ವಸ್ತುಪ್ರದರ್ಶನದ ಅಭಿವೃದ್ಧಿ ಯೋಜನೆ “ಸಿದ್ಧ’ರಾಜು

Team Udayavani, Jan 20, 2017, 12:21 PM IST

mys2.jpg

ಮೈಸೂರು: ವಸ್ತು ಪ್ರದರ್ಶನ ಆವರಣವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ಕಾಯಂ ವಸ್ತುಪ್ರದರ್ಶನ ಕೇಂದ್ರವನ್ನಾಗಿ ರೂಪಿಸಲು ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಸಿದ್ದರಾಜು ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2016ರ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ಕಾಯಂ ವಸ್ತುಪ್ರದರ್ಶನ ಕೇಂದ್ರವನ್ನಾಗಿಸುವ ಯೋಜನೆ ಘೋಷಿಸಿರುವುದರಿಂದ ಪ್ರಾಧಿಕಾರದ ಚಟುವಟಿಕೆಗಳನ್ನು ವರ್ಷ ಪೂರ್ತಿ ನಡೆಸುವಂತಾಗಲು ಪ್ರಾಧಿಕಾರದ 80 ಎಕರೆ ಪ್ರದೇಶದ ಸಮಗ್ರ ಅಭಿವೃದ್ಧಿ ಯೋಜನೆಯ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದರು.

ವರ್ಷಪೂರ್ತಿ ವಸ್ತುಪ್ರದರ್ಶನ ನಡೆಸಲು ವಸ್ತುಪ್ರದರ್ಶನ ಕೇಂದ್ರ, ಸಭೆ- ಸಮಾರಂಭಗಳನ್ನು ನಡೆಸಲು ಸಮ್ಮೇಳನ ಕೇಂದ್ರ, ಅಮ್ಯೂಸ್‌ಮೆಂಟ್‌ ಪಾರ್ಕ್‌, ಕಿಡ್ಜ್ಜೋನ್‌, ಸ್ನೋವರ್ಲ್ಡ್, ಫ‌ುಡ್‌ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಭವಿಷ್ಯದ ದೃಷ್ಟಿಯಿಂದ ಎಂ.ಜಿ.ರಸ್ತೆ ಕಡೆಯಿಂದ ಮತ್ತೂಂದು ಪ್ರಮುಖ ಪ್ರವೇಶ ದ್ವಾರ ನಿರ್ಮಾಣ, ಬಹುಮಹಡಿ ವಾಹನ ನಿಲುಗಡೆ ತಾಣ, ಟೂರಿಸ್ಟ್‌ ಪ್ಲಾಜಾ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಜತೆಗೆ ಪ್ರಾಧಿಕಾರದ ಕಚೇರಿ ಸೇರಿದಂತೆ ವಸ್ತುಪ್ರದರ್ಶನದ ಸುಮಾರು 140 ಮಳಿಗೆಗಳಿಗೆ ಶೀಟ್‌ ಹೊದಿಸಿರುವುದರಿಂದ ಅವುಗಳನ್ನು ನೆಲಸಮಗೊಳಿಸಿ ಹೊಸದಾಗಿ ಆರ್‌ಸಿಸಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಒಪ್ಪಿಗೆ ದೊರೆತಿದೆ. ಸುಮಾರು 120 ಕೋಟಿ ರೂ. ಅಭಿವೃದ್ಧಿಯ ಪ್ರಸ್ತಾವನೆ ಸಲ್ಲಿಸಿದ್ದು, ಈ ಪೈಕಿ ಶೇಕಡ 60 ಹಣದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರ್ಕಾರ ಅನುಮತಿ ನೀಡಿದೆ ಎಂದರು.

ವಿದ್ಯುತ್‌ ಸಮಸ್ಯೆ ಹೋಗಲಾಡಿಸಲು ಸೌರ ವಿದ್ಯುತ್‌ ಘಟಕ ನಿರ್ಮಾಣಕ್ಕೂ ಯೋಜನೆ ಸಿದ್ದಗೊಂಡಿದ್ದು, ಒಂದೆರಡು ಕಂಪನಿಗಳು ಸ್ಥಳ ಪರಿಶೀಲಿಸಿ ಆಸಕ್ತಿ ವ್ಯಕ್ತಪಡಿಸಿವೆ ಎಂದರು. ರಾಜ್ಯಮಟ್ಟದ ಪ್ರಾಧಿಕಾರವಾದರೂ ದಸರಾ ವಸ್ತುಪ್ರದರ್ಶನಕ್ಕಷ್ಟೇ ಸೀಮಿತಗೊಂಡಿರುವುದರಿಂದ ಪ್ರಾಧಿಕಾರದ ಚಟುವಟಿಕೆಗಳನ್ನು ಬೇರೆ ಬೇರೆ ಜಿಲ್ಲೆಗಳಿಗೂ ವಿಸ್ತರಣೆ ಮಾಡಲು ಸರ್ಕಾರದ ಅನುಮತಿ ಕೇಳಲಾಗಿದೆ ಎಂದು ತಿಳಿಸಿದರು.

ಪ್ರಾಧಿಕಾರದ ಆವರಣದಲ್ಲಿ ತೆರೆದ ಮೈದಾನ, ವಿಶಾಲವಾದ ವಾಹನ ನಿಲುಗಡೆ ತಾಣ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಹೊಂದಿರುವುದರಿಂದ ಮೈಸೂರು ನಗರದ ಬೇರೆ ಬೇರೆ ಭಾಗಗಳಲ್ಲಿ ನಡೆಯುವ ವಸ್ತುಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಕಡ್ಡಾಯವಾಗಿ ಪ್ರಾಧಿಕಾರದ ಆವರಣದಲ್ಲಿ ನಡೆಸುವಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಯವರನ್ನು ಕೋರಲಾಗಿದೆ ಎಂದು ಹೇಳಿದರು.

ಹೆಚ್ಚಿನ ಆದಾಯ: ಅ.1ರಿಂದ ಜನವರಿ 9ರವರೆಗೆ 100 ದಿನಗಳ ಕಾಲ ನಡೆದ ಈ ಬಾರಿಯ ದಸರಾ ವಸ್ತುಪ್ರದರ್ಶನಕ್ಕೆ 11 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ಆರಂಭದಲ್ಲಿ ಕೆಲ ದಿನ ಕಾವೇರಿ ಜಲ ವಿವಾದ, ನೋಟು ರದ್ಧತಿಯಿಂದ ಸ್ವಲ್ಪ ಸಮಸ್ಯೆಯಾಗಿದ್ದರೂ ಕಳೆದ ವರ್ಷಕ್ಕಿಂತ 1 ಲಕ್ಷ ಮಂದಿ ಹೆಚ್ಚು ಭೇಟಿ ನೀಡಿದ್ದಾರೆ. ಪ್ರವೇಶ ಟಿಕೆಟ್‌ ಮತ್ತು ವಾಹನ ನಿಲುಗಡೆ ಶುಲ್ಕ ವಸೂಲಿ ಪ್ರಾಧಿಕಾರದ ವತಿಯಿಂದಲೇ ಮಾಡಿದ್ದರಿಂದ ಸೋರಿಕೆ ತಪ್ಪಿ ಪ್ರಾಧಿಕಾರಕ್ಕೆ ಹೆಚ್ಚಿನ ಆದಾಯ ಬಂದಿದೆ.

ವಸ್ತುಪ್ರದರ್ಶನದ ಜಾಗತಿಕ ಟೆಂಡರ್‌ನಿಂದ 4.40 ಕೋಟಿ, ಪ್ರವೇಶ ಟಿಕೆಟ್‌ನಿಂದ 2.32 ಕೋಟಿ, ವಾಹನ ನಿಲುಗಡೆ ಶುಲ್ಕದಿಂದ 29 ಲಕ್ಷ. ಸರ್ಕಾರಿ ಮಳಿಗೆಗಳಿಂದ 1 ಕೋಟಿ ರೂ. ಸೇರಿದಂತೆ ಈ ವರ್ಷ ಒಟ್ಟಾರೆ 8 ಕೋಟಿ ರೂ. ಆದಾಯ ಬಂದಿದೆ ಎಂದು ತಿಳಿಸಿದರು. ಪ್ರಾಧಿಕಾರದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕುಮಾರ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಹಾರ ಮೇಳ
ಇದೇ ಮೊದಲ ಬಾರಿಗೆ ಫೆ.5ರಿಂದ 25ರವರೆಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಹಾರ ಮೇಳ ಆಯೋಜಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಆಹಾರವನ್ನು ಮೈಸೂರಿನ ಜನರಿಗೆ ಪರಿಚಯಿಸಲಾಗುವುದು. ಅಲ್ಲದೆ, ಏ.10ರಿಂದ ಮೇ 25ರವರೆಗೆ ಬೇಸಿಗೆ ಮೇಳ ಏರ್ಪಡಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.