RSS ಬೈಠಕ್ ರದ್ದು; BJP ಭಿನ್ನಮತ ಶಮನಕ್ಕೆ ಬಿಎಸ್ ವೈ ಸರ್ಕಸ್
Team Udayavani, Jan 16, 2017, 1:33 PM IST
ಬೆಂಗಳೂರು:ಬಿಜೆಪಿಯೊಳಗಿನ ಭಿನ್ನಮತ ಶಮನಕ್ಕೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜ.19ರಂದು ಸಭೆ ಕರೆದ ಹಿನ್ನೆಲೆಯಲ್ಲಿ ನಾಳೆಯ ಆರ್ಎಸ್ಎಸ್ ಬೈಠಕ್ ಅನ್ನು ರದ್ದುಗೊಳಿಸಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ.
ತನ್ನ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನ ಮತಕ್ಕೆ ಪಕ್ಷದ ಕೆಲವು ನಿಷ್ಠಾವಂತರು ಬೆಂಬಲ ಸೂಚಿಸುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಎಚ್ಚೆತ್ತುಕೊಂಡಿದ್ದು, ಅಸಮಾಧಾನ ಶಮನಕ್ಕೆ ಮುಂದಾಗಿದ್ದರು. ಆ ಕಾರಣಕ್ಕಾಗಿ ಜನವರಿ 19ರಂದು ಬಿಜೆಪಿ ಕಚೇರಿಯಲ್ಲಿ ಸಭೆ ಕರೆದಿದ್ದರು. ಅತೃಪ್ತಿ ಹೊಂದಿರುವ 24 ಶಾಸಕರು ಹಾಗೂ ರಾಯಣ್ಣ ಬ್ರಿಗೇಡ್ ಗೆ ಸಂಬಂಧಿಸಿದಂತೆ ವೈಮನಸ್ಸು ಹೊಂದಿರುವ ಪಕ್ಷದ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪನವರಿಗೂ ಯಡಿಯೂರಪ್ಪ ಆಹ್ವಾನ ನೀಡಿದ್ದರು.
ಬಿಜೆಪಿಯ ಹಿರಿಯ ಮುಖಂಡರಾದ ಬಿಎಸ್ ವೈ ಮತ್ತು ಕೆಎಸ್ ಈಶ್ವರಪ್ಪ ನಡುವಿನ ಜಗಳದಿಂದ ಮುಜುಗರಕ್ಕೀಡಾಗಿರುವ ನಿಟ್ಟಿನಲ್ಲಿ, ಭಿನ್ನಮತ ಶಮನಕ್ಕಾಗಿ ಆರ್ಎಸ್ಎಸ್ ಜನವರಿ 17ರಂದು ಬೈಠಕ್ ಕರೆದಿತ್ತು. ಸಭೆಗೆ ಆಗಮಿಸುವಂತೆ ಬಿಎಸ್ ವೈ ಮತ್ತು ಈಶ್ವರಪ್ಪಗೆ ಆಹ್ವಾನ ನೀಡಲಾಗಿತ್ತು. ಏತನ್ಮಧ್ಯೆ ಬಿಎಸ್ ಯಡಿಯೂರಪ್ಪನವರೇ ಭಿನ್ನಮತ ಶಮನಕ್ಕೆ ಜ.19ರಂದು ಸಭೆ ಕರೆದ ನಿಟ್ಟಿನಲ್ಲಿ ಆರ್ ಎಸ್ಎಸ್ ಬೈಠಕ್ ಅನ್ನು ರದ್ದುಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.