ನಮ್ಮ ಜಮೀನು ನಮ್ಮ ಕೆರೆ ಯೋಜನೆ ಜಾರಿ: ಜಯಚಂದ್ರ
Team Udayavani, Jan 17, 2017, 1:19 PM IST
ಆಳಂದ: ಅಂತರ್ಜಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಮ್ಮ ಜಮೀನು ನಮ್ಮ ಕೆರೆ ಹೊಸ ಯೋಜನೆ ಜಾರಿಗೆ ತರುವ ಮೂಲಕ ಹರಿಯುವ ನೀರು ನಿಲ್ಲಿಸಿ, ನಿಂತ ನೀರಿಗೆ ಇಂಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಕಾನೂನು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಟಿ.ಬಿ.ಜಯಚಂದ್ರ ಘೋಷಿಸಿದರು.
ಪಟ್ಟಣದ ಗುರುಭವನದಲ್ಲಿ ಸೋಮವಾರ ಸಣ್ಣ ನೀರಾವರಿ ಇಲಾಖೆಯಿಂದ ಏರ್ಪಡಿಸಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಮಳೆ ಬೆಳೆ ಇಲ್ಲದೆ 160 ತಾಲೂಕಿನಲ್ಲಿ ಬರ ಆವರಿಸಿ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಬೆಳೆ ಇಲ್ಲವಾಗಿ, ಪರಿಸ್ಥಿತಿ ಗಂಭೀರ ಸ್ವರೂಪ ತಾಳಿದೆ.
ಸಮಸ್ಯೆ ಎದುರಿಸಲು ಪ್ರತಿಯೊಂದು ಕಡೆ ಕೆರೆ, ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡುವುದು, ಮಳೆ ನೀರು ನಿಲ್ಲುವಂತೆ ಮಾಡುವುದು ಅವಶ್ಯಕವಾಗಿದೆ ಎಂದರು. ನೀರಿನ ಗಂಭೀರ ಸಮಸ್ಯೆ ನಿವಾರಿಸಲು ಆಳಂದ ಸೇರಿದಂತೆ ಕಲಬುರಗಿ ಜಿಲ್ಲೆಯಲ್ಲಿ ಪ್ರಯೋಗಾತ್ಮಕವಾಗಿ ನಮ್ಮ ಜಮೀನು ನಮ್ಮ ಕೆರೆ ಯೋಜನೆ ಜಾರಿಗೆ ತಂದು ಅನುಷ್ಠಾನಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.
ನೀರು ಭೂಮಿಯಿಂದ ಮೇಲೆ ಬರುವುದಿಲ್ಲ. ಮೇಲೆ ಬಿದ್ದ ನೀರೆ ಭೂಮಿಯಲ್ಲಿರುತ್ತದೆ. ಮಳೆ ನೀರು ಇಂಗಿಸಿದರೆ ಬ್ಯಾಂಕ್‌ನಲ್ಲಿ ಹಣವಿಟ್ಟಂತೆ. ಯಾವಾಗ ಬೇಕಾದರೂ ನೀರು ಬಳಸಿಕೊಳ್ಳಬಹುದು ಎಂದು ಸಚಿವರು ಸಲಹೆ ನೀಡಿದರು. ಶಾಸಕ ಬಿ.ಆರ್. ಪಾಟೀಲ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾರಾಯಿ ಮಾರಾಟ ನಿಲ್ಲಿಸಬೇಕು.
ಭೀಮನದಿಯಿಂದ ಅಮರ್ಜಾ ಅಣೆಕಟ್ಟೆಗೆ ನೀರು ಭರ್ತಿ ಮಾಡುವ ಯೋಜನೆ ಹಾಗೂ ತಾಲೂಕಿನ ಅಗತ್ಯವಿರುವ ಕೆರೆಗಳ ನಿರ್ಮಾಣಕ್ಕೆ ಒತ್ತಾಯಿಸಲಾಗಿತ್ತು. ಅವರು ಭರವಸೆ ನೀಡಿದ್ದರು. ಆದರೆ ಇದುವರೆಗೂ ಬೇಡಿಕೆ ಈಡೇರಿಸಿಲ್ಲ. ಕೆರೆಗಳ ನಿರ್ಮಾಣಕ್ಕೆ ಸಚಿವರು ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ಮುಖಂಡ ಶಿವುಪುತ್ರಪ್ಪ ಪಾಟೀಲ ಮುನ್ನೋಳಿ ಸ್ವಾಗತಿಸಿದರು.
ಸತೀಶ ಪನಶೆಟ್ಟಿ ನಿರೂಪಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಗ್ರಾಮಸ್ಥರು ನಂತರ ಸಚಿವರಿಗೆ ಕೆರೆ, ಚೆಕ್ ಡ್ಯಾಂ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದರು. ಜಿಪಂ ಸದಸ್ಯ ಸಿದ್ದರಾಮ ಪ್ಯಾಟಿ, ಪುರಸಭೆ ಮಾಜಿ ಅಧ್ಯಕ್ಷ ವಿಠಲರಾವ್ ಪಾಟೀಲ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಸವರಾಜ ಪಾಟೀಲ ಗೊಳಾ, ತಹಸೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ, ಮುಖಂಡ ಅಬ್ದುಲ್ ಸಲಾಂ ಸಗರಿ,
ಬಿ.ಕೆ. ಪಾಟೀಲ ಭೂಸನೂರ, ಭೀಮರಾವ್ ಢಗೆ, ನೀರಾವರಿ ಇಲಾಖೆ ಹಿರಿಯ ಇಂಜಿನಿಯರ್ ಮಹಾದೇವ ಎಲ್. ಶಿಂಧೆ, ನಾರಾಯಣ ಭಗವತಿ, ವಿಯಯಪುರ ಇಂಜಿನಿಯರ್ ಎ.ಎನ್. ಜಾನೆಲೇಕ್ಟರ್, ಎಇಇ ಆನಂದಕುಮಾರ ಹಾಜರಿದ್ದರು. ಇದಕ್ಕೂ ಮುನ್ನ ತಾಲೂಕಿನ ಪಡಸಾವಳಿ, ಚಿಂಚೋಳಿ ಇನ್ನಿತರ ಗ್ರಾಮಗಳಲ್ಲಿನ ಕೆರೆ, ಕಟ್ಟೆ ಕಟ್ಟಲು ಸಚಿವರು ಮತ್ತು ಶಾಸಕರು ವಿವಿಧ ಜಾಗಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.