ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಕಲುಷಿತ
Team Udayavani, Jan 23, 2017, 12:31 PM IST
ಚನ್ನಗಿರಿ: ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಕಲುಷಿತಗೊಂಡಿದ್ದು, ಪರಿಪೂರ್ಣ ಶಿಕ್ಷಣ ಯಾರೋಬ್ಬರಿಗೂ ಸಿಗುತ್ತಿಲ್ಲ. ಇದ್ದರಿಂದ ಮೋಸ, ಕಪಟ, ವಂಚನೆಗಳು, ಭ್ರಷ್ಟಾಚಾರಗಳು ಸಮಾಜದಲ್ಲಿ ನಿರಂತರವಾಗಿ ನಡೆಯುತ್ತಿವೆ. ಹೀಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಗಳಂತಹ ವೇಧಿ ದಿಕೆಗಳಲ್ಲಿ ಶಿಕ್ಷಣದಲ್ಲಿ ಪರಿಪೂರ್ಣತೆ ಸಿಗುವುದರ ಬಗ್ಗೆ ಚರ್ಚೆ ನಡೆಯಬೇಕಿದೆ ಎಂದು ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ. ಲಲಿತಾನಾಯ್ಕ ಅಭಿಪ್ರಾಯಪಟ್ಟಿದ್ದಾರೆ.
ತಾಲೂಕಿನ ಸಂತೇಬೆನ್ನೂರಿನಲ್ಲಿ ಭಾನುವಾರ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಇನ್ನೂ ಕೂಡ ನಾವುಗಳು ಶಿಕ್ಷಣದಲ್ಲಿ ಪ್ರಗತಿಯನ್ನು ಕಾಣಲು ಸಾಧ್ಯವಾಗಿಲ್ಲ. ಅಂಧಕಾರದ ಜಗತ್ತಿನಲ್ಲಿ ಮುಂದುವರೆಯುತ್ತಿರುವ ನಮ್ಮ ಮುಂದೆ ಯಾವುದೇ ಘಟನೆಗಳು ನಡೆದರೂ ಕಣ್ಣುಕಾಣದ ಸ್ಥಿತಿಯಲ್ಲಿ ಬದುಕುತ್ತಿದ್ದೇವೆ.
ಸಮಾಜ ಸೇವೆಯ ಹೆಸರಿನಲ್ಲಿ ನಿತ್ಯ ಜನಸಾಮಾನ್ಯರನ್ನು ಶೋಷಣೆ ಮಾಡಿ ಅವರನ್ನು ವಂಚಿಸುತ್ತಿರುವ ಘಟನೆಗಳು ನಡೆಯುತ್ತಿವೆ. ಇದಕ್ಕೆ ಮೊದಲು ನಮ್ಮಗೆ ಬೇಕಿರುವುದು ಪರಿಪೂರ್ಣವಾದ ಶಿಕ್ಷಣ ಎಂದರು. 12ನೇ ಶತಮಾನದಲ್ಲಿ ಶರಣರ ವಚನಗಳು ಹಾಗೂ ಸಾಹಿತ್ಯದಿಂದ ಸಮಾಜದ ಪ್ರಗತಿಯನ್ನು ಹೇಗೆ ಮಾಡುವುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಆದರೆ ಅವರ ಮಾರ್ಗದಲ್ಲಿ ನಾವುಗಳು ನಡೆಯದೇ ನಮ್ಮ ಸ್ವಾರ್ಥಕೋಸ್ಕರ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರುವುದು ನಿಜಕ್ಕೂ ನಮ್ಮಗಳ ದೌರ್ಬಲ್ಯ. ಇಂದು ಕಪಟವಿಲ್ಲದ ಸಮಾಜ ನಿರ್ಮಾಣ ಮಾಡಬೇಕಿದೆ. ಭ್ರಷ್ಟಚಾರಿಗಳಿಂದ ದೇಶ ಯಾವ ದಿಕ್ಕಿನ ಕಡೆ ಸಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಇದೆ ರೀತಿಯಲ್ಲಿ ಮುಂದುವರೆದಲ್ಲಿ ಇಡೀ ಮಾನವ ಸಮಾಜವೇ ನಾಶವಾಗುವ ಕಾಲ ದೂರವಿಲ್ಲ ಎಂದು ಆತಂಕ ಹೊರಹಾಕಿದರು.
ಜನ ಸಂಪೂರ್ಣ ಅರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬ ಮನುಷ್ಯನು ಆರೋಗ್ಯದ ಏರುಪೇರಿನಿಂದ ಜೀವನ ಸಾಗಿಸುತ್ತಿರುವುದು ಕಾಣಬಹುದಾಗಿದೆ. ವೈಭವೀಕರಣ ಜೀವನಕ್ಕೆ ಮಾರು ಹೋಗಿ ನಾವುಗಳು ಪ್ರತಿಯೊಂದು ಉತ್ಪಾದನೆಯಲ್ಲೂ ವಿಷಕಾರಿ ಅಂಶವನ್ನು ಬಳಸುತ್ತಿದ್ದೇವೆ. ಆದ್ದರಿಂದ ನೈಸರ್ಗಿಕವಾದ ಆಹಾರಗಳ ಉತ್ಪಾದನೆ ಮಾಡಲು ಮುಂದಾಗಬೇಕಿದೆ.
ಜತೆಗೆ ಪ್ರಕೃತಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ನಿಲ್ಲಿಸಬೇಕಿದೆ ಎಂದುಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಏನೇಲ್ಲಾ ಹಕ್ಕುಗಳಿವೆ ಎಂಬುದನ್ನು ತಿಳಿಸಲು ಸಾಹಿತ್ಯ ಸಮ್ಮೇಳನಗಳಲ್ಲಿ ಚರ್ಚೆಗಳು ನಡೆಯಬೇಕು. ಅಂಬೇಡ್ಕರರು ನಮ್ಮಗೆ ನೀಡಿರುವ ಸಂವಿಧಾನದಲ್ಲಿ ಸಮಾನತೆಯಿದೆ. ಅದನ್ನು ದುರುಪಯೋಗ ಬಳಸಿಕೊಳ್ಳದೇ ಮುನ್ನಡೆಯಬೇಕು ಎಂದರು. ಹಾಲಸ್ವಾಮಿ ವಿರಕ್ತಮಠದ ಜಯದೇವ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಸಮ್ಮೇಳನಾಧ್ಯಕ್ಷ ಪ್ರೊ| ಎಸ್.ಬಿ ರಂಗನಾಥ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎಸ್. ಮಂಜುನಾಥ್ ಕುರ್ಕಿ, ಶಾಸಕ ವಡ್ನಾಳ್ ರಾಜಣ್ಣ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್, ತಾಪಂ ಅಧ್ಯಕ್ಷ ಜೆ.ರಂಗನಾಥ್, ಗ್ರಾಪಂ ಅಧ್ಯಕ್ಷ ದೇವೇಂದ್ರಪ್ಪ, ಜಿಪಂ ಸದಸ್ಯ ವಾಗೀಶ್ ಮಾಸ್ಟರ್, ಎಂ. ಸಿದ್ದಪ್ಪ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎನ್.ಎಸ್ ರಾಜು, ಜಿ.ಎಚ್. ರಾಜಶೇಖರ್ ಗುಂಡಗಟ್ಟಿ,
ಕಸಾಪ ಜಿಲ್ಲಾ ಸಂಚಾಲಕ ಕೆ.ಸಿ.ರಾಜ್ ಅಹ್ಮದ್, ಕಸಾಪ ತಾಲೂಕು ಅಧ್ಯಕ್ಷ ಎಂ.ಯು. ಚನ್ನಬಸಪ್ಪ, ಕೆ.ಸಿದ್ದಲಿಂಗಪ್ಪ ಇತರರಿದ್ದರು. 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂತೇಬೆನ್ನೂರಿನಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ| ಎಚ್. ಎಸ್ ಮಂಜುನಾಥ್ ಕುರ್ಕಿ ಅಧ್ಯಕ್ಷತೆಯಲ್ಲಿ ನಾಲ್ಕು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಪಿ. ನಾಗಭೋಷಣ ಶೌಡೂರು ನಿರ್ಣಯಗಳನ್ನು ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.