ಆಯುಷ್‌ ವೈದ್ಯರಿಗೆ ಆಲೋಪತಿ ತರಬೇತಿ


Team Udayavani, Jan 16, 2017, 3:45 AM IST

doctor.jpg

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ನೀಗಿಸಲು ಆಯುಷ್‌ ವೈದ್ಯರಿಗೆ ತರಬೇತಿ ನೀಡಿ ತುರ್ತು ಸಂದರ್ಭದಲ್ಲಿ ಆಲೋಪತಿ ಚಿಕಿತ್ಸೆ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದ ಬಳಿಕ ಈ ವಿಚಾರದಲ್ಲಿ ಆಯುಷ್‌ ಮತ್ತು ಆಲೋಪತಿ ವೈದ್ಯರ ಮುಸುಕಿನ ಗುದ್ದಾಟ, ಬಹಿರಂಗ ಕಾದಾಟವಾಗಿ ಪರಿವರ್ತನೆಯಾಗುವ ಲಕ್ಷಣ ಕಾಣಿಸಿಕೊಂಡಿದೆ.

ಈ ಕುರಿತಂತೆ ಆಲೋಪತಿ ವೈದ್ಯರು ಮತ್ತು ಆಯುಷ್‌ ವೈದ್ಯರ ನಡುವೆ ಸವಾಲು- ಪ್ರತಿಸವಾಲುಗಳು ಆರಂಭವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಸರ್ಕಾರ ಕಸರತ್ತು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರದ ಆದೇಶವನ್ನು ಆಯುಷ್‌ ವೈದ್ಯರು ಸ್ವಾಗತಿಸಿದರೆ, ಆಲೋಪತಿ ವೈದ್ಯರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಮಧ್ಯೆ, ಭಾರತೀಯ ವೈದ್ಯಕೀಯ ಅಸೋಷಿಯೇಶನ್‌ (ಐಎಂಎ) ಸರ್ಕಾರದ ನಡೆಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದೆ. ಆಲೋಪತಿ ಔಷಧ ಬಳಸಲು ಆಯುಷ್‌ ವೈದ್ಯರಿಗೆ ಅನುಮತಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಐಎಂಎ, ತಕ್ಷಣವೇ ಆದೇಶ ರದ್ದುಪಡಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದೆ.

ಸರ್ಕಾರದ ನಿರ್ಧಾರ ತೀರಾ ಏಕಪಕ್ಷೀಯ ಮತ್ತು ವಿವೇಚನಾರಹಿತವಾಗಿದೆ. ಸಾಧಕ-ಬಾಧಕಗಳ ಬಗ್ಗೆ ಆಳವಾದ ವಿಮರ್ಶೆ ಇಲ್ಲದೆ ಕೈಗೊಂಡ ತೀರ್ಮಾನವಾಗಿದೆ. ಅಲ್ಲದೆ, ಈ ನಿರ್ಧಾರ ಗ್ರಾಮೀಣ ಭಾಗದಲ್ಲಿ ಬಡವರ, ಮಹಿಳೆಯರ ಮತ್ತು ಮಕ್ಕಳ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಐಎಂಎನ ರಾಜ್ಯ ವಲಯದ ಅಧ್ಯಕ್ಷ ಡಾ.ರಾಜಶೇಖರ್‌ ಬಳ್ಳಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಅಲೋಪತಿ ವೈದ್ಯರ ವಾದವನ್ನು ಆಯುಷ್‌ ವೈದ್ಯರು ನಿರಾಕರಿಸಿದ್ದು, ವಾಸ್ತವಾಂಶ ಅರಿಯದೆ ಅಲೋಪತಿ ವೈದ್ಯರು ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಂತರ ರೂ.ವೆಚ್ಚ ಮಾಡಿ ಆಲೋಪತಿ ವೈದ್ಯಕೀಯ ವಿಭಾಗದಲ್ಲಿ ಎಂಬಿಬಿಎಸ್‌ ಮತ್ತು ಸ್ನಾತಕೋತ್ತರ ಪದವಿ ಗಳಿಸಿದ ಅಭ್ಯರ್ಥಿಗಳಾರೂ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವುದಿಲ್ಲ. ವಿದ್ಯಾಭ್ಯಾಸದ ಅವಧಿಯಲ್ಲಿ ಮಾಡಿದ ವೆಚ್ಚ ಗಳಿಸಲು ವಿದೇಶಕ್ಕೆ ತೆರಳಲು ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುತ್ತಾರೆ. ಈ ಸತ್ಯವನ್ನು ಒಪ್ಪಿಕೊಳ್ಳಲು ಯಾರೂ ಸಿದ್ದರಿಲ್ಲ ಎಂದು ಕಟುವಾಗಿ ಹೇಳುತ್ತಾರೆ.

ಅಷ್ಟಕ್ಕೂ ಸರ್ಕಾರ ಅನುಮತಿ ನೀಡುತ್ತಿರುವುದು ಪ್ರಾಥಮಿಕ ಚಿಕಿತ್ಸೆಗೆ ಅನುಕೂಲವಾಗುತ್ತದೆಯೇ ಹೊರತು ತಜ್ಞ ವೈದ್ಯಕೀಯ ವೃತ್ತಿಗಲ್ಲ ಎಂಬುದನ್ನು ಅಲೋಪತಿ ವೈದ್ಯರು ಅರಿತುಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಮುಂದಾಗದೆ ಬಹಳಷ್ಟು ವೈದ್ಯರು ದಂಡ ಕಟ್ಟಿದ್ದಾರೆ. ಅಲ್ಲದೆ, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರು ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ನಂತರ ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರು ಯಾರು? ಎಂದು ಪ್ರಶ್ನಿಸುತ್ತಾರೆ.

ಈ ಹಿಂದೆ ನೇರ ನೇಮಕಾತಿ ವೇಳೆ ಗ್ರಾಮೀಣ ಭಾಗಕ್ಕೆ ಬಹಳಷ್ಟು ವೈದ್ಯರು ಹೋಗದಿರುವುದನ್ನು ಗ್ರಾಮೀಣ ಭಾಗದ ಜನರ ಬಗ್ಗೆ ಈಗ ಕಾಳಜಿ ವ್ಯಕ್ತಪಡಿಸುತ್ತಿರುವ ಅಲೋಪತಿ ವೈದ್ಯರು ಪ್ರಶ್ನಿಸಿದ್ದಾರೆಯೇ? ಅಥವಾ ಯಾರ ವಿರುದ್ಧವಾದರೂ ಕ್ರಮ ಕೈಗೊಂಡಿದ್ದಾರೆಯೇ ಎಂಬುದನ್ನು ತಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ಸರ್ಕಾರದ ಸ್ಪಷ್ಟನೆ: 
ಈ ವಾದ-ಪ್ರತಿವಾದಗಳ ಬಗ್ಗೆ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿರುವ ಸರ್ಕಾರ, ಆಯುಷ್‌ ವೈದ್ಯರು ಆಲೋಪತಿ ಚಿಕಿತ್ಸೆ ನೀಡುವ ಸಂಬಂಧ ರಾಜ್ಯಮಟ್ಟದ ಆಂತರಿಕ ಇಲಾಖಾ ಸಮಿತಿ ರಚಿಸಲಾಗಿತ್ತು. ಸಮಿತಿಯ ಅಧ್ಯಕ್ಷರಾಗಿ ಔಷಧ ನಿಯಂತ್ರಕರನ್ನು ನೇಮಿಸಲಾಗಿದ್ದು, ಆ ಸಮಿತಿ ತರಬೇತಿ ಮತ್ತು ಅಧ್ಯಯನದ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಿ ಸಲ್ಲಿಸಿದ ವರದಿಯನ್ವಯ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ. 

ಆಯುಷ್‌ ವೈದ್ಯರು ಆಲೋಪತಿ ಔಷಧ ಬಳಕೆಗೆ ಸಂಬಂಧಿಸಿದಂತೆ ಆರು ತಿಂಗಳ ಔಷಧ ಶಾಸ್ತ್ರ ವಿಷಯ ಸೇರಿದಂತೆ ವಿವಿಧ ಚಿಕಿತ್ಸಾ ಪದ್ಧತಿ ಮತ್ತು ಕ್ರಮಗಳ ಬಗ್ಗೆ ಆಯಾ ಜಿಲ್ಲಾಸ್ಪತ್ರೆಗಳಲ್ಲಿ ತರಬೇತಿ ನೀಡಬಹುದು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಇದು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯವನ್ನು ಸಮಿತಿ ವ್ಯಕ್ತಪಡಿಸಿದೆ. ಅಲ್ಲದೆ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ ಆಯುಷ್‌ ವೈದ್ಯರು ಆಲೋಪತಿ ಚಿಕಿತ್ಸೆ ನೀಡುವ ಮಾದರಿಯನ್ನು ಅನುಸರಿಸಲಾಗುತ್ತಿದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಈ ಪದ್ಧತಿ ಅಳವಡಿಸಿಕೊಂಡು ಸಾರ್ವಜನಿಕ ಹಿತದೃಷ್ಟಿಯಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದೆ.

ಆಯುಷ್‌ ವೈದ್ಯರಿಗೆ ಯಾರಿಂದಲೋ ಅರೆಬರೆ ತರಬೇತಿ ನೀಡಿ, ಪ್ರಮಾಣ ಪತ್ರ ನೀಡುವುದು ಮತ್ತು ಯಾವುದೋ ನಿಯಮದಂತೆ ಅನುಮತಿ ನೀಡುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು. ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಬದಲು ಆಲೋಪತಿ ವೈದ್ಯರಿಗೆ ಹೆಚ್ಚಿನ ವೇತನ, ಸವಲತ್ತುಗಳನ್ನು ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿಯೋಜಿಸಬೇಕು.
– ಡಾ.ರಾಜಶೇಖರ್‌ ಬಳ್ಳಾರಿ, ಐಎಂಎ ರಾಜ್ಯ ವಲಯ ಅಧ್ಯಕ್ಷ .

ರಾಜ್ಯದಲ್ಲಿ 2,207 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 800 ಆಯುಷ್‌ ವೈದ್ಯಾಧಿಕಾರಿಗಳು ನೇಮಕಗೊಂಡಿದ್ದಾರೆ. ಅವರಿಗೆ ತರಬೇತಿ ನೀಡಿ ತುರ್ತು ಸಂದರ್ಭದಲ್ಲಿ ಆಲೋಪತಿ ಚಿಕಿತ್ಸೆ ನೀಡಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟಲು ಇದು ಸಹಕಾರಿಯಾಗಲಿದೆ.
– ಡಾ.ನಸೀಮ್‌ ಅಹ್ಮದ್‌, ಕರ್ನಾಟಕ ಯುನಾನಿ ವೆಲ್ಫೆàರ್‌ ಫೌಂಡೇಷನ್‌ ಟ್ರಸ್ಟ್‌.

– ಪ್ರಭುಸ್ವಾಮಿ ನಟೇಕರ್‌

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.