ಪಠ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ವಿಷಯ ಅಳವಡಿಕೆ

Team Udayavani, Jan 24, 2017, 12:01 PM IST

shivrajkumar.jpg

ಬೆಂಗಳೂರು: ರಸ್ತೆ ಸುರಕ್ಷತೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಪಠ್ಯಕ್ರಮದಲ್ಲಿ ಈ ಬಗ್ಗೆ ಅಳವಡಿಸುವ ಚಿಂತನೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆ ವತಿಯಿಂದ ಪುರಭವನದಲ್ಲಿ ಹಮ್ಮಿಕೊಂಡಿದ್ದ 28ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಶಾಲಾ ದಿನದಲ್ಲಿಯೇ ಮಕ್ಕಳಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಬೇಕಾದ ಅಗತ್ಯ ಇದೆ. ಚಿಕ್ಕ ವಯಸ್ಸಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ತಿಳಿಸಿದರೆ ಅವರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಹೀಗಾಗಿ ಪಠ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಕುರಿತು ಮಕ್ಕಳಿಗೆ ಮಾಹಿತಿ ಒದಗಿಸಲು ಅಧ್ಯಯನ ವಿಷಯವನ್ನಾಗಿ ಇಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. 

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿವೆ. ಪ್ರತಿನಿತ್ಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಪ್ರಾಣಹಾನಿ ಉಂಟಾಗುತ್ತಿದೆ. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 12 ಲಕ್ಷ ವಾಹನಗಳು ಸೇರ್ಪಡೆಯಾಗಿದೆ. ಕೇವಲ ದಂಡ ಅಥವಾ ಕಾನೂನಿನ ಮೂಲಕ ರಸ್ತೆ ಸುರಕ್ಷತೆ ಕುರಿತು ಕಲಿಸಲು ಸಾಧ್ಯವಿಲ್ಲ ಎಂದರು. 

ನಟ ಶಿವರಾಜ್‌ ಕುಮಾರ್‌ ಮಾತನಾಡಿ, ಶಿಷ್ಟಾಚಾ ರದ ಹೆಸರಲ್ಲಿ ಮುಖ್ಯಮಂತ್ರಿ, ಗೃಹಸಚಿವರಿಗೆ ಸಂಚಾರ ಮುಕ್ತ ವ್ಯವಸ್ಥೆ ಇದೆ. ಇದರಿಂದ ಜನಸಾಮಾ ನ್ಯರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಟ ನಡೆಸಬೇಕಾಗಿದೆ. ಆ್ಯಂಬುಲೆನ್ಸ್‌ಗಳು ಬಂದರೂ ಬಿಡುವುದಿಲ್ಲ. ಸಂಚಾರ ದಟ್ಟಣೆಯಲ್ಲಿ ಆ್ಯಂಬುಲೆನ್ಸ್‌ಗಳು ಸಿಲುಕಿ ಮುಖ್ಯಮಂತ್ರಿ, ಗೃಹ ಸಚಿವರು ಹೋಗುವ ವರೆಗೆ ಕಾಯಲೇಬೇಕಾದ ಅನಿವಾರ್ಯ ಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು. 

ಸಂಚಾರ ದಟ್ಟಣೆ ನಿವಾರಣೆಯತ್ತ ರಾಜ್ಯ ಸರ್ಕಾರವು ಹೆಚ್ಚಿನ ಗಮನಹರಿಸಬೇಕಿದೆ. ಟ್ರಾಫಿಕ್‌ನಿಂದ ನಗರದ ಪ್ರತಿಯೊಬ್ಬ ನಾಗರಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಸಂಚಾರ ದಟ್ಟಣೆಯ ಬಿಸಿ ತಮಗೂ ತಟ್ಟಿದ್ದು, ಈ ಹಿಂದೆ ಎದೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ತಲುಪಲು ಹರಸಾಹಸ ಪಡಬೇಕಾಗಿತ್ತು ಎಂದು ಹೇಳಿದ ಅವರು, ಇತ್ತೀಚೆಗೆ ಯುವಕರು ರಸ್ತೆಗಳಲ್ಲಿ ಬೈಕ್‌ನಲ್ಲಿ ಸ್ಟಂಟ್‌ಗಳನ್ನು ಮಾಡುತ್ತಿರುವುದು ಹೆಚ್ಚಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಹಮ್ಮಿಕೊಳ್ಳ ಲಾಗಿದ್ದ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಇದೇ ವೇಳೆ ಪ್ರಶಸ್ತಿ ನೀಡಿ ಗೌರವಿಸ ಲಾಯಿತು. ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಆಯುಕ್ತ ಎಂ.ಕೆ.ಅಯ್ಯಪ್ಪ, ಬೆಂಗಳೂರು ನಗರ ಜಂಟಿ ಸಾರಿಗೆ ಆಯುಕ್ತ ಜೆ.ಜ್ಞಾನೇಂದ್ರ ಕುಮಾರ್‌, ನಟಿ ದೀಪಿಕಾ ದಾಸ್‌, ಕ್ರಿಕೆಟಿಗ ರೋಜರ್‌ ಬಿನ್ನಿ ಸೇರಿದಂತೆ ನೂರಾರು ಶಾಲಾ ಮಕ್ಕಳು ಭಾಗವಹಿಸಿದ್ದರು.

ಶೀಘ್ರ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆ 
ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿರುವ ರಾಜ್ಯ ಸರ್ಕಾರ ರಸ್ತೆ ಸುರಕ್ಷತಾ ಪ್ರಾಧಿಕಾರ ರಚಿಸಲು ಮುಂದಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು ಹೇಳಿದ್ದಾರೆ. 

ಸಾರಿಗೆ ವ್ಯವಸ್ಥೆ ಸುಗಮವಾಗಲು ಸಾರಿಗೆ ಇಲಾಖೆ, ಲೋಕೋಪಯೋಗಿ, ಆರೋಗ್ಯ, ಪೋಲೀಸ್‌ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯಗಳ ಸಹಕಾರ ಅಗತ್ಯ ಇದೆ. ಎಲ್ಲ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸುವ ಸಂಬಂಧ ಪ್ರಾಧಿಕಾರ ರಚನೆಗೆ ಚಿಂತನೆ ನಡೆದಿದೆ ಎಂದರು. 

ಕೇರಳ ರಾಜ್ಯದಲ್ಲಿ ಇಂತಹ ಪ್ರಾಧಿಕಾರ ಈಗಾಗಲೇ ರಚನೆಯಾಗಿದ್ದು, ರಾಜ್ಯದ ಅಧಿಕಾರಿಗಳ ತಂಡ ಕೇರಳಕ್ಕೆ ಭೇಟಿ ನೀಡಿ ಪ್ರಾಧಿಕಾರದ ಕಾರ್ಯವೈಖರಿ ಬಗ್ಗೆ ವರದಿ ತಯಾರಿಸಿದ್ದಾರೆ. ರಸ್ತೆ ಸುರಕ್ಷತೆಗಾಗಿ ನಿಗದಿಯಾಗುವಂತಹ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲು ಪ್ರಾಧಿಕಾರ ರಚನೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. 

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.