ಪಂಜಾಬ್ನ ಮಾಜಿ ಮುಖ್ಯಮಂತ್ರಿ ಬರ್ನಾಲಾ ನಿಧನ
Team Udayavani, Jan 15, 2017, 8:57 AM IST
ಚಂಡೀಗಢ: ಖಲಿಸ್ತಾನ್ ಉಗ್ರರ ಉಪಟಳಕ್ಕೆ ತುತ್ತಾಗಿದ್ದ ಪಂಜಾಬ್ನಲ್ಲಿ ಶಾಂತಿ ಮರುಸ್ಥಾಪಿಸುವಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದ ಪಂಜಾಬ್ನ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಮಾಜಿ ರಾಜ್ಯಪಾಲ ಸುರ್ಜಿತ್ ಸಿಂಗ್ ಬರ್ನಾಲಾ (91) ಶನಿವಾರ ಇಲ್ಲಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಬರ್ನಾಲಾ ಅವರನ್ನು ಇಲ್ಲಿನ ಪಿಜಿಐಎಂಇಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅಕಾಲಿದಳದ ಸುಧಾರಣಾವಾದಿಗಳ ಪೈಕಿ ಒಬ್ಬರಾಗಿದ್ದ ಬರ್ನಾಲಾ, 1985-87ರಲ್ಲಿ ಮುಖ್ಯಮಂತ್ರಿಯಾಗಿದ್ದರು.
ನಂತರದ ದಿನಗಳಲ್ಲಿ ಅವರು ತಮಿಳುನಾಡು, ಉತ್ತರಾಖಂಡ, ಅಂಡಮಾನ್, ಆಂಧ್ರ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಬರ್ನಾಲಾ ತಮಿಳುನಾಡು ರಾಜ್ಯಪಾಲರಾಗಿದ್ದ ಅವಧಿಯಲ್ಲಿ ಚಂದ್ರಶೇಖರ್ ನೇತೃತ್ವದ ಕೇಂದ್ರ ಸರಕಾರವು, 1991ರಲ್ಲಿ ಅಂದಿನ ಡಿಎಂಕೆ ಸರಕಾರ ವಜಾಕ್ಕೆ ಶಿಫಾರಸು ಮಾಡುವಂತೆ ಸೂಚಿಸಿತ್ತು. ಆದರೆ ಇದಕ್ಕೆ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಬಿಹಾರಕ್ಕೆ ವರ್ಗ ಮಾಡಲಾಗಿತ್ತು. ಇದರಿಂದ ಬೇಸತ್ತ ಅವರು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು. ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ಬರ್ನಾಲಾ ಕೃಷಿ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.