ಮುಫ್ತಿ ಭೇಟಿ ಮಾಡಿ ವಿವಾದಕ್ಕೆ ಸಿಕ್ಕಿದ ದಂಗಲ್‌ ನಟಿ ಜೈರಾ


Team Udayavani, Jan 17, 2017, 3:45 AM IST

16-SP-4.jpg

ಶ್ರೀನಗರ: ನಟ ಅಮೀರ್‌ ಖಾನ್‌ ಮುಖ್ಯ ಪಾತ್ರದಲ್ಲಿರುವ ದಂಗಲ್‌ ಚಿತ್ರದಲ್ಲಿ ಗೀತಾ ಫೊಗಟ್‌ ಪಾತ್ರದಲ್ಲಿ ನಟಿಸುವ ಮೂಲಕ ಜನಪ್ರಿಯರಾಗಿರುವ ಕಾಶ್ಮೀರಿ ಹುಡುಗಿ ಜೈರಾ ವಾಸಿಂ ಈಗ ವಿವಾದಕ್ಕೆ ತುತ್ತಾಗಿದ್ದಾರೆ. ದಂಗಲ್‌ ಯಶಸ್ಸಿನ ಹಿನ್ನೆಲೆಯಲ್ಲಿ ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯನ್ನು ಜೈರಾ ಭಾನುವಾರ ಭೇಟಿ ಮಾಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಜೈರಾ ಕ್ಷಮೆಯಾಚನೆ ಮಾಡಿದ್ದಾರೆ. ಇದು ಮತ್ತೂಂದು ವಿವಾದಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೈರಾ ಕ್ಷಮೆಯಾಚಿಸಿದ್ದಾರೆ. “ನನ್ನನ್ನು ಆದರ್ಶ ಎಂದು ಬಿಂಬಿಸಲಾಗುತ್ತಿದೆ. ಅದು ತಪ್ಪು. ನಾನೂ ಯಾರಿಗೂ ಆದರ್ಶವಲ್ಲ ಹಾಗೆಯೇ ನನ್ನನ್ನು ಯಾರೂ ಅನುಸರಿಸುವ ಅಗತ್ಯವಿಲ್ಲ. ನನ್ನ ಇತ್ತೀಚೆ ಗಿನ ಕ್ರಮಗಳಿಂದ ಅಥವಾ ನಾನು ಕೆಲವು ವ್ಯಕ್ತಿಗಳನ್ನು ಇತ್ತೀಚೆಗೆ ಭೇಟಿ ಯಾಗಿದ್ದರಿಂದ ಹಲವರಿಗೆ ನೋವಾ ಗಿದೆ. ಆದ್ದರಿಂದ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತಿದ್ದೇನೆ’ ಎಂದು 16 ವರ್ಷದ ನಟಿ ಹೇಳಿದ್ದಾರೆ.

ಮುಖ್ಯಮಂತ್ರಿಯನ್ನು ಭೇಟಿ ಮಾಡಿ ದ್ದಕ್ಕೆ ಆಕೆ ಕ್ಷಮೆ ಕೇಳಿದ್ದು ಹಲವರನ್ನು ಕೆರಳಿಸಿದೆ. ಆಕೆಯ ಮೇಲೆ ಒತ್ತಡ ಹೇರಿ ಕೆಲವು ಉಗ್ರಗಾಮಿ ಶಕ್ತಿಗಳು ಕ್ಷಮೆ ಕೇಳುವಂತೆ ಮಾಡಿರಬಹುದೆಂದು ಊಹಿಸಲಾಗಿದೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಕೂಡ ಆಕೆಯನ್ನು ಕ್ಷಮೆ ಕೇಳುವಂತೆ ಒತ್ತಾಯಿಸುವುದು ತಪ್ಪು ಎಂದಿದ್ದಾರೆ. ಜೈರಾ ಪಾತ್ರಕ್ಕೆ ಸ್ಫೂರ್ತಿಯಾಗಿರುವ ಕಾಮನ್‌ವೆಲ್ತ್‌ ಚಿನ್ನ ವಿಜೇತ ಕುಸ್ತಿಪಟು ಗೀತಾ ಫೊಗಟ್‌ ಕೂಡ ಜೈರಾ ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಬಾಲಿವುಡ್‌ನ‌ ಹಲವರು ಜೈರಾ ಬೆಂಬಲಕ್ಕೆ ಧಾವಿಸಿದ್ದಾರೆ. ಆದರೆ ನನ್ನ ಮೇಲೆ ಕ್ಷಮೆಯಾಚನೆಗೆ ಯಾರೂ ಒತ್ತಡ ಹೇರಿಲ್ಲ. ಸ್ವಂತ ವಿವೇಚನೆಯಿಂದ ಕ್ಷಮೆಯಾಚಿಸಿದ್ದೇನೆ ಎಂದು ಜೈರಾ ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಜೈರಾ ಹೇಳಿದ್ದಿಷ್ಟು: “ನಾನು ಯಾರ್ಯಾರನ್ನು ಗೊತ್ತಿಲ್ಲದೇ ನೋಯಿಸಿದ್ದೇನೋ ಅವರಲ್ಲಿ ಕ್ಷಮೆಯಾಚಿಸುತ್ತೇನೆ. ಅವರ ಭಾವನೆಗಳನ್ನು ನಾನು ಅರ್ಥ ಮಾಡಿ ಕೊಳ್ಳುತ್ತೇನೆ. ವಿಶೇಷವಾಗಿ ಕಳೆದ 6 ತಿಂಗಳಿಂದ ಕಣಿವೆಯಲ್ಲಿ ಏನು ನಡೆಯುತ್ತಿದೆಯೋ ಆ ಹಿನ್ನೆಲೆಯಲ್ಲಿ ನಾನು ಈ ಮಾತನ್ನು ಹೇಳುತ್ತಿದ್ದೇನೆ.’ “ಆದರೆ ಕೆಲವು ಸಂದರ್ಭಗಳಲ್ಲಿ ನಮ್ಮ ನಿಯಂತ್ರಣ ಮೀರಿ ಘಟನೆಗಳು ನಡೆಯುತ್ತವೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆಂಬ ಭರವಸೆ ಯಿದೆ. ನಾನು ಕೇವಲ 16 ವರ್ಷದ ಹುಡುಗಿ. ನನ್ನನ್ನು ಹಾಗೆಯೇ ನೀವು ಪರಿಗಣಿಸಬೇಕು. ನಾನು ಮಾಡಿದ್ದಕ್ಕೆ ಕ್ಷಮೆಯಿರಲಿ, ಆದರೆ ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ಇಲ್ಲಿಂದ ನಾನು ವಾದಗಳನ್ನು ಆರಂಭಿಸಲು ಬಯಸುತ್ತಿಲ್ಲ. ಇದು ಕೇವಲ ನನ್ನ ಕಡೆಯಿಂದ ನೀಡಿರುವ ತಪ್ಪೊಪ್ಪಿಗೆ.’

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.