ವಿನಯಶೀಲತೆ ಇಲ್ಲದಿದ್ದಲ್ಲಿ ವಿದ್ಯೆ ಒಲಿಯದು: ಪ್ರೊ| ರೆಡ್ಡಿ


Team Udayavani, Jan 11, 2017, 12:46 PM IST

dvg1.jpg

ದಾವಣಗೆರೆ: ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಶಿಸ್ತಿನ ಸಿಪಾಯಿಗಳಾಗುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನಿವೃತ್ತ ಉಪನ್ಯಾಸಕ ಪ್ರೊ| ಸಿ. ತಿಪ್ಪೇಸ್ವಾಮಿ ರೆಡ್ಡಿ ಸಲಹೆ ನೀಡಿದ್ದಾರೆ. 

ಮಂಗಳವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಚಿನ್ನಮ್ಮ ಮಹೇಶ್ವರಯ್ಯ ಪಿಯು ಕಾಲೇಜು ಸಹಯೋಗದಲ್ಲಿ ಶಾಲಾ ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿ ಜೀವನದ ವ್ಯಕ್ತಿತ್ವ ವಿಕಸನ… ಕುರಿತು ಮಾತನಾಡಿದರು.

ಯಾವುದೇ ವಿದ್ಯಾರ್ಥಿಯಲ್ಲಿ ವಿನಯಶೀಲತೆ ಇಲ್ಲದಿದ್ದರೆ ವಿದ್ಯೆ ಒಲಿಯುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ವಿನಯಶೀಲತೆ ಬೆಳೆಸಿಕೊಳ್ಳಬೇಕು ಎಂದರು. ವ್ಯಕ್ತಿತ್ವ ಪ್ರತಿಯೊಬ್ಬರಲ್ಲೂ ಅರಿವು ಮತ್ತು ಜಾಗೃತಿಯನ್ನುಂಟು ಮಾಡುತ್ತದೆ. ನಯ-ವಿನಯ ಎಲ್ಲಿಯವರೆಗೂ ಕಲಿಯುವುದಿಲ್ಲವೋ ಅಲ್ಲಿಯವರೆಗೆ ಜೀವನದ ಗುರಿ ತಲುಪಲು ಸಾಧ್ಯವಿಲ್ಲ. ಸಂಸ್ಕಾರ ಹೊಂದಿದಾಗ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಲು ಸಾಧ್ಯವಾಗುತ್ತದೆ.

ಶರೀರ ಸದೃಢವಾಗಲು ಯೋಗ, ವ್ಯಾಯಾಮ, ಧ್ಯಾನದಲ್ಲಿ ತೊಡಗಿಸಿಕೊಳ್ಳಬೇಕು. ಆದರೆ, ಪ್ರಸ್ತುತ ದಿನದಲ್ಲಿ ಜಂಕ್‌ಫುಡ್‌ಗೆ ಮೊರೆ ಹೋಗುವ ವಿದ್ಯಾರ್ಥಿಗಳು ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು. ಮಹಿಳಾ ಸಮಾಜದ ಅಧ್ಯಕ್ಷೆ ಕಂಚಿಕೆರೆ ಸುಶೀಲಮ್ಮ ಮಾತನಾಡಿ, ಈಗ ವಿದ್ಯಾರ್ಥಿಗಳು ಟಿವಿ, ಮೊಬೈಲ್‌, ಕಂಪ್ಯೂಟರ್‌ನಲ್ಲಿ ಮೈ ಮರೆತು ಓದುವುದರಲ್ಲಿ ಹಿಂದೆ ಬೀಳುತ್ತಿದ್ದಾರೆ. 

ವಿದ್ಯಾರ್ಥಿಗಳಲ್ಲೇ ಓದುವ ಅಭ್ಯಾಸ ಮತ್ತು ಹವ್ಯಾಸ ದೂರವಾಗುತ್ತಿರುವುದು ಗಂಭೀರವಾಗಿ ಚಿಂತಿಸಬೇಕಾದ ವಿಚಾರ ಎಂದು ಆತಂಕ ವ್ಯಕ್ತಪಡಿಸಿದರು. ಮಹಾನ್‌ ವಚನಕಾರ್ತಿ ಅಕ್ಕಮಹಾದೇವಿ, ಬಸವಣ್ಣ ಮುಂತಾದವರು ಜೀವನದ ಅನುಭವವನ್ನು ವಚನದ ರೂಪದಲ್ಲಿ ತಂದಿದ್ದಾರೆ. ಕುವೆಂಪು, ದ.ರಾ.ಬೇಂದ್ರೆ, ಕಾರಂತರವರು ಈಗಿನ ಆಗುಹೋಗುಗಳ ಬಗ್ಗೆ ಪುಸ್ತಕಗಳಲ್ಲಿ ಉಲ್ಲೇಖೀಸಿದ್ದಾರೆ.

ಅಂಥಹ ಪುಸ್ತಕ ಓದುವಂತಹ ಹವ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡ ಸಾಹಿತ್ಯದ ಪುಸ್ತಕಗಳನ್ನು ಓದಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಹಿಂದಿನ ಸಿನಿಮಾ ಸಾಹಿತ್ಯದಲ್ಲಿ ಒಳ್ಳೆಯ ಸಾಹಿತ್ಯ, ವಿಚಾರ ಮೂಡಿಬರುತ್ತಿದ್ದವು. ಆದರೆ, ಈಗಿನ ಸಿನಿಮಾ ಸಾಹಿತ್ಯ ಕೇಳುವುದಕ್ಕೂ ಸಹ ಕಷ್ಟಕರವಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಮಕ್ಕಳು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಕಾಲೇಜು ಪ್ರಾಚಾರ್ಯೆ ಎಚ್‌.ಎಂ. ಪುಟ್ಟಮ್ಮ ಮಹಾರುದ್ರಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ವಾಮದೇವಪ್ಪ, ಸಾಲಿಗ್ರಾಮ ಗಣೇಶ್‌ ಶೆಣೈ, ಎಸ್‌.ಎಂ. ಮಲ್ಲಮ್ಮ, ಸದಾಶಿವಪ್ಪ, ಜಯಶೀಲ ಇತರರು ಇದ್ದರು.  

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.