ದೊಡ್ಡಹೆಜ್ಜೂರಲ್ಲಿ ಪ್ರಥಮ ವೀರಾಂಜನೇಯ ಸ್ವಾಮಿ ರಥೋತ್ಸವ

Team Udayavani, Jan 16, 2017, 12:24 PM IST

mys1.jpg

ಹುಣಸೂರು: ತಾಲೂಕಿನ ದೊಡ್ಡಹೆಜ್ಜೂರಿನಲ್ಲಿ ಪ್ರಥಮ ಶ್ರೀವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ಅದ್ಧೂರಿಯಿಂದ ನಡೆಯಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಲಕ್ಷ್ಮಣತೀರ್ಥ ನದಿ ದಂಡೆಯಲ್ಲಿರುವ ನೂರಾರು ವರ್ಷಗಳ ಐತಿಹ್ಯವುಳ್ಳ ಈ ದೇವಾಲಯದಲ್ಲಿ ಸಂಕ್ರಾಂತಿ ಹಬ್ಬದ ಮಾರನೇ ದಿನ ಈ ರಥೋತ್ಸವ ಆಯೋಜಿಸಲಾಗುತ್ತಿದೆ. ಭಾನುವಾರ ಮಧ್ಯಾಹ್ನ 2.30ಕ್ಕೆ ರಥೋತ್ಸವ ಆರಂಭವಾಯಿತು. ರಥ ಎಳೆಯುವ ಮುನ್ನ ಶ್ರೀವೀರಾಂಜನೇಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರತಂದು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಲಾಯಿತು.

ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳರಿಸಿದ ನಂತರ ಸಾವಿರಾರು ಭಕ್ತರು ಆಂಜನೇಯ ಸ್ವಾಮಿಗೆ ಜೈಕಾರ ಹಾಕಿದರು. ರಥವನ್ನು ದೇಗುಲದ ಸುತ್ತ ಒಂದು ಸುತ್ತು ಎಳೆದು ತಂದು ಸ್ವಸ್ಥಾನಕ್ಕೆ ನಿಲ್ಲಿಸಿದರು. ರಥೋತ್ಸವದ ವೇಳೆ ನವ ದಂಪತಿಗಳು ಸೇರಿದಂತೆ ಭಕ್ತರು ಹಣ್ಣು, ದವನ ಎಸೆದು ಭಕ್ತಿ ಮೆರೆದರು. ಮುಂಜಾನೆಯಿಂದಲೇ ವಿಶೇಷ ಪೂಜೆ, ಅಭಿಷೇಕಗಳನ್ನು ಆಯೋಜಿಸಲಾಗಿತ್ತು. ನಂತರ ದೇಗುಲದ ಸುತ್ತ ಉತ್ಸವ ಮೂರ್ತಿ ಹೊತ್ತು ಪ್ರದಕ್ಷಿಣೆ ಹಾಕಿದರು.

ಹರಕೆ ಒಪ್ಪಿಸಿದರು: ಹರಕೆ ಹೊರುವ ಬಹುತೇಕ ಎಚ್‌.ಡಿ.ಕೋಟೆ ತಾಲೂಕಿನ ಮಂದಿ ಹಿಂದಿನ ದಿನವೇ ಜಾತ್ರೆ ಮಾಳದಲ್ಲಿ ಕ್ಯಾಂಪ್‌ ಹಾಕಿದ್ದರು. ಲಕ್ಷ್ಮಣ ತೀರ್ಥನದಿ ದಂಡೆಯಲ್ಲಿ ತಲೆ ಮುಡಿಕೊಟ್ಟು ಬಾಯಿ ಬೀಗ ಹಾಕಿಕೊಂಡು ನಡೆದು ಬಂದು ದೇವಾಲಯ ಸುತ್ತ ಉರುಳುಸೇವೆ ಸಲ್ಲಿಸಿದರು. ನದಿ ದಂಡೆಯಲ್ಲೇ ಅಡುಗೆ ತಯಾರಿಸಿ ಊಟ ಮಾಡಿದರು. ಬುತ್ತಿ ತಂದಿದ್ದ ಅಕ್ಕ-ಪಕ್ಕದ ಗ್ರಾಮಸ್ಥರು ನದಿ ದಂಡೆಯ ಗದ್ದೆ ಬಯಲಲ್ಲಿ ಪರಸ್ಪರ ಹಂಚಿಕೊಂಡು ಊಟ ಮಾಡಿದರು.

16 ಹಳ್ಳಿಯ ಗ್ರಾಮಸ್ಥರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಸಾರಿಗೆ ಸಂಸ್ಥೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿತ್ತು. ಶಾಸಕರಾದ ಎಚ್‌.ಪಿ.ಮಂಜುನಾಥ್‌, ಜಿ.ಟಿ.ದೇವೇಗೌಡ, ಜಿ.ಪಂ.ಸದಸ್ಯ ಅನಿಲ್‌ಕುಮಾರ್‌, ಮಾಜಿ ಸದಸ್ಯೆ ಲಲಿತಾ ದೇವೇಗೌಡ ಸೇರಿದಂತೆ ಅನೇಕ ಮುಖಂಡರು ರಥೋತ್ಸವದಲ್ಲಿ ಭಾಗಿಯಾಗಿದ್ದರು.

ಆದಿವಾಸಿಗಳ ಸಂಭ್ರಮ: ದೊಡ್ಡ ಹೆಜ್ಜೂರಿನ ಸುತ್ತ ಆದಿವಾಸಿಗಳ ಹಾಡಿ ಸಾಕಷ್ಟಿದೆ. ಜಾತ್ರೆಗೆ ಗಿರಿಜನರು ಸಹ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು. ಅದರಲ್ಲೂ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದರು. ಇಡೀ ಜಾತ್ರೆಗೆ ಬಗೆಬಗೆಯ ಹತ್ತಾರು ಸಿಹಿ ತಿಂಡಿ ಅಂಗಡಿಗಳನ್ನು ಮಾಡಲಾಗಿತ್ತು. ಮಹಿಳೆಯರು ಶೃಂಗಾರ ಸಾಧನ, ಖರ್ಜೂರ, ಐಸ್‌ಕ್ರೀಂ, ಕಾರಾಪುರಿ, ಮಕ್ಕಳ ಆಟಿಕೆ ಅಂಗಡಿಗಳು. ಜಾಯಿಂಟ್‌ ವ್ಹೀಲ್‌ ಜಾತ್ರೆಗೆ ಕಳೆಗಟ್ಟಿದ್ದವು. ಮಹಿಳೆಯರು ಹಾಗೂ ಮಕ್ಕಳು ಉತ್ಸಾಹದಿಂದ ಹಚ್ಚೆ ಹಾಕಿಸಿಕೊಂಡರು.

ಬಿಗಿ ಬಂದೋಬಸ್ತ್: ಬರದ ನಡುವೆಯೂ ಜಾತ್ರೆಯಲ್ಲಿ 20 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು. ರಥ ಎಳೆಯುವಾಗ ನೂಕು ನುಗ್ಗಲು ಉಂಟಾಯಿತು. ಗ್ರಾಮಾಂತರ ಠಾಣೆಯ ಎಸ್‌.ಐ.ಪುಟ್ಟಸ್ವಾಮಿ ನೇತೃತ್ವದ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಯತ್ನಿಸಿದರು. ರಥ ಎಳೆಯುವ ವೇಳೆ ಸುತ್ತ ಹಗ್ಗವನ್ನು ಕಟ್ಟಿಕೊಂಡು ರಥದ ಬಳಿಗೆ ಜನ ಬಾರದಂತೆ ನಿಯಂತ್ರಿಸಿದರು.

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.