ಸಚಿವ ಪಾಸ್ವಾನ್ ದೇಹಾರೋಗ್ಯ ಸುಧಾರಣೆ; ಆದರೂ ICUನಲ್ಲಿ ಮುಂದುವರಿಕೆ
Team Udayavani, Jan 13, 2017, 11:32 AM IST
ಪಟ್ನಾ : ನಿನ್ನೆ ಗುರುವಾರ ರಾತ್ರಿ 8.30ರ ಸುಮಾರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣಕ್ಕೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಐಸಿಯು ಗೆ ದಾಖಲಾಗಿದ್ದ 70ರ ಹರೆಯದ ಕೇಂದ್ರ ಸಚಿವ ಹಾಗೂ ಎಲ್ಜೆಪಿ ಅಧ್ಯಕ್ಷರಾಗಿರುವ ರಾಮ್ವಿಲಾಸ್ ಪಾಸ್ವಾನ್ ಅವರ ದೇಹಾರೋಗ್ಯ ಈಗ ಗಮನಾರ್ಹವಾಗಿ ಸುಧಾರಿಸಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ; ಆದರೂ ಐಸಿಯುನಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
“ಪಾಸ್ವಾನ್ ಜೀ ಅವರ ಆರೋಗ್ಯ ಈಗ ದೃಢವಾಗಿದೆ’ ಎಂದು ಇಲ್ಲಿನ ಎಚ್ಐಂಆರ್ಐ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರಾಗಿರುವ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.
ಸಚಿವ ಪಾಸ್ವಾನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ವರದಿಯನ್ನು ಅನುಸರಿಸಿ ಐಸಿಯುನಿಂದ ಹೊರಗೆ ವರ್ಗಾಯಿಸುವ ನಿರ್ಧಾರವನ್ನು ಮಧ್ಯಾಹ್ನದ ಬಳಿಕ ಕೈಗೊಳ್ಳಲಾಗುವುದು ಎಂದು ವಿಶೇಷ ಕರ್ತವ್ಯನಿರತ ಅಧಿಕಾರಿ ಆರ್ ಸಿ ಮೀಣ ತಿಳಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೈದ್ಯರಿಗೆ ಫೋನ್ ಮಾಡಿ ಪಾಸ್ವಾನ್ ಅವರ ದೇಹಾರೋಗ್ಯವನ್ನು ವಿಚಾರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.