ಗಣರಾಜ್ಯೋತ್ಸವ ಫ‌ಲಪುಷ್ಪ ಪ್ರದರ್ಶನಕ್ಕೆ ಚಾಲನೆ


Team Udayavani, Jan 21, 2017, 11:58 AM IST

lalbhag.jpg

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಹಾಗೂ ಡಾ.ಎಸ್‌.ಮರಿಗೌಡ ಜನ್ಮ ಶತಮಾನೋತ್ಸವ ಪ್ರಯುಕ್ತ ಆಯೋಜಿಸಿರುವ ಫ‌ಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ಬಿಜಾಪುರದ ಆದಿಲ್‌ಷಾ ಸ್ಮಾರಕವಾಗಿ ವಿಶ್ವ ವಿಖ್ಯಾತಗೊಂಡಿರುವ ಗೋಲ್‌ಗ‌ುಂಬಜ್‌ ಅನ್ನು ಸುಮಾರು 4 ಲಕ್ಷ ವಿವಿಧ ಬಣ್ಣದ ಗುಲಾಬಿಗಳಿಂದ ನಿರ್ಮಿಸಿರುವುದು ಈ ಬಾರಿಯ ವಿಶೇಷ. ಆದಿವಾಸಿ ಸಮುದಾಯದ ಜೀವನಶೈಲಿ ಕುರಿತು ಪ್ರತಿಬಿಂಬಿಸುವ ಕೃತಕ ಕಾಡು ನಿರ್ಮಾಣ, ಆದಿವಾಸಿಗಳ ಹಾಡಿ, ಹಟ್ಟಿ, ಪ್ರಾಣಿ, ಪಕ್ಷಿಗಳ ಕಲಾಕೃತಿಗಳು ಪ್ರದರ್ಶನದ ಮತ್ತೂಂದು ಆಕರ್ಷಣೀಯ. ಜನವರಿ 29ರವರೆಗೂ ನಡೆಯಲಿರುವ ಫ‌ಲಪುಷ್ಪ ಪ್ರದರ್ಶನವನ್ನು ಈ ಬಾರಿ 6 ಲಕ್ಷ ಜನಕ್ಕೂ ಹೆಚ್ಚು ಜನರು ವೀಕ್ಷಿಸುವ ನಿರೀಕ್ಷೆಯಿದೆ.

ಫ‌ಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಈ ಬಾರಿಯ ಪ್ರದರ್ಶನ ನವೀನತೆಯಿಂದ ಕೂಡಿದೆ ಎಂದು ಹೇಳಿದರು. ಲಾಲ್‌ಬಾಗ್‌ನಲ್ಲಿ ವಿವಿಧ ಪ್ರದೇಶಗಳಲ್ಲಿ ಬೆಳೆಯುವ ಗಿಡಮರಗಳನ್ನು ಬೆಳೆಸಲು ಪ್ರಾಮುಖ್ಯತೆ ನೀಡಿದ್ದೇವೆ. ಶೀತ ವಲಯದ ಪುಷ್ಪಗಳನ್ನು ಲಾಲ್‌ಬಾಗ್‌ನಲ್ಲಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಫ‌ಲಪುಷ್ಪ ಪ್ರದರ್ಶನ ಪ್ರತಿಯೊಬ್ಬರಿಗೂ ಇಷ್ಟವಾಗುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಜ್ಜುಗೊಳಿಸಿದ್ದಾರೆ ಎಂದು ಹೇಳಿದರು.

ಮೇಯರ್‌ ಪದ್ಮಾವತಿ ಮಾತನಾಡಿ, ಪ್ರತಿ ಬಾರಿಯೂ ಲಾಲ್‌ಬಾಗ್‌ನಲ್ಲಿ ನಡೆಯುವ ಫ‌ಲಪುಷ್ಪ ಪ್ರದರ್ಶನ ಲಕ್ಷಾಂತರ ಜನರನ್ನು ಸೆಳೆಯುವಲ್ಲಿ ಸಫ‌ಲವಾಗಿದೆ. ಈ ಬಾರಿಯೂ ಶಿಸ್ತುಬದ್ಧವಾಗಿ ಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ ಎಂದರು. ಶಾಸಕ ಆರ್‌.ವಿ.ದೇವರಾಜ್‌, ತೋಟಗಾರಿಕೆ ಇಲಾಖೆ ಆಯುಕ್ತ ಪ್ರಭಾಶ್‌ಚಂದ್ರ ರೇ, ಮೈಸೂರು ಉದ್ಯಾನ ಕಲಾಸಂಘದ ಉಪಾಧ್ಯಕ್ಷ ಶ್ರೀಕಂಠಯ್ಯ, ಲಾಲ್‌ಬಾಗ್‌ ಜಂಟಿ ನಿರ್ದೇಶಕ ಎಂ.ಜಗದೀಶ್‌ ಉಪ ನಿರ್ದೇಶಕ ಚಂದ್ರಶೇಖರ್‌ ಉಪಸ್ಥಿತರಿದ್ದರು.

ನೂರು ಸಿಸಿ ಕ್ಯಾಮರಾ
ಫ‌ಲಪುಷ್ಪ ಪ್ರದರ್ಶನ ಹಿನ್ನೆಲೆಯಲ್ಲಿ ಸುಮಾರು 100 ಸಿಸಿ ಕ್ಯಾಮರಾಗಳನ್ನು ಅಳವಡಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಕಳೆದ ಬಾರಿ ಕೇವಲ 25 ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಈ ಬಾರಿ ಆ ಸಂಖ್ಯೆಯನ್ನು 40ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಹಾಗೂ ಡಿಸಿಪಿ (ದಕ್ಷಿಣ) ಶರಣಪ್ಪ ಅವರ ಸೂಚನೆ ಮೇರೆಗೆ ನೂರು ಸಿಸಿ ಕ್ಯಾಮರಾಗಳನ್ನು ಉದ್ಯಾನವನದ ವಿವಿಧೆಡೆ ಶುಕ್ರವಾರದಿಂದಲೇ ಅಳವಡಿಸುವ ಕಾರ್ಯ ನಡೆದಿದೆ.

6 ಸಾವಿರ ಜನರಿಂದ ವೀಕ್ಷಣೆ
ಮೊದಲ ದಿನದ ಫ‌ಲಪುಷ್ಪ ಪ್ರದರ್ಶನವನ್ನು ಆರು ಸಾವಿರ ಜನರು ವೀಕ್ಷಿಸಿದ್ದಾರೆ. ಶುಕ್ರವಾರ ಬೆಳಗ್ಗೆ 11ರಿಂದ ಸಂಜೆ 7ರವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಒಟ್ಟು 3 ಲಕ್ಷ ರೂ. ಪ್ರವೇಶ ಶುಲ್ಕ ಸಂಗ್ರಹವಾಗಿದೆ. ಮೊದಲ ದಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾವಕಾಶವಿತ್ತು. ನೂರಾರು ಮಕ್ಕಳು ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಿದರು. 

ಮೊಬೈಲ್‌ ಕಳ್ಳತನ ಯತ್ನ
ಫ‌ಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬಂದು ಲಾಲ್‌ಬಾಗ್‌ನ ಧನ್ವಂತರಿ ಪಾರ್ಕ್‌ನಲ್ಲಿಕುಳಿತಿದ್ದ ಪ್ರೇಮಿಗಳ ಬಳಿ ವ್ಯಕ್ತಿಯೊಬ್ಬ ತೋಟಗಾರಿಕೆ ಇಲಾಖೆ ಅಧಿಕಾರಿ ಸೋಗಿನಲ್ಲಿ ಬೆದರಿಸಿ ಮೊಬೈಲ್‌ ಕಸಿದು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದಿ ದ್ದಾನೆ. ಮೊಬೈಲ್‌ ಕಸಿದು ಪರಾರಿಯಾಗಲು ಯತ್ನಿಸುತ್ತಿದ್ದ ಆತನನ್ನು ಉದ್ಯಾನವನದ ಗಾರ್ಡ್‌ ಮುನಿಕೃಷ್ಣ ಹಿಡಿದು ಪೊಲೀಸರಿಗೆ ವಶಕ್ಕೆ ನೀಡಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.