ಮಾಧ್ಯಮದ ವಸ್ತುನಿಷ್ಠ ವರದಿ: ಏರ್ಯ ಆಶಯ


Team Udayavani, Jan 23, 2017, 3:45 AM IST

210117uk1.jpg

ಉಡುಪಿ: ಪತ್ರಕರ್ತರಿಗೂ ಎಲ್ಲರಿಗಿರುವಂತೆ ಪಕ್ಷಗಳ ಭಾವನೆ ಇರುತ್ತದೆ. ಆದರೆ ವರದಿ ಮಾಡುವಾಗ ವಸ್ತುನಿಷ್ಠೆ ಇರಬೇಕು ಎಂದು ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಕರೆ ನೀಡಿದರು.

ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಪೇಜಾವರ ಮಠ, ಬನ್ನಂಜೆ ರಾಮಾಚಾರ್ಯ ಜನ್ಮಶತಾಬ್ದ ಸಮಿತಿ ಆಶ್ರಯದಲ್ಲಿ ರಾಜಾಂಗಣದಲ್ಲಿ ಶನಿವಾರ ನಡೆದ ಉದಯವಾಣಿ ಆರಂಭದ ಸಂಪಾದಕೀಯ ವಿಭಾಗದ ಮುಖ್ಯಸ್ಥ ಬನ್ನಂಜೆ ರಾಮಾಚಾರ್ಯ ಜನ್ಮಶತಾಬ್ದ ಸಮಾರಂಭದ ಉದ್ಘಾಟನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬನ್ನಂಜೆ ರಾಮಾಚಾರ್ಯರು ಮೂರು ಮಾಸಪತ್ರಿಕೆ, ಎರಡು ದಿನ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಜೀವನ ಮೌಲ್ಯವನ್ನು ಎತ್ತಿ ಹಿಡಿದವರು. ಕರಾವಳಿಯಲ್ಲಿ ಇವರಷ್ಟು ಸುದೀರ್ಘ‌ ಕಾಲ ಪತ್ರಿಕಾರಂಗಕ್ಕೆ ಸೇವೆ ಸಲ್ಲಿಸಿದವರು ಇನ್ನೊಬ್ಬರಿಲ್ಲ ಎಂದರು.

ಈಗ ಮೌಲ್ಯ ಕುಸಿತ ಪತ್ರಿಕಾರಂಗದಲ್ಲಿ ಮಾತ್ರವಲ್ಲದೆ ಎಲ್ಲ ಕ್ಷೇತ್ರಗಳಲ್ಲಿಯೂ ಕಾಣುತ್ತಿದೆ. ವೈಯಕ್ತಿಕ ಉದ್ದೇಶಗಳನ್ನು ತೀರಿಸಿಕೊಳ್ಳಲು ಮಾಧ್ಯಮಕ್ಷೇತ್ರವಲ್ಲ ಎಂದ ಆಳ್ವರು, ರಾಮಾಚಾರ್ಯರಂತಹವರ ಜೀವನ ಸಂದೇಶವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಆಶಿಸಿದರು. ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಮಾರಂಭವನ್ನು ಉದ್ಘಾಟಿಸಿದರು. 

“ರಾಮಾಚಾರ್ಯರೆಂದಾಗ ಎತ್ತರದ ಶರೀರ, ಖಾದಿ ಬಟ್ಟೆ ಕಣ್ಣೆದುರು ಬರುತ್ತದೆ. ಮಾಧ್ಯಮ ರಂಗ ಪ್ರಜಾಪ್ರಭುತ್ವದ ನಾಲ್ಕು ಆಧಾರಸ್ತಂಭಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟರೂ ಈಗ ಅದು ವ್ಯಾಪಾರ ನಡೆದಂತೆ ನಡೆಯುತ್ತಿದೆ, ಅದರ ತೂಕ, ಘನತೆ ಕಡಿಮೆಯಾಗುತ್ತಿದೆಯೋ ಎಂದು ಭಾಸವಾಗುತ್ತಿದೆ. ಹಾಗಾಗಬಾರದು. ಹಿರಿಯರ ಬದುಕಿನ ಮಾರ್ಗದರ್ಶನ ಕಾಲಕಾಲಕ್ಕೆ ನೆನಪಿಗೆ ತಂದು ತಪ್ಪಿದ ದಾರಿಯನ್ನು ಸಹಜಸ್ಥಿತಿಗೆ ತರಬೇಕು’ ಎಂದು ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನದಲ್ಲಿ ತಿಳಿಸಿದರು.

ರಾಮಾಚಾರ್ಯರ ನಿಷ್ಠುರವಾದಿ ವಿಶಿಷ್ಟ ವ್ಯಕ್ತಿತ್ವವನ್ನು, ತಡರಾತ್ರಿ ವರೆಗೆ “ಉದಯವಾಣಿ’ ಕಚೇರಿಯಲ್ಲಿ ನಿಂತು ನಿರ್ವಹಿಸುತ್ತಿದ್ದ ಕೆಲಸವನ್ನು ಜನ್ಮಶತಾಬ್ದ ಸಮಿತಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಯು.ಆರ್‌. ಸಭಾಪತಿ ಪ್ರಸ್ತಾವನೆಯಲ್ಲಿ ನೆನಪಿಸಿಕೊಂಡರು. ಸಮಿತಿ ಗೌರವ ಅಧ್ಯಕ್ಷ ಎ.ಎಸ್‌.ಎನ್‌. ಹೆಬ್ಟಾರ್‌, ಅಧ್ಯಕ್ಷ ರತ್ನಕುಮಾರ್‌, ಸರ್ವಜ್ಞ ಬನ್ನಂಜೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.