ಸರ್ಜಿಕಲ್ ಸ್ಟ್ರೈಕ್ ಬಳಿಕ ಗಡಿ ದಾಟಿದ್ದ ಭಾರತೀಯ ಯೋಧ ಬಿಡುಗಡೆ
Team Udayavani, Jan 21, 2017, 3:08 PM IST
ಹೊಸದಿಲ್ಲಿ : ಹೊಸದಿಲ್ಲಿ ಮತ್ತು ಇಸ್ಲಾಮಾಬಾದ್ ನಡುವಿನ ದ್ವಿಪಕ್ಷೀಯ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿರುವ ಹೊರತಾಗಿಯೂ ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ನಡೆದ ಮರುದಿನ ಅಛಾನಕ್ ಆಗಿ ಪಾಕ್ ಗಡಿಯನ್ನು ಪ್ರವೇಶಿಸಿ ಬಂಧಿತನಾಗಿದ್ದ ಭಾರತೀಯ ಯೋಧ ಚಂದು ಬಾಬುಲಾಲ್ ಚೌಹಾಣ್ ನನ್ನು ಪಾಕ್ ಸೇನೆ ಇಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಿದೆ.
ಭಾರತೀಯ ಯೋಧ ಚಂದು ಬಾಬುಲಾಲ್ ಚೌಹಾಣ್ ಕಳೆದ ವರ್ಷ ಸೆಪ್ಟಂಬರ್ 29ರಂದು, ಅಂದರೆ ಭಾರತೀಯ ವಿಶೇಷ ಸೈನಿಕರು ಪಾಕ್ ಗಡಿಯೊಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಮರುದಿನ, ಅಛಾನಕ್ ಆಗಿ ಪಾಕ್ ಗಡಿಯನ್ನು ಪ್ರವೇಶಿಸಿದ್ದ; ಒಡನೆಯೇ ಆತನನ್ನು ಪಾಕ್ ಸೈನಿಕರು ಬಂಧಿಸಿದ್ದರು.
ಯೋಧ ಚಂದುವನ್ನು ಪಾಕಿಸ್ಥಾನ ಬಿಡುಗಡೆ ಮಾಡುತ್ತಿರುವುದು ಎರಡನೇ ಧನಾತ್ಮಕ ಬೆಳವಣಿಗೆಯಾಗಿದೆ. ಕಳೆದ ಡಿ.25ರರಂದು, ಅಂದರೆ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಹುಟ್ಟುಹಬ್ಬದ ದಿನದಂದು ಪಾಕ್ ಸೇನೆ ತನ್ನ ಸೆರೆಯಲ್ಲಿದ್ದ 220 ಭಾರತೀಯ ಬೆಸ್ತರನ್ನು ಸದ್ಭಾವನೆಯ ಕ್ರಮವಾಗಿ ಬಿಡುಗಡೆಮಾಡಿತ್ತು.
ಯೋಧ ಚಂದು ನನ್ನು ಪಾಕ್ ಸೇನೆ ಇಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ವಾಘಾ ಗಡಿಯಲ್ಲಿ ಬಿಡುಗಡೆ ಮಾಡಿರುವುದಾಗಿ ನ್ಯೂಸ್ 18 ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್ರನ್ನು ಬದಲಿಸಿ ಕಾಂಗ್ರೆಸ್ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.