎಂ. ಮಹದೇವಮ್ಮ, ಬಿಜೆಪಿ ಮುಖಂಡರಾದ ಬಿ.ಪಿ. ಮಂಜುನಾಥ್, ಪತ್ರಿಕೋದ್ಯಮಿ ಕೆ.ಬಿ. ಗಣಪತಿ, ಡಾ. ಅನಿಲ್ ಥಾಮಸ್, ಆನಂದ್, ಮುರುಳಿ, ಕೆ. ಮಾದೇಶ್ ಇನ್ನಿತರರು ಪಾಲ್ಗೊಂಡಿದ್ದರು.
ಅಧಿಕಾರಿಗಳ ವಿರುದ್ಧ ಠಾಣೆಯಲ್ಲಿ ದೂರು
ಕುರುಬಾರಹಳ್ಳಿ ಸರ್ವೇ ಸಂಖ್ಯೆ.4 ವ್ಯಾಪ್ತಿಯ ಬಡಾವಣೆಯಲ್ಲಿನ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರು ಸಾಕಷ್ಟು ಹೋರಾಟ ನಡೆಸಿದ್ದಾರೆ. ಆದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಈ ಹಿನ್ನೆಲೆಯಲ್ಲಿ ಬಡಾವಣೆ ನಿವಾಸಿಗಳ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಕಂದಾಯ ಇಲಾಖೆ ಕಾರ್ಯದರ್ಶಿ, ಮುಡಾ ಆಯುಕ್ತ ಹಾಗೂ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಆದರೆ ದೂರು ಸ್ವೀಕರಿಸಿದ ನಜರ್‌ಬಾದ್ ಠಾಣೆ ಇನ್ಸ್ ಪೆಕ್ಟರ್ ಎಂ.ಎಲ್.ಶೇಖರ್, ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ದೂರು ದಾರರಿಗೆ ಎನ್‌ಸಿಆರ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.