ಶಿಕ್ಷಣ ಸಂಸ್ಥೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Team Udayavani, Jan 15, 2017, 3:45 AM IST

14ul1.jpg

ಉಳ್ಳಾಲ: ಯೇನಪೊಯಮೊಯ್ದಿನ್‌ ಕುಂಞಿ ಮೆಮೋರಿಯಲ್‌ ಎಜುಕೇಶನಲ್‌ ಮತ್ತು ಚಾರಿಟೆಬಲ್‌ ಟ್ರಸ್ಟ್‌ನ ಘಟಕ ಯೇನಪೊಯ ಫೌಂಡೇಶನ್‌ ಹಾಗೂ ಯೇನಪೊಯ ವಿಶ್ವವಿದ್ಯಾನಿಲಯದ ಸಹಯೋಗ ದೊಂದಿಗೆ ಶೇ. 100 ಫ‌ಲಿತಾಂಶ ದಾಖಲಿಸಿದ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರತಿಭಾಪುರಸ್ಕಾರ ಪ್ರದಾನ ಕಾರ್ಯಕ್ರಮ ಶನಿವಾರ ಯೇನಪೊಯ ವಿ.ವಿ. ಕ್ಯಾಂಪಸ್‌ನಲ್ಲಿರುವ ಯೆಂಡ್ನೂರೆನ್ಸ್‌ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷ ನಾಸಿರ್‌ ಅಹ್ಮದ್‌ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳನ್ನು ಗೌರವಿಸುವ ಮೂಲಕ ಯೇನಪೊಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಉನ್ನತ ಶಿಕ್ಷಣಕ್ಕೆ
ರಾಜ್ಯ ಸರಕಾರವೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಲ್ಪ ಸಂಖ್ಯಾಕ ಅಭಿವೃದ್ಧಿ ನಿಗಮದಡಿ ವಿದೇಶದಲ್ಲಿ ಕಲಿಯುವ ಅಲ್ಪಸಂಖ್ಯಾಕ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ 10 ಲಕ್ಷ ರೂ.ವನ್ನು ಈ ಬಾರಿ 20 ಲಕ್ಷರೂ.ಗೇರಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 367 ವಿದ್ಯಾರ್ಥಿ ಗಳಿಗೆ ಅನುದಾನ ಮಂಜೂರು ಮಾಡಿದೆ ಎಂದರು.

ಯೇನಪೊಯ ವಿ.ವಿ. ಕುಲಾಧಿಪತಿ ವೈ. ಅಬ್ದುಲ್ಲ ಕುಂಞಿ ಮಾತನಾಡಿ, ಯೇನಪೊಯ ಸಂಸ್ಥೆ ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೈದ ಸಂಸ್ಥೆಗಳನ್ನು ಗುರುತಿ ಸುವ ಕೆಲಸ ಮಾಡುತ್ತಿದ್ದು, ಆ ಮೂಲಕಇತರ ಶೈಕ್ಷಣಿಕ ಸಂಸ್ಥೆಗಳು ಉತ್ತಮ ಸಾಧನೆ ತೋರಲು ಅವಕಾಶ ಮಾಡಿ ಕೊಟ್ಟಿದೆ. ಇದರೊಂದಿಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್‌ ಕೋರ್ಸ್‌ಗಳಲ್ಲಿ ಕಲಿಯುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಉಚಿತ ಸೀಟು ನೀಡುವ ಕಾರ್ಯ ನಡೆಸುತ್ತಿದೆ ಎಂದರು. ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿ ಹಾಗೂ ಸ್ನಾತಕ ಪದವಿ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ 307 ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಶೇ. 100 ಫಲಿತಾಂಶ ದಾಖಲಿಸಿದ 17 ಶೈಕ್ಷಣಿಕ ಸಂಸ್ಥೆಗಳನ್ನು ಗೌರವಿಸಲಾಯಿತು.

ಯೇನಪೊಯ ಫೌಂಡೇಶನ್‌ ಚೇರ್‌ವೆುನ್‌ ವೈ. ಮಹಮ್ಮದ್‌ ಕುಂಞಿಅಧ್ಯಕ್ಷತೆ ವಹಿಸಿದ್ದರು. ಯೇನಪೊಯ ವಿ.ವಿ. ಕುಲಪತಿ ಡಾ| ಕೆ. ವಿಜಯ್‌ ಕುಮಾರ್‌, ಡಾ| ಅಖ್ತರ್‌ ಹುಸೈನ್‌, ಖಾಲಿದ್‌ ಬಾವಾ, ಶಫಿ ಅಹ್ಮದ್‌, ಯೇನಪೊಯ ವಿ.ವಿ. ಕುಲಸಚಿವ ಡಾ| ಎಸ್‌.ಶ್ರೀಕುಮಾರ್‌ ಮೆನನ್‌ ಉಪಸ್ಥಿತರಿದ್ದರು.ಟ್ರಸ್ಟಿ ಅಬ್ದುಲ್ಲ ಜಾವೇದ್‌ ಸ್ವಾಗತಿಸಿದರು. ರೋಶೆಲ್‌ ಟೆಲ್ಲಿಸ್‌ ಹಾಗೂ ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರ್ವ ಹಿಸಿದರು. ಯೇನಪೊಯ ವಿ.ವಿ.ಯ ವೈ. ಮೊಯ್ದಿನ್‌ ಖುರ್ಷಿದ್‌ ಅವರು ವಂದಿಸಿದರು.

ಟಾಪ್ ನ್ಯೂಸ್

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರಿಗೆ “ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರಿಗೆ “ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.