ಕುಸಿಯಿತು ವಾಲ್‌, ಮುಚ್ಚಿತು ಮಂತ್ರಿ ಮಾಲ್‌


Team Udayavani, Jan 17, 2017, 11:38 AM IST

mantrimall.jpg

ಬೆಂಗಳೂರು: ನಗರದ ಪ್ರಮುಖ ಮಾಲ್‌ ಗಳಲ್ಲಿ ಒಂದಾದ ಮಲ್ಲೇಶ್ವರದ ಮಂತ್ರಿ ಸ್ಕ್ವೇರ್‌ ಮಾಲ್‌ ಕಟ್ಟಡದ ಗೋಡೆಯ ಬೃಹತ್‌ ಭಾಗ ಸೋಮವಾರ ಕುಸಿದು ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾ ಗ್ರತಾ ಕ್ರಮವಾಗಿ ಮಂತ್ರಿಮಾಲ್‌ ಮುಚ್ಚುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಆದೇಶಿಸಿದ್ದಾರೆ.

ಇದರ ಜತೆಗೆ ಮಂತ್ರಿ ಮಾಲ್‌ಗೆ ನೀಡಿದ್ದ “ಸ್ವಾಧೀನಾನುಭವ ಪತ್ರ (ಓಸಿ)’ವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದು,ಮಾಲ್‌ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೋಮವಾರ ಮಧ್ಯಾಹ್ನ ಮಂತ್ರಿಮಾಲ್‌ ಕಟ್ಟಡದ ಹಿಂಭಾಗದ ನಾಲ್ಕನೇ ಮಹಡಿಯ ಗೋಡೆ ಕಾರಿಡಾರ್‌ ಸಮೇತ ಕುಸಿದು ಬಿತ್ತು. 

ಪರಿಣಾಮ ಕೆಳಗೆ ಕಾರ್ಯ ನಿರತರಾಗಿದ್ದ ಸಿಬ್ಬಂದಿ ಮೇಲೆ ಅವಶೇಷಗಳು ಬಿದ್ದು, ಮೂವರು ಗಾಯಗೊಂಡರು. ಅಲ್ಲದೆ, ಮೂರು ಹಾಗೂ ಎರಡನೇ ಮಹಡಿಯ ಗೋಡೆಗಳೂ ಶಿಥಿಲಗೊಂಡವು. ಗಾಯಗೊಂಡವರನ್ನು ಅಮಾರಿನ್‌, ಯಶೋಧ ಮತ್ತು ಲಕ್ಷಮ್ಮ ಎಂದು ಗುರುತಿಸಲಾ ಗಿದ್ದು, ಕೂಡಲೇ ಅವರನ್ನು ಸ್ಥಳೀಯ ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿದರು. ಅವಶೇಷಗಳಡಿ ಬೇರೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದನ್ನು ಪರಿಶೀಲಿಸಿದರು. ಬಳಿಕ ಅವಶೇಷ ತೆರವುಗೊಳಿಸಿದರು.

ಏನಾಯ್ತು?
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್‌ ಕಟ್ಟಡದ ಹಿಂಭಾಗದ ನಾಲ್ಕನೇ ಮಹಡಿಯ ಗೋಡೆ ಕಾರಿಡಾರ್‌ ಸಮೇತ ಕುಸಿದು ಬಿತ್ತು. 2 ಮತ್ತು 3ನೇ ಮಹಡಿ ಗೋಡೆಗಳೂ ಬಿರುಕು ಬಿಟ್ಟವು. ಸಿಮೆಂಟ್‌ ಇಟ್ಟಿಗೆಗಳು ಕೆಳಗೆ ಕಾರ್ಯ ನಿರತರಾಗಿದ್ದ ಸಿಬ್ಬಂದಿ ಮೇಲೆ ಬಿದ್ದು ಮೂವರು ಗಾಯಗೊಂಡರು. 

ತಪ್ಪಿದ ಭಾರಿ ಅಪಾಯ: ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮೇಯರ್‌ ಜಿ.ಪದ್ಮಾವತಿ, ಉಪಮೇಯರ್‌ ಆನಂದ್‌, ಜೆಡಿಎಸ್‌ ನಾಯಕಿ ರಮೀಳಾ ಉಮಾಶಂಕರ್‌ ಜತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಆಗಮಿಸಿ, ಸ್ಥಳದ ಪರಿಶೀಲನೆ ನಡೆಸಿದರು. ಶನಿವಾರ ಅಥವಾ ಭಾನುವಾರ ತುಂಬಿ ತುಳುಕುತ್ತಿದ್ದ ಮಾಲ್‌ನಲ್ಲಿ ಸೋಮವಾರವಾಗಿದ್ದರಿಂದ ಜನಸಂದಣಿ ಕಡಿಮೆಯಿತ್ತು. ಇದರಿಂದಾಗಿ ಹೆಚ್ಚು ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದ ಹಿಂಭಾಗದ ಗೋಡೆ ಕುಸಿದಿರುವುದು ಹಾಗೂ ಸಾರ್ವಜನಿಕರ ಓಡಾಟ ಇಲ್ಲದಿರುವ ಕಡೆ ಗೋಡೆ ಕುಸಿದಿರುವ ಕಾರಣ ಹೆಚ್ಚು ಅಪಾಯ ಸಂಭವಿಸಿಲ್ಲ. ಆದರೂ, ನಿತ್ಯ ಸಾವಿರಾರು ಮಂದಿ ಮಾಲ್‌ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಗ್ರಾಹಕರ ಕ್ಷೇಮವನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಮಾಲ್‌ ಮುಚ್ಚುವಂತೆ ಬಿಬಿಎಂಪಿ ಆಯುಕ್ತರು ಆದೇಶಿಸಿದ್ದಾರೆ. ನಿತ್ಯ ಸಾವಿರಾರು ಜನ ಮಾಲ್‌ಗೆ ಬರುತ್ತಾರೆ.

ಅಲ್ಲದೆ, ಘಟನೆ ವೇಳೆ ಹಿಂಭಾಗದ ಕಟ್ಟಡದ ಕಂಬಗಳು ಹಾಗೂ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿರುವುದರಿಂದ ಕಟ್ಟಡಕ್ಕೆ ನೀಡಲಾಗಿದ್ದ ಸ್ವಾಧೀನ ಪ್ರಮಾಣ ಪತ್ರವನ್ನು ಕೂಡಲೇ ರದ್ದು ಪಡಿಸಲಾಗಿದೆ. ಅಲ್ಲದೆ, ಗೋಡೆಯ ಗುಣಮಟ್ಟ ಪರಿಶೀಲನೆಗೆ ಬಳಕೆ ಮಾಡಿರುವ ಮರಳು, ಸಿಮೆಂಟ್‌, ಕಬ್ಬಿಣಗಳನ್ನು ಪರೀಕ್ಷೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು. ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಮಾಲ್‌ನಲ್ಲಿ ವಾಣಿಜ್ಯ ವಹಿವಾಟು ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ. ವರದಿ ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ: ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆ ಅಮಾರಿನ್‌ ಎಂಬುವರ ಹೇಳಿಕೆ ಪಡೆಯಲಾಗಿದೆ. ಹೇಳಿಕೆಯ ಆಧಾರದ ಮೇಲೆ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ಐಪಿಸಿ 337 ಸೆಕ್ಷನ್‌ ಅಡಿ ಕಟ್ಟಡದ ಮಾಲೀಕ ಮತ್ತು ಗುತ್ತಿಗೆದಾರನ ವಿರುದ್ಧ ನಿರ್ಲಕ್ಷ್ಯ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಿಕೆಯ ಮುಂದಿನ ಕ್ರಮ
ಪಾಲಿಕೆಯ ಆಯುಕ್ತರು ಈಗಾಗಲೇ ಕಟ್ಟಡದ ಓಸಿ ಹಿಂಪಡೆದಿರುವ ಹಿನ್ನೆಲೆಯಲ್ಲಿ ಪಾಲಿಕೆ ಅನುಮತಿ ನೀಡುವವರೆಗೂ ಮಂತ್ರಿಮಾಲ್‌ ಮುಚ್ಚಿರುತ್ತದೆ. ಕಟ್ಟಡದ ಸುರಕ್ಷತೆ ಕುರಿತು ಮೂರನೇ ವ್ಯಕ್ತಿ (ತಜ್ಞ) ಅಥವಾ ಸಮಿತಿಯಿಂದ ತನಿಖೆ ನಡೆಸುವಂತೆ ಪಾಲಿಕೆಯ ಅಧಿಕಾರಿಗಳು ಮಂತ್ರಿಮಾಲ್‌ ಆಡಳಿತಕ್ಕೆ ಸೂಚಿಸಿದ್ದಾರೆ. ಜತೆಗೆ, ಪಾಲಿಕೆಯ ಎಂಜಿನಿಯರ್‌ಗಳ ತಂಡವೂ ಪರಿಶೀಲನೆ ಕಾರ್ಯ ನಡೆಸಿ, ವರದಿ ನೀಡಲಿದೆ. ಕಟ್ಟಡ ಸಾರ್ವಜನಿಕರ ಬಳಕೆಗೆ ಸುರಕ್ಷಿತ ಎಂಬ ಅಂಶ ಎರಡೂ ವರದಿಗಳಿಂದ ಬಂದರೆ, ಆಯುಕ್ತರು ಕಟ್ಟಡಕ್ಕೆ ಮತ್ತೆ ಓಸಿ ಮಂಜೂರು ಮಾಡಲಿದ್ದಾರೆ.

ನಕ್ಷೆ ಮಂಜೂರು ಪರಿಶೀಲನೆ
ಪಾಲಿಕೆಯಿಂದ ಯಾವುದೇ ಕಟ್ಟಡಕ್ಕೆ ಓಸಿ ನೀಡುವ ವೇಳೆ ಕಟ್ಟಡದ ಗುಣಮಟ್ಟ ಕಾಯ್ದುಕೊಳ್ಳುವುದು ಮಾಲೀಕರ ಜವಾಬ್ದಾರಿಯಾಗಿರುತ್ತದೆ ಎಂಬ ಅಂಶವನ್ನು ಉಲ್ಲೇಖೀಸಲಾಗಿರುತ್ತದೆ. ಜತೆಗೆ, ನಕ್ಷೆ ಮಂಜೂರಾತಿ ನಿಯಮ ಉಲ್ಲಂ ಸಿ ಸೆಟ್‌ಬ್ಯಾಕ್‌ ಬಿಡದೆ ಕಟ್ಟಡ ನಿರ್ಮಿಸುವುದು, ಹೆಚ್ಚುವರಿ ಅಂತಸ್ತು ನಿರ್ಮಾಣದಂತಹ ಉಲ್ಲಂಘನೆ ಮಾಡಿರಬಾರದು. ಹೀಗಾಗಿ ನಕ್ಷೆ ಮಂಜೂರಾತಿಯನ್ನೂ ಮತ್ತೂಮ್ಮೆ ಅಧಿಕಾರಿಗಳು ಪರಿಶೀಲಿಸಲಿದ್ದಾರೆ.

ನಿರ್ವಹಣೆಯಲ್ಲಿನ ನಿರ್ಲಕ್ಷ್ಯ?
ಮಂತ್ರಿ ಮಾಲ್‌ ಕಟ್ಟಡದ ಹಿಂಭಾಗದಲ್ಲಿ ಸದ್ಯ ಕುಸಿದಿರುವ ಗೋಡೆಯ ಬಳಿ ಅಳವಡಿಕೆ ಮಾಡಲಾಗಿದ್ದ ಹವಾ ನಿಯಂತ್ರಿತ(ಎಸಿ) ಯಂತ್ರದಿಂದ ನೀರು ಸೋರಿಕೆಯಾಗುತ್ತಿತ್ತು. ಇದರಿಂದ ನೀರು ನಿಂತು ಗೋಡೆ ಶಿಥಿಲಗೊಂಡಿದೆ. ಆದರೂ ಮಾಲ್‌ ಸಿಬ್ಬಂದಿ ಎಸಿ ದುರಸ್ತಿಗೆ ಮುಂದಾಗದ ಹಿನ್ನೆಲೆಯಲ್ಲಿ ಸೋಮವಾರ ಘಟನೆ ಸಂಭವಿಸಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಘಟನೆಗೆ ನಿರ್ವಹಣೆಯಲ್ಲಿನ ನಿರ್ಲಕ್ಷ್ಯವೇ ಕಾರಣ ಎಂಬ ಅನುಮಾನ ಮೂಡಿದೆ. 

ದುರ್ಘ‌ಟನೆ ಹಿನ್ನೆಲೆಯಲ್ಲಿ ಸ್ಥಳದ ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಮಂತ್ರಿ ಮಾಲ್‌ನ ಸ್ವಾಧೀನಾನುಭವ ಪತ್ರ ಹಿಂಪಡೆದು ಆದೇಶ ಹೊರಡಿಸಿದ್ದೇನೆ. ದುರಸ್ಥಿ ಕಾರ್ಯದ ಬಳಿಕ ಮಾಲ್‌ನ ಸುರಕ್ಷತೆ ಪರಿಶೀಲಿಸಿ, ಅನುಮತಿ ನೀಡುವವರೆಗೂ ಮಾಲ್‌ ಮುಚ್ಚುವಂತೆ ಸೂಚಿಸಲಾಗಿದೆ.
-ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ.

ಸೋಮವಾರವಾದ ಕಾರಣ ಮಾಲ್‌ನಲ್ಲಿ ಕಡಿಮೆ ಜನರಿದ್ದರು. ಹೀಗಾಗಿ, ಘಟನೆ ನಡೆದ ತಕ್ಷಣ ಯಾರಿಗೂ ತೊಂದರೆಯಾಗದಂತೆ ಹೊರಗೆ ಕಳುಹಿಸಲಾಗಿದೆ. ಕಟ್ಟಡದ ಹಿಂಭಾಗದ ಗೋಡೆ ಕುಸಿಯಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಬಿಬಿಎಂಪಿ ಸೂಚನೆಯಂತೆ  ಮಾಲ್‌ನ್ನು ಸಂಪೂರ್ಣವಾಗಿ ಮುಚ್ಚಲಾಗುವುದು.
-ಆದಿತ್ಯ ಸಿಕ್ರಿ, ಮಂತ್ರಿಮಾಲ್‌ ಸಿಇಓ.

ಕಟ್ಟಡ ನಿರ್ಮಾಣವಾಗಿ 15 ವರ್ಷ ಕಳೆದಿ ರುವುದರಿಂದ ಹಲವು ಕಡೆ ಬಿರುಕು ಬಿಟ್ಟಿದೆ. ಇದಕ್ಕೆ ಹೊಂದಿಕೊಂಡಂತೆ 7 ವರ್ಷದ ಹಿಂದೆ ಹೊಸ ಕಟ್ಟಡ ನಿರ್ಮಿಸಲಾಗಿದೆ. ಹೀಗಾಗಿ, ಮಾಲ್‌ನ ಓಸಿ ಹಿಂಪಡೆದು ಮಾಲ್‌ನಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಸೂಚಿಸಲಾಗಿದೆ.
-ಜಿ. ಪದ್ಮಾವತಿ, ಬಿಬಿಎಂಪಿ ಮೇಯರ್‌.

ದುರ್ಘ‌ಟನೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಟ್ಟಡದ ಗೋಡೆ ಕುಸಿಯಲು ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಆದೇಶಿಸಲಾಗಿದೆ. ವರದಿ ಬಂದ ತಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು.
-ಕೆ.ಜೆ.ಜಾರ್ಜ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.