5 ವರ್ಷದಲ್ಲಿ ಕರ್ನಾಟಕ ಬಾಲ್ಯವಿವಾಹ ಮುಕ್ತ
Team Udayavani, Jan 22, 2017, 3:45 AM IST
ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕವನ್ನು ಬಾಲ್ಯವಿವಾಹ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ಬಾಲ್ಯ ವಿವಾಹ ತಡೆಗಟ್ಟಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದೇಶದಲ್ಲೇ ಮೊದಲ ಬಾರಿಗೆ ಹಾಗೂ ವಿನೂತನವಾಗಿ ವಿನ್ಯಾಸಗೊಳಿಸಿರುವ “ಕರೆ’ ವೆಬ್ಸೈಟ್ಗೆ ಚಾಲನೆ ನೀಡಿ ಮತ್ತು ಬಾಲ್ಯ ವಿವಾಹ ತಡೆ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜನರಲ್ಲಿ ಜಾಗೃತಿಯಿಲ್ಲದ ಕಾರಣ ಮತ್ತು ಆರ್ಥಿಕ, ಸಾಮಾಜಿಕ ಕಾರಣಗಳಿಂದಾಗಿ ಇನ್ನೂ ಅದು ನಡೆಯುತ್ತಿದೆ. ಎಷ್ಟೇ ಕಾನೂನು ತಂದರೂ ಜಾಗೃತಿ ಮೂಡುವವರೆಗೆ ಅದನ್ನು ಸಂಪೂರ್ಣ ತಡೆಗಟ್ಟಲು ಸಾಧ್ಯವಿಲ್ಲ. ಹೀಗಾಗಿ, ನಿರಂತರ ಜಾಗೃತಿ ಆಂದೋಲನ ಕೈಗೊಳ್ಳುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕವನ್ನು ಬಾಲ್ಯ ವಿವಾಹ ಮುಕ್ತ ರಾಜ್ಯವಾಗಿ ಮಾಡಬೇಕು ಎಂದರು.
ಸಮಾಜದ ಆಸ್ತಿಯಾಗಿರುವ ಮಕ್ಕಳು ದೇಶದ ಮುಂದಿನ ಪ್ರಜೆಗಳು. ಅವರ ಹಕ್ಕುಗಳ ರಕ್ಷಣೆ ಸರ್ಕಾರದ ಜವಾಬ್ದಾರಿ.
ಮೊದಲಿನಿಂದಲೂ ನಡೆಯುತ್ತಿರುವ ಬಾಲ್ಯವಿವಾಹವನ್ನು ತಡೆಗಟ್ಟಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದ್ದು,
ಇದರ ಪರಿಣಾಮ 2005ರ ವೇಳೆಗೆ ಶೇ. 41.2ರಷ್ಟಿದ್ದ ಬಾಲ್ಯ ವಿವಾಹ ಪ್ರಮಾಣ ಈಗ ಶೇ.23.2ಕ್ಕೆ ಇಳಿದಿದೆ ಎಂದು
ಹೇಳಿದರು.
ಬಾಲ್ಯ ವಿವಾಹ ತಡೆಗಟ್ಟುವ ಕುರಿತಂತೆ ನ್ಯಾ.ಶಿವರಾಜ ಪಾಟೀಲ್ ಅವರು ನೀಡಿರುವ ವರದಿಯನ್ನು ಸರ್ಕಾರ ಬಹುತೇಕ ಜಾರಿಗೆ ತಂದಿದೆ. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹಿಸುವವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದು ಸೇರಿ ಬಾಲ್ಯ ವಿವಾಹ ಕಾಯ್ದೆಯನ್ನು ನಿಷೇಧಿಸುವ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಕೇಂದ್ರ ಒಪ್ಪಿಗೆ ನೀಡಿದ ಕೂಡಲೇ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಉಮಾಶ್ರೀ ಅವರದ್ದೂ ಬಾಲ್ಯ ವಿವಾಹ!
ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಅವರತ್ತ ನೋಡಿ ನಿಮ್ಮದೂ ಬಾಲ್ಯವಿವಾಹವಲ್ಲ.ತಪ್ಪು ನಿಮ್ಮದಲ್ಲ ನಿಮ್ಮ ತಂದೆ ತಾಯಿಯದ್ದು ಎಂದರು. ಈದಕ್ಕೆ ಉಮಾಶ್ರೀ ಅವರು ತಲೆಯಲ್ಲಾಡಿಸಿದರು.
ಮೂಲಸೌಕರ್ಯ ಖಾತೆ ಸಚಿವ ರೋಷನ್ ಬೇಗ್, ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ, ಶಾಸಕ ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.